ಗದಗ ಜನರ ಪ್ರೀತಿ ಎಂದಿಗೂ ಮರೆಯಲ್ಲ: ಬಿ. ಶ್ರೀರಾಮುಲು
ಗದಗ: ಗದಗ ಜಿಲ್ಲೆಯ ಜನತೆಯ ಪ್ರೀತಿಯನ್ನು ನಾನು ಎಂದಿಗೂ ಮರೆಯಲಾರೆ, ಜಿಲ್ಲೆಗೆ ಹಲವಾರು ಜನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಬಂದು ಹೋದರೂ ನನ್ನಷ್ಟು ಯಾರಿಗೂ ಆತ್ಮೀಯತೆ ತೋರಿಲ್ಲ. ಇದಕ್ಕೆ ನಾನು ಋಣಿ ಎಂದು ಶಾಸಕ ಬಿ. ಶ್ರೀರಾಮುಲು ಹೇಳಿದರು. ಅವರು ಶನಿವಾರ ರಾತ್ರಿ ನಗರದ ಜುಮ್ಮಾ ಮಸೀದಿ ಸಮೀಪದಲ್ಲಿ ಆಯೋಜಿಸಲಾಗಿದ್ದ ಇಫ್ತಾರ್ ಕೂಟದಲ್ಲಿ ಮಾತನಾಡಿದರು. ಇಲ್ಲಿನ ಜನತೆ ನನ್ನನ್ನು ತಮ್ಮ ಮನೆ ಮಗನಂತೆ ಪೋಷಿಸಿ ಬೆಳೆಸಿದ್ದಾರೆ. ಈಚೆಗೆ ಜರುಗಿದ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಅನಿಲ ಮೆಣಸಿನಕಾಯಿ ಸೋಲು ಅನುಭವಿಸಿರಬಹುದು. ಆದರೆ ಚುನಾವಣೆಯಲ್ಲಿ ಸೋಲು ಗೆಲವು ಸಾಮಾನ್ಯ. ಕಾರ್ಯಕರ್ತರು ಅದಕ್ಕೆಲ್ಲ ಗೊಂದಲಕ್ಕೊಳಗಾಗದೇ ಕೆಲಸ ಮಾಡಬೇಕು ಎಂದರು. ನಂತರ ಇಫ್ತಾರ್ ಕೂಟದಲ್ಲಿ ಪಾಲ್ಗೊಂಡ ಸದಸ್ಯರಿಗೆ ಊಟ ಬಡಿಸುವ ಮೂಲಕ ಚಾಲನೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

