ಉಪನ್ಯಾಸಕರ ವೇತನ ಬಿಡುಗಡೆಗೊಳಿಸಿ
ಗದಗ: ಅನುದಾನಿತ ಪಪೂ ಸಿಬ್ಬಂದಿಗೆ 4 ತಿಂಗಳಿಂದ ವೇತನ ಬಿಡುಗಡೆಯಾಗಿಲ್ಲ. ಕೂಡಲೇ ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ಅವರು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಶಿಕ್ಷಣ ಇಲಾಖೆಯ ವ್ಯಾಪ್ತಿಯ ಸಿಬ್ಬಂದಿಗೆ ಪ್ರತಿ ತಿಂಗಳು 5ನೇ ತಾರೀಖಿನೊಳಗಾಗಿ ಸಂಬಳ ಬಟವಡೆ ಮಾಡಬೇಕೆಂಬ ನಿಯಮವನ್ನು ಸರ್ಕಾರ ರೂಪಿಸಿದ್ದು, ಅದು ಸರಿಯಾಗಿ ಕಾರ್ಯಗತವಾಗುತ್ತಿಲ್ಲ ಎಂಬುದನ್ನು ಅನೇಕಸಲ ಇಲಾಖೆಯ ಕಾರ್ಯದರ್ಶಿಗಳ ಗಮನಕ್ಕೆ ತರಲಾಗಿದೆ.
ಯೋಜನಾ ಶೀರ್ಷಿಕೆಯಡಿ ಕೆಲಸ ಮಾಡುತ್ತಿರುವ ಪಪೂ ಶಿಕ್ಷಣ ಇಲಾಖೆಯ ಸಿಬ್ಬಂದಿಗೆ ಪ್ರತಿ ತಿಂಗಳು ಸಂಬಳ ಬಟವಡೆಗೆ ಇಲಾಖೆಯು ಅನುದಾನವನ್ನು ಬಿಡುಗಡೆ ಮಾಡುವುದಿಲ್ಲ. ಆಗ ನಾನೇ ಹಲವಾರು ಸಲ ಇಲಾಖೆಗೆ ಪತ್ರ ಬರೆದಾಗ ಅನುದಾನ ಬಿಡುಗಡೆ ಮಾಡಿದ ಉದಾಹರಣೆಗಳು ಸಾಕಷ್ಟಿವೆ.
ಪ್ರತಿ ತಿಂಗಳು ಸಂಬಳ ಬಿಡುಗಡೆಗೆ ಸಿಬ್ಬಂದಿ ವರ್ಗದವರು ಜನಪ್ರತಿನಿಧಿಗಳನ್ನು ಸಂಪರ್ಕಿಸುವ ಕೆಟ್ಟ ವ್ಯವಸ್ಥೆ ರೂಪಗೊಂಡಿದೆ. ಸಚಿವಾಲಯದ ಯೋಜನಾ ಘಟಕವು ಆರ್ಥಿಕ ಇಲಾಖೆಯೊಂದಿಗೆ ಮುಂಗಡವಾಗಿ ಸಮಾಲೋಚಿಸಿ ಅನುದಾನ ಬಿಡುಗಡೆಗೆ ವ್ಯವಸ್ಥೆ ಮಾಡದಿರುವುದೇ ಇದಕ್ಕೆ ಕಾರಣವೆಂಬುದನ್ನು ಹಲವಾರು ಬಾರಿ ಸಂಬಂಧಿಸಿದವರ ಗಮನಕ್ಕೆ ನಾನು ಲಿಖಿತವಾಗಿ ಗಮನಕ್ಕೆ ತಂದಿದ್ದೇನೆ. ಜಿಲ್ಲೆಯ ಪಪೂ ಶಿಕ್ಷಣ ಇಲಾಖೆಯ ಯೋಜನಾ ಶೀರ್ಷಿಕೆಯಡಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಏಪ್ರಿಲ್ 2013ರಿಂದ ಸಂಬಳವಾಗಿಲ್ಲ. ಅದೇ ರೀತಿ ಧಾರವಾಡ ಜಿಲ್ಲೆಯ ಸಿಬ್ಬಂದಿಗೆ ಮೇ 2013ರ ವರೆಗೆ ಮಾತ್ರ ವೇತನ ಪಾವತಿಯಾಗಿರುವುದನ್ನು ಶಿಕ್ಷಣ ಸಚಿವರ ಗಮನಕ್ಕೆ ತರಲಾಗಿದೆ. ಈಗಿರುವ ವ್ಯವಸ್ಥೆ ಪರಿಶೀಲಿಸಿ ಯೋಜನೆ, ಯೋಜನೇತರ ಶೀರ್ಷಿಕೆಯಡಿ ಕೆಲಸ ಮಾಡುವ ಸಿಬ್ಬಂದಿಗೆ ಹಿಂದಿನ ವೇತನಕ್ಕೆ ಅನುದಾನ ಬಿಡುಗಡೆ ಮಾಡುವುದರೊಂದಿಗೆ ಬರುವ ದಿನಗಳಲ್ಲಿ ಈ ಸಿಬ್ಬಂದಿಗೆ ಪ್ರತಿ ತಿಂಗಳು 5ನೇ ತಾರೀಖಿನೊಳಗಾಗಿ ವೇತನ ಬಟವಡೆಗೆ ಅನುಕೂಲವಾಗುವಂತೆ ಆಡಳಿತಾತ್ಮಕ ಬದಲಾವಣೆಗಳನ್ನು ತರಲು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

