ಗದಗ

ಗದಗ ಛಾಯಾಗ್ರಾಹಕರ ಸಂಘಕ್ಕೆ ಗುರಿಕಾರ ಆಯ್ಕೆ

Published On :

ಗದಗ: ಗದಗ ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಹಾಗೂ ವಿವಿಧೋದ್ದೇಶಗಳ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಗರದ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಎಸ್.ಎಸ್. ಗೌಡರ, ಗೌರವಾಧ್ಯಕ್ಷ ಬಿ. ಬಾಬು, ಉಪಾಧ್ಯಕ್ಷ ದಿಲೀಪ ಮುಂಡರಗಿ, ಕಾರ್ಯದರ್ಶಿ ಶಂಕರ ಗುರಿಕಾರ, ಸಹಕಾರ್ಯದರ್ಶಿ ಮಹೇಶ ಬಡಿಗೇರ, ಖಜಾಂಚಿ ವಾದಿರಾಜ ಕುಲಕರ್ಣಿ, ಸಹಖಜಾಂಚಿ ಹನುಮಂತಸಾ ಮಿಸ್ಕಿನ್, ಸಂಘಟನಾ ಕಾರ್ಯದರ್ಶಿ ಜಲಾಶಂಕರ ಶಿದ್ಲಿಂಗ್, ಸಹಸಂಘಟನಾ ಕಾರ್ಯದರ್ಶಿ ಸಿ.ಎಸ್. ದೇವರಮನಿ ಹಾಗೂ ನಿರ್ದೇಶಕರಾಗಿ ಆತ್ಮಾನಂದ ಜುಜಾರೆ, ಸುನೀಲ ನಾಗಠಾಣ, ಭಗೀರಥ ಮಲಜಿ, ಕಾಶೀನಾಥಸಾ ಕಲಬುರ್ಗಿ, ವಿರೂಪಾಕ್ಷ ಅರಳಿ, ಶರಣಪ್ಪ ಮಡಿವಾಳರ, ನಾಗಭೂಷಣ ಹವಳದ, ವಿನಯ ಮುಂಡರಗಿ, ಶಂಕರ ವಡ್ಡಿನ, ಮಂಜುನಾಥಸಾ ಕಬಾಡಿ, ಬಿ.ಎ. ಪಲ್ಲೇದ, ಮಂಜುನಾಥ ಲಕ್ಷೇಟ್ಟಿ ಆಯ್ಕೆಯಾಗಿದ್ದಾರೆ. ಸಭೆಯಲ್ಲಿ ಜಿಲ್ಲೆ, ತಾಲೂಕು ಛಾಯಾಗ್ರಾಹಕರು ಪಾಲ್ಗೊಂಡಿದ್ದರು.
ಇಂದು 2132ನೇ ಶಿವಾನುಭವ
ಗದಗ: ನಗರದ ಜ. ತೋಂಟದಾರ್ಯ ಮಠದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘ, ಎಸ್.ಎಸ್. ಪಾಟೀಲ ಪ್ರತಿಷ್ಠಾನ ಕಲಕೇರಿ 2132ನೇ ಶಿವಾನುಭವ ಹಾಗೂ ಮಾಜಿ ಸಚಿವ ಎಸ್.ಎಸ್. ಪಾಟೀಲರ 79ನೇ ಜನ್ಮದಿನಾಚರಣೆ ಹಾಗೂ ಮುಂಡರಗಿ ನಿಮಾತೃಗಳಲ್ಲಿ ಒಬ್ಬರಾದ ಮುದಕನಗೌಡ ಪಾಟೀಲರ 43ನೇ ಪುಣ್ಯತಿಥಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಉತ್ತರಾಖಂಡ ಜಲಪ್ರಳಯ ಪರಿಹಾರ ನಿಧಿಗೆ ಲಿಂಗಾಯತ ಪ್ರಗತಿಶೀಲ ಸಂಘದಿಂದ ಸಂಗ್ರಹಿಸಿದ ರು. 2 ಲಕ್ಷ ಸಮರ್ಪಣಾ ಕಾರ್ಯಕ್ರಮ ಆ. 12ರ ಸಂಜೆ 7.30ಕ್ಕೆ ನಡೆಯಲಿದೆ.  ಸಾನ್ನಿಧ್ಯವನ್ನು ಜ. ತೋಂಟದ ಡಾ. ಸಿದ್ಧಲಿಂಗ ಶ್ರೀಗಳು ವಹಿಸುವರು. ಅತಿಥಿಗಳಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಶಾಸಕ ಜಿ.ಎಸ್. ಪಾಟೀಲ, ರಾಮಕೃಷ್ಣ ದೊಡ್ಡಮನಿ, ಬಿ.ಆರ್. ಯಾವಗಲ್, ಮಾಜಿ ಶಾಸಕ ಡಿ.ಆರ್. ಪಾಟೀಲ ಆಗಮಿಸುವರು. ಎಂ.ಎ. ಹಂಚಿನಾಳ ಅವರಿಂದ ಬಸವ ವಚನಾಮೃತ ಉಪನ್ಯಾಸ ಜರುಗಲಿದೆ. ಎಸ್.ಎಸ್. ಪಾಟೀಲ ಪ್ರತಿಷ್ಠಾನ ವತಿಯಿಂದ ಗದಗ ಜಿಲ್ಲೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ  ಅತಿ ಹೆಚ್ಚು ಶೇ. 92 ಅಂಕ ಗಳಿಸಿದ ಪರಿಶಿಷ್ಟ ಜಾತಿಯ ಸನ್ಮತಿ ಘೋಡಕೆ, ಜಿ.ಓ. ಶಹಾ ಹಾಗೂ ಸಾಮಾನ್ಯ ವಿಭಾಗದಲ್ಲಿ ಶೇ. 98.8 ಅಂಕ ಗಳಿಸಿದ ಸುಮತಿ ಗೌರಿ ಇವರಿಗೆ ಪ್ರತಿಭಾ ಪುರಸ್ಕಾರ ಹಾಗೂ ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯಕ್ಕೆ ಚೆಕ್ ವಿತರಣೆ ನಡೆಯುವುದು ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ: ದಾನರಡ್ಡಿ
ಹೊಳೆಆಲೂರ: ವಿದ್ಯಾರ್ಥಿಗಳ ದೈಹಿಕ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆ ಸಹಕಾರಿಯಾಗಿದ್ದು, ಪ್ರತಿಯೊಬ್ಬರೂ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತೆ ಗದಗನ ಪಿಪಿಜಿ ಮಹಾವಿದ್ಯಾಲಯದ ಡಾ. ರಾಜಶೇಖರ ದಾನರಡ್ಡಿ ಹೇಳಿದರು. ಈಚೆಗೆ ಅವರು ಸ್ಥಳೀಯ ಕಲ್ಮೇಶ್ವರ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ 2013-14ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ವರ್ಷದ ಬಿಎ, ಬಿಕಾಂ, ಬಿಎಸ್‌ಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿ ಜೀವನ ಅಮೂಲ್ಯವಾಗಿದ್ದು, ಬದುಕನ್ನು ಕಟ್ಟಿಕೊಳ್ಳಲು ಉತ್ತಮ ಹಂತವೇ ಕಾಲೇಜು ಶಿಕ್ಷಣವಾಗಿದೆ. ಈ ಹಂತದಲ್ಲಿ ವಿದ್ಯಾರ್ಥಿಗಳು ಆತ್ಮವಿಶ್ವಾಸ, ಧೈರ್ಯ ಹಾಗೂ ಸ್ಪರ್ಧಾತ್ಮಕ ಗುಣಗಳಿಂದ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿ ಉತ್ತಮ ವ್ಯಕ್ತಿತ್ವವನ್ನು ನಿರ್ಮಾಣ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಚನ್ನಪ್ಪ ಬೀರನೂರ ಮಾತನಾಡಿದರು. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ವಿ.ಎಲ್. ಬದಾಮಿ, ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಡಾ.ಎಂ. ಕಡಪಟ್ಟಿ ಮುಂತಾದವರು ಉಪಸ್ಥಿತರಿದ್ದರು. ಗೀತಾ ಹಡಪದ ಪ್ರಾರ್ಥಿಸಿದರು. ಪ್ರಾಚಾರ್ಯ ಎಸ್.ಎಸ್.ಪಟ್ಟಣಶೆಟ್ಟಿ ಸ್ವಾಗತಿಸಿದರು. ಎಸ್.ಡಿ. ಪಾಟೀಲ ನಿರೂಪಿಸಿದರು. ಮಹಾವಿದ್ಯಾಲಯದ ಪ್ರಧಾನ ಕಾರ್ಯದರ್ಶಿ ಎನ್.ಎಂ. ನೀಲಗುಂದ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.