ಗದಗ

ಈಶ್ವರಪ್ಪ ಬ್ಯಾಗ್ನಲ್ಲಿ ರು. 61 ಸಾವಿರ

Published On :

ಯಾದಗಿರಿ: ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಿರೀಶ ಮಟ್ಟಣ್ಣವರ್ ಪರ ಪ್ರಚಾರಕ್ಕಾಗಿ ಆಗಮಿಸಲು ಡಿಸಿಎಂ ಕೆ.ಎಸ್.ಈಶ್ವರಪ್ಪ ಬಳಸಿದ್ದ ಹೆಲಿಕಾಪ್ಟರ್ನಲ್ಲಿ ದಾಖಲೆಯಿಲ್ಲದ 61,400  ನಗದು ಪತ್ತೆಯಾಗಿದೆ. ಈ ಹಣವನ್ನು ವಶಪಡಿಸಿಕೊಂಡಿರುವ ಚುನಾವಣಾಧಿಕಾರಿಗಳು, ಈಶ್ವರಪ್ಪ ವಿರುದ್ಧ ಗುರುಮಠಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮಂಗಳವಾರ ಬೆಳಗ್ಗೆ ಈಶ್ವರಪ್ಪ ಅವರು ಹೆಲಿಕಾಪ್ಟರ್ ಮೂಲಕ ಗುರುಮಠಕಲ್ಗೆ ಬಂದಿಳಿದರು. ಆಗ ಮಜರ್ ಹುಸೇನ್ ನೇತೃತ್ವದ ಎಂಸಿಸಿ ತಂಡದ ಅಧಿಕಾರಿಗಳು ಹೆಲಿಕಾಪ್ಟರ್ ಪರಿಶೀಲಿಸಿದರು. ಅಲ್ಲಿ ಈಶ್ವರಪ್ಪ ಅವರ ಬ್ಯಾಗ್ ಪರಿಶೀಲಿಸಿದಾಗ ಅದರಲ್ಲಿ 61,400 ಪತ್ತೆಯಾಗಿದೆ.
ಈ ಬಗ್ಗೆ ಯಾವುದೇ ದಾಖಲೆ ಒದಗಿಸಲು ವಿಫಲರಾದ ಕಾರಣ ಹಣವನ್ನು ವಶಕ್ಕೆ ತೆಗೆದುಕೊಂಡ ಅಧಿಕಾರಿಗಳ ತಂಡ, ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿತು. ಈಶ್ವರಪ್ಪ ವಿರುದ್ಧ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.