ಮಲ್ಲಸಮುದ್ರ: ಶ್ರಾವಣ ಮಾಸದ ಕಾರ್ಯಕ್ರಮ
ಗದಗ: ತಾಲೂಕಿನ ಮಲ್ಲಸಮುದ್ರ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ತಿಂಗಳ ಪರ್ಯಂತರ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ದೇವಸ್ಥಾನದ ಜೀರ್ಣೋದ್ಧಾರ ಸೇವಾ ಸಮಿತಿ ಆಯೋಜಿಸಿದೆ. ದೇವಸ್ಥಾನದಲ್ಲಿ ಪ್ರತಿದಿನ ಬೆಳಗ್ಗೆ ರುದ್ರಾಭಿಷೇಕ, ವಿಶೇಷ ಪೂಜೆ ನಡೆಯಲಿವೆ. 18ನೇ ಶಿವಾನುಭವ ಕಾರ್ಯಕ್ರಮ ಆ. 12ರಂದು ಸಂಜೆ 6.30 ಗಂಟೆಗೆ ನಡೆಯಲಿದೆ. ಕಾಶಪ್ಪ ನಿಂಗಪ್ಪ ಹುಗ್ಗಿ ಅಧ್ಯಕ್ಷತೆ ವಹಿಸುವರು. ಗದುಗಿನ ಜೆ.ಟಿ. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಎನ್.ಎಸ್. ಪಾಟೀಲ್ ಉಪನ್ಯಾಸ ನೀಡಲಿದ್ದಾರೆ. ಡಾ. ಸತೀಶ ಹೊಂಬಾಳಿ ಅತಿಥಿಗಳಾಗಿ ಆಗಮಿಸಲಿದ್ದಾರೆ. ಆ. 19ರಂದು ಸಂಜೆ 6.30 ಗಂಟೆಗೆ 19ನೇ ಶಿವಾನುಭವ ಕಾರ್ಯಕ್ರಮ ಜರುಗಲಿದೆ. ಗ್ರಾಮದ ಹಿರಿಯರಾದ ಮಾಧವರಾವ್ ನಾರಪ್ಪನವರ ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಉಪನ್ಯಾಸಕ ಆರ್.ಎಂ. ಕಲ್ಲನಗೌಡರ ಉಪನ್ಯಾಸ ನೀಡಲಿದ್ದಾರೆ. ಗದಗ ಜಿಲ್ಲಾ ಟ್ಯಾಕ್ಸ್ ವಕೀಲರ ಸಂಘದ ಅಧ್ಯಕ್ಷ ವೀರೇಶ ಎಸ್. ಕೂಗು ಅತಿಥಿಗಳಾಗಿ ಆಗಮಿಸಲಿದ್ದಾರೆ. ಆ. 26ರಂದು ಸಂಜೆ 6.30 ಗಂಟೆಗೆ 20ನೇ ಶಿವಾನುಭವ ಕಾರ್ಯಕ್ರಮ ನಡೆಯಲಿದೆ. ಕಪ್ಪತ್ತಪ್ಪ ಎ. ಹಳ್ಳಿಕೇರಿ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ರಾಜಶೇಖರ ದಾನರಡ್ಡಿ ಉಪನ್ಯಾಸ ನೀಡಲಿದ್ದಾರೆ. ಡಾ. ಬಿ.ಜಿ. ಪಾಟೀಲ್ ಅತಿಥಿಗಳಾಗಿ ಆಗಮಿಸಿದ್ದಾರೆ. ಸೆ. 2ರಂದು ಸಂಜೆ 6.30 ಗಂಟೆಗೆ 21ನೇ ಶಿವಾನುಭವ ನಡೆಯಲಿದೆ. ನಿವೃತ್ತ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ. ಡಿ.ಸಿ. ಗಡ್ಡಿ ಅಧ್ಯಕ್ಷತೆ ವಹಿಸುವರು. ಹುಲಕೋಟಿ ಕೃಷಿ ವಿಜ್ಞಾನ ಕೇಂದ್ರದ ಸುರೇಶಗೌಡ ಪಾಟೀಲ್ ಉಪನ್ಯಾಸ ನೀಡಲಿದ್ದಾರೆ. ಯೋಗ ಶಿಕ್ಷಕ ಎಸ್.ಎಸ್. ಹಿರೇಮಠ ಅತಿಥಿಗಳಾಗಿ ಆಗಮಿಸಲಿದ್ದಾರೆ. ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವೀರಪ್ಪ ರುದ್ರಪ್ಪ ಅಕ್ಕಿ, ಕಾರ್ಯದರ್ಶಿ ಡಾ. ಕಲ್ಲೇಶ ಡಿ. ಮೂಸುಳಿನ, ರುದ್ರಯ್ಯ ಬರದೂರ ಉಪಸ್ಥಿತರಿರುವರು ಎಂದು ಸಮಿತಿ ಸದಸ್ಯ ಮಲ್ಲಿಕಾರ್ಜುನ ಶೀಲವಂತರ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

