ಸುದ್ದಿ ಸಂಕ್ಷೇಪ
ನಾಳೆ ರೈತರ ಪ್ರತಿಭಟನೆ
ರೋಣ: ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಪಡಿತರದಾರರಿಗೆ ಅಸಮರ್ಪಕ ಪಡಿತರ ಆಹಾರ ವಿತರಣೆ ಖಂಡಿಸಿ ಆ. 5ರಂದು ಹಿರೇಹಾಳ ಗ್ರಾಮದಲ್ಲಿ ರಸ್ತೆ ತಡೆ ನಡೆಸುವುದರ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ರೈತ ಸಂಘದ ಉಪಾಧ್ಯಕ್ಷ ಎಲ್.ಎಸ್. ಗೌಡರ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಹಿರೇಹಾಳ ಗ್ರಾಮದಲ್ಲಿ ಒಟ್ಟು 462 ಪಡಿತರ ಕಾರ್ಡಗಳಿದ್ದು, ಅದರಲ್ಲಿ 120 ಕಾರ್ಡ್ಗಳನ್ನು ರದ್ದು ಮಾಡಲಾಗಿದೆ. ತಾಲೂಕು ಮಟ್ಟದ ಅಧಿಕಾರಿಗಳನ್ನು ಕೇಳಿದರೆ ಸಬೂಬು ಉತ್ತರ ನೀಡುತ್ತಾರೆಯೇ ಹೊರತು ಪರಿಹಾರ ಕ್ರಮಕ್ಕೆ ಮುಂದಾಗುತ್ತಿಲ್ಲ. ಇದನ್ನು ವಿರೋಧಿಸಿ ಆ. 5ರಂದು ಹಿರೇಹಾಳದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಉಪ ಚುನಾವಣೆ ವೇಳಾಪಟ್ಟಿ
ಗದಗ: ಭಾರತ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆಯ ಅನುಗುಣವಾಗಿ ಧಾರವಾಡ ಸ್ಥಳೀಯ ಪ್ರಾಧಿಕಾರಿಗಳ ಕ್ಷೇತ್ರಕ್ಕೆ ಉಪಚುನಾವಣೆ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಆ. 5ರ ವರೆಗೆ ನಾಮಪತ್ರಗಳನ್ನು ಬೆಳಗ್ಗೆ 11ರಿಂದ ಮಧ್ಯಾಹ್ನ 3ರ ವರೆಗೆ ಚುನಾವಣಾಧಿಕಾರಿ ಕಚೇರಿ (ಧಾರವಾಡ ಜಿಲ್ಲಾಧಿಕಾರಿ ಕಚೇರಿ) ಇಲ್ಲಿ ಸಲ್ಲಿಸಬಹುದಾಗಿದೆ. ನಾಮಪತ್ರಗಳ ಪರಿಶೀಲನೆ ಆ. 6, ನಾಮಪತ್ರ ವಾಪಸ್ಗೆ ಆ. 8ರಂದು ಕೊನೆಯ ದಿನ. ಅವಶ್ಯವಿದ್ದಲ್ಲಿ ಮತದಾನವನ್ನು ಆ. 22ರಂದು ಬೆಳಗ್ಗೆ 8ರಿಂದ 4ರ ವರೆಗೆ ನಡೆಸಲಾಗುವುದು. ಎಲ್ಲ ಚುನಾಯಿತ ಸದಸ್ಯರು ಅಂದರೆ ಗ್ರಾಪಂ, ತಾಪಂ, ಜಿಪಂ ಮತ್ತು ನಗರಸಭೆ, ಪುರಸಭೆ, ಪಪಂ ಅದರಂತೆ ನಾಮನಿರ್ದೇಶಿತ ಶಾಸಕರು ಹಾಗೂ ಸಂಸದರು ಇವರಿಗೆ ಮತ ಚಲಾಯಿಸುವ ಅಧಿಕಾರ ಇರುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಜಿಲ್ಲಾಧಿಕಾರಿ ಕಾರ್ಯಾಲಯ, ಗದಗ ಚುನಾವಣೆ ಶಾಖೆ ದೂರವಾಣಿ 08372-220180 ಇಲ್ಲಿಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಗದಗನ ಅಪರ ಡಿಸಿ, ಧಾರವಾಡ ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರ ಸಹಾಯಕ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಹಿರೇನಿಂಗನಗೌಡ್ರ ಆಯ್ಕೆ
ನರಗುಂದ: ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಎ.ಸಿ. ಹಿರೇನಿಂಗನಗೌಡ್ರ ಅವರು ಈಚೆಗೆ ನಡೆದ ಚುನಾವಣೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದು, ತಾಲೂಕಿನ ಪ್ರೌಢಶಾಲಾ ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

