ಮಮತಾ ಬ್ಯಾನರ್ಜಿ ಪ್ರತಿಕೃತಿ ದಹಿಸಿ ಪ್ರತಿಭಟನೆ
ಗಜೇಂದ್ರಗಡ: ಪಶ್ಚಿಮ ಬಂಗಾಲದ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಸಿಪಿಐ (ಎಂ)ಕಾರ್ಯಕರ್ತರ ಮೇಲೆ ನಡೆದಿರುವ ಹಲ್ಲೆ ಖಂಡಿಸಿ ಬುಧವಾರ ಸ್ಥಳೀಯ ಸಿಪಿಐ(ಎಂ) ಕಾರ್ಯಕರ್ತರು ಪಟ್ಟಣದ ಕಾಲಕಾಲೇಶ್ವರ ವೃತ್ತದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ಪುರಸಭೆ ಸದಸ್ಯ ಎಂ.ಎಸ್. ಹಡಪದ ಮಾತನಾಡಿ, ಪಶ್ಚಿಮ ಬಂಗಾಲದ ಪಂಚಾಯತ್ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಮತಪೆಟ್ಟಿಗೆ ವಶಪಡಿಸಿ ಕೊಂಡು ನಕಲಿ ಮತದಾನ ಮಾಡುವ ಮೂಲಕ ಪ್ರಜಾತಂತ್ರ ವ್ಯವಸ್ಥೆ ಬುಡಮೇಲಾಗಿಸಿದ್ದಾರೆ. ಜು. 11ರಂದು ನಡೆದ ಮೊದಲ ಹಂತದ ಚುನಾವಣೆಯಲ್ಲಿ ಪಶ್ಚಿಮ ಬಂಗಾಲ ಮಿಡ್ನಾಪುರ ಜಿಲ್ಲೆಯ 260 ಮತಕಟ್ಟೆಗಳನ್ನು ವಶಪಡಿಸಿಕೊಂಡು ಮತದಾರರನ್ನು ಮತಕಟ್ಟೆಗೆ ಬಾರದಂತೆ ಬೆದರಿಕೆ ಹಾಕಿ ವಿರೋಧ ಪಕ್ಷದ ಅಭ್ಯರ್ಥಿಗಳ ಹಾಗೂ ಮತಕಟ್ಟೆ ಏಜೆಂಟರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿದ್ದಾರೆ ಎಂದು ಅಪಾದಿಸಿದರು. ನಗರ ಸಮಿತಿ ಕಾರ್ಯದರ್ಶಿ ಮಾರುತಿ ಚಿಟಗಿ, ಬಿ.ಎಸ್. ಶೀಲವಂತರ, ಬಾಲು ರಾಠೋಡ ಮಾತನಾಡಿದರು. ಪ್ರತಿಭಟನೆಯಲ್ಲಿ ಶಿವು ಚವ್ವಾಣ, ಎಚ್ಚರಪ್ಪ ಬಡಿಗೇರ, ಮೆಹಬೂಬ ಹವಾಲ್ದಾರ, ಮಾನವ್ವ ರಾಠೋಡ, ಫೈಯಾಜ್ ತೋಟದ, ರಜಾಕ ಗೋಡೆಕಾರ, ಸಕ್ರಪ್ಪ ಮಾಳೊತ್ತರ, ಮುತಣ್ಣ ರೇಣಿ, ಬಾಳಪ್ಪ ತಿರಕೋಜಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

