ಗದಗ

ಜೆಡಿಎಸ್ಗೆ ಜನತೆ ಬೆಂಬಲ

Published On :

ಕನ್ನಡಪ್ರಭ ವಾರ್ತೆ, ನರೇಗಲ್ಲ, ಏ. 30
ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಸ್ವಜನ ಪಕ್ಷಪಾತದಿಂದ ಜನ ರೋಸಿಹೋಗಿದ್ದು, ಮೇ. 5 ರಂದು ನಡೆಯುವ ಚುನಾವಣೆಯಲ್ಲಿ ಮತದಾರರು ಜೆಡಿಎಸ್ ಬೆಂಬಲಿಸಲಿದ್ದಾರೆಂದು ರೋಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೇಮಗಿರೀಶ ಹಾವಿನಾಳ ಹೇಳಿದರು.
ಈಚೆಗೆ ಅವರು ಸಮೀಪದ ಅಬ್ಬಿಗೇರಿ ಗ್ರಾಮದಲ್ಲಿ ನಡೆದ ಪ್ರಚಾರಸಭೆ ಹಾಗೂ ವಿವಿಧ ಪಕ್ಷಗಳ ಅಭ್ಯರ್ಥಿಗಳನ್ನು ಜೆಡಿಎಸ್ಗೆ ಬರಮಾಡಿಕೊಂಡು ಮಾತನಾಡಿದರು. ಕುಮಾರಸ್ವಾಮಿಯವರು ಸಿಎಂ ಆಗಿದ್ದ ವೇಳೆಯಲ್ಲಿ ರಾಜ್ಯದ ಜನತೆಗೆ ನೀಡಿದ ಯೋಜನೆ, ಅಭಿವೃದ್ಧಿ ಕಾರ್ಯಗಳ ಪರಿಣಾಮ ರಾಜ್ಯದ ಯುವ ಶಕ್ತಿ ಕುಮಾರಸ್ವಾಮಿಯವರ ನಾಯಕತ್ವದ ಮೇಲೆ ವಿಶ್ವಾಸ ಹೊಂದಿ ಸಮಾರೋಪಾದಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಅಬ್ಬಿಗೇರಿಯ ಸಂಗಪ್ಪ ಹಳ್ಳಿ, ಸಂಗಪ್ಪ ಪಸಾರದ, ಮುತ್ತಣ್ಣ ಮಾಳಶೆಟ್ಟಿ, ಶಂಕ್ರಣ್ಣ ಮಾಳಶೆಟ್ಟಿ, ಸಿದ್ದು ಹನುಮನಾಳ, ಶಣ್ಮುಖಯ್ಯ ಹನುಮನಾಳ, ಬೈಲಪ್ಪ ಮಾಳಶೆಟ್ಟಿ, ಸುರೇಶ ಜಕರಡ್ಡಿ, ಕಳಕಪ್ಪ ಹನುಮನಾಳ ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.