ವಿದ್ಯಾರ್ಥಿಗಳಿಗೆ ನಿರಂತರ ಪ್ರಯತ್ನ ಅಗತ್ಯ: ಶರಣಪ್ಪ
ಗದಗ: ವಿದ್ಯಾರ್ಥಿಗಳಲ್ಲಿ ನಿರಂತರ ಪ್ರಯತ್ನವೊಂದಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದಾಗಿದ್ದು, ವಿದ್ಯಾರ್ಥಿಗಳು ಕ್ರಿಯಾಚಟುವಟಿಕೆ ಹೊಂದಿ ಕಾಲೇಜಿನ ಶ್ರೆಯೋಭಿವೃದ್ಧಿಗೆ ಶ್ರಮಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಸ್.ಡಿ. ಶರಣಪ್ಪ ಹೇಳಿದರು.
ನಗರದ ಜ. ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಜ. ತೋಂಟದಾರ್ಯ ವಿದ್ಯಾಪೀಠದ ಬಸವೇಶ್ವರ ಕಲಾ-ವಾಣಿಜ್ಯ ಕಾಲೇಜಿನ ವಿದ್ಯಾರ್ಥಿ ಒಕ್ಕೂಟದ ಪಠ್ಯೇತರ ಚಟುವಟಿಕೆ ಉದ್ಘಾಟಿಸಿ ಮಾತನಾಡಿದರು.
ಇಂದು ವಿದ್ಯಾರ್ಥಿಗಳು ಕಲಿಕೆಯಲ್ಲಿ ನಿರಂತರ ಶ್ರಮವಹಿಸದೇ ಇರುವುದರಿಂದ ಮುಂದಿನ ದಿನಗಳಲ್ಲಿ ಕಲಿಕೆಯಲ್ಲಿ ಹಿನ್ನಡೆಯಾಗುವ ಸಂಭವವಿದೆ. ವಿದ್ಯಾರ್ಥಿಗಳು ನಿರಂತರ ಕಲಿಕೆಯಲ್ಲಿ ಆಸಕ್ತಿ ಹೊಂದಬೇಕು. ಖಿನ್ನತೆಗೆ ಒಳಗಾಗದೇ ಓದಿಗೆ ಒತ್ತು ನೀಡಬೇಕು ಎಂದರು.
ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿ ಚೇರ್‌ಮನ್ ಶ್ರೀಶೈಲಪ್ಪ ಬಿದರೂರ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಬದುಕು ಕಟ್ಟಿಕೊಳ್ಳುವ ಮೂಲಕ ನಾಡಿನ ವ್ಯವಸ್ಥೆ ಕಟ್ಟುವ ಕೆಲಸ ಮಾಡಬೇಕು ಎಂದರು.
ಇದೇ ಸಂದರ್ಭ ಸಾಂಸ್ಕೃತಿಕ ಕ್ರೀಡಾ ಸಂಘದ ಕಾರ್ಯದರ್ಶಿಯಾಗಿ ಮೇಘಾ ಗಾಢಗೋಳಿ, ಕ್ರೀಡಾಸಂಘದ ಕಾರ್ಯದರ್ಶಿಗಳಾಗಿ ಆನಂದ ಸಿದ್ಧನಗೌಡ್ರ, ಚರ್ಚಾಕೂಟದ ಕಾರ್ಯದರ್ಶಿಯಾಗಿ ಗಿರಿಜಾ ಕೊಟೆಣ್ಣವರ, ಕನ್ನಡ ಸಂಘದ ಕಾರ್ಯದರ್ಶಿಯಾಗಿ ಅಶ್ಪಕಅಲಿ ಪಾಟೀಲ, ವಾಣಿಜ್ಯ ಸಂಘದ ಕಾರ್ಯದರ್ಶಿಯಾಗಿ ಶಿವರಾಜ ಹೊನ್ನಪ್ಪನವರ, ಮಹಿಳಾ ಸಂಘದ ಕಾರ್ಯದರ್ಶಿಯಾಗಿ ಪ್ರತಿಭಾ ಹಿರೇಮಠ, ಸಮಾಜ ವಿಜ್ಞಾನ ಸಂಘದ ಕಾರ್ಯದರ್ಶಿಯಾಗಿ ಸಿದ್ಧಲಿಂಗೇಶ ಕಣಗಿನಹಾಳ ಅವರು ಪ್ರಮಾಣ ವಚನ ಸ್ವೀಕರಿಸಿದರು. ಕಾಲೇಜಿನ ಪ್ರಧಾನ ಕಾರ್ಯದರ್ಶಿ ಅಂಬರೀಶ್ ಗುಡ್ಡದ, ಪ್ರೊ. ಕೆ.ವಿ.ಬಾಗಲಕೋಟಿ ಇದ್ದರು. ಐಶ್ವರ್ಯ ಅಗಸಿಮನಿ, ಸಂಗಡಿಗರು ಪ್ರಾರ್ಥಿಸಿದರು. ಪ್ರಾಚಾರ್ಯ ಬಿ.ಬಿ. ಗೌಡರ ಸ್ವಾಗತಿಸಿದರು. ಪ್ರೊ. ಸಿ.ಎಂ. ಕಾಳನ್ನವರ ನಿರೂಪಿಸಿದರು. ಪ್ರೊ. ಎಚ್.ಎಚ್. ಕುರಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

