ಆಸ್ಪತ್ರೆಗೆ ಶಾಸಕ ದೊಡ್ಡಮನಿ ಭೇಟಿ
ಮುಂಡರಗಿ: ಪುರಸಭೆ ವ್ಯಾಪ್ತಿಯಲ್ಲಿ ಅಸ್ವಚ್ಛತೆ ಹಾಗೂ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಸ್ವಚ್ಛತೆಯ ಕೊರತೆ ಕುರಿತು 'ಕನ್ನಡಪ್ರಭ' ಈಚೆಗೆ ಸವಿಸ್ತಾರ ವರದಿ ಪ್ರಕಟಿಸಿತ್ತು. ವರದಿಗೆ ಸ್ಪಂದಿಸಿರುವ ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ಶನಿವಾರ ಆಸ್ಪತ್ರೆಗೆ ಭೇಟಿ ನೀಡಿ ವೀಕ್ಷಿಸಿದರು.
ಆಸ್ಪತ್ರೆಯ ಆವರಣದಲ್ಲಿಯೇ ಆಸ್ಪತ್ರೆಯ ನೀರು, ಮುಳ್ಳುಕಂಟಿ, ಡ್ರೈನೇಜ್ ಪೈಪ್ ಸೋರುವುದು, ಎಳೆನೀರು ಕುಡಿದು ಕಾಯಿಗಳನ್ನು ಆವರಣದಲ್ಲಿಯೇ ಬಿಸಾಡಿರುವುದು ಇತರ ಅವ್ಯವಸ್ಥೆಯನ್ನು ವೀಕ್ಷಿಸಿ ಹತ್ತು ದಿನಗಳೊಳಗೆ ಸಂಪೂರ್ಣವಾಗಿ ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ಎಚ್ಚರಿಸಿದರು. ತಾಲೂಕು ವೈದ್ಯಾಧಿಕಾರಿ ಸಾರ್ವಜನಿಕರಿಂದ ಯಾವುದೇ ದೂರುಗಳು ಬರದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಮುಂಡರಗಿ ತಾಲೂಕು ಕೇಂದ್ರವಾಗಿರುವುದರಿಂದ ಹಡಗಲಿ, ಕೊಪ್ಪಳ ತಾಲೂಕಿನ ಅನೇಕ ರೋಗಿಗಳು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಬರುವುದರಿಂದ ಈ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇದೆ. ಕೂಡಲೇ ವೈದ್ಯರನ್ನು ನೇಮಿಸಬೇಕೆಂದು ರೋಗಿಗಳು ಒತ್ತಾಯಿಸಿದರು. ಶಾಸಕ ರಾಮಕೃಷ್ಣ ದೊಡ್ಡಮನಿ ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ಮಾತನಾಡಿ, ಶೀಘ್ರ ಪರಿಹಾರ ನೀಡುವುದಾಗಿ ಹೇಳಿದರು. ಆಸ್ಪತ್ರೆಯಲ್ಲಿ ವಾಂತಿ-ಭೇದಿ ಪ್ರಕರಣಗಳು ದಾಖಲಾಗುತ್ತಿದ್ದು, ದಾಖಲಾದ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಆಸ್ಪತ್ರೆಯ ಸಿಬ್ಬಂದಿ ರೋಗಿಗಳ ಬಗ್ಗೆ ವಿಶೇಷ ಕಾಳಜಿ ವಹಿಬೇಕು ಎಂದರು. ಮುಖ್ಯಾಧಿಕಾರಿ ಆರ್.ಎಂ. ಪಾಟೀಲ, ಪುರಸಭೆಯ ಸದಸ್ಯ ಲಿಂಗರಾಜಗೌಡ ಪಾಟೀಲ, ರಾಘವೇಂದ್ರ ಕುರಿಯವರ, ಫಕ್ರುಸಾಬ್ ಹಾರೋಗೇರಿ, ವೀರೇಶ ಸಜ್ಜನರ, ಬಸವರಾಜ ರಾಮೇನಹಳ್ಳಿ, ಅಬ್ದುಲ್ ಖುರೇಶಿ, ನಬಿಸಾಬ ಕೆಲೂರ, ಧ್ರುವಕುಮಾರ ಹೊಸಮನಿ, ರಾಮಣ್ಣ ಬಳ್ಳಾರಿ, ಎ.ಪಿ. ದಂಡಿನ, ರಾಮು ಭಜಂತ್ರಿ, ಪಾಲಾಕ್ಷಿ ಗಣದಿನ್ನಿ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

