ಇಂದು ನರಗುಂದಕ್ಕೆ ಜಗದೀಶ ಶೆಟ್ಟರ್
ನರಗುಂದ: ವಿಧಾನಪರಿಷತ್ ಉಪ ಚುನಾವಣೆ ಪ್ರಚಾರರ್ಥವಾಗಿ ಆ. 13ರ ಮಂಗಳವಾರ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಮಧ್ಯಾಹ್ನ 1 ಗಂಟೆಗೆ ಬಿಜೆಪಿ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ. ಸಭಗೆ ಮಾಜಿ ಸಿಎಂ ಜಗದೀಶ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ಪ್ರಲ್ಹಾದ ಜೋಶಿ, ಮಾಜಿ ಸಚಿವ ಸಿ.ಸಿ. ಪಾಟೀಲ, ಬಸವರಾಜ ಬೊಮ್ಮಾಯಿ, ಕಳಕಪ್ಪ ಬಂಡಿ, ಗೋವಿಂದ ಕಾರಜೋಳ, ಜಿಪಂ ಅಧ್ಯಕ್ಷ ಎಂ.ಎಸ್. ಪಾಟೀಲ, ತಾಪಂ ಅಧ್ಯಕ್ಷ ಗುರಪ್ಪ ಆದಪ್ಪನವರು ಭಾಗವಹಿಸುವರು ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
ಇಂದು ಪ್ರಣವ ಧ್ವಜ ಆರೋಹಣ
ನರಗುಂದ: ಪಟ್ಟಣದ ಪುಣ್ಯಾರಣ್ಯ ಪತ್ರಿವನ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಆ. 13ರಂದು ಮಂಗಳವಾರ ಮಠದ ಸಿದ್ಧವೀರ ಶ್ರೀಗಳ ನೇತೃತ್ವದಲ್ಲಿ ಪ್ರಣವ ಧ್ವಜಾರೋಹಣ ನಡೆಯಲಿದೆ. ನಂತರ 7 ದಿನಗಳವರೆಗೆ ನಿರಂತರ ಪ್ರವಚನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.
ಇಂದು ರೋಣಕ್ಕೆ ಸಚಿವ ಎಚ್ಕೆ ಭೇಟಿ
ರೋಣ: ವಿಧಾನಪರಿಷತ್ ಉಪ ಚುನಾವಣೆ ಪ್ರಚಾರಾರ್ಥ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಆ. 13ರಂದು ಮಂಗಳವಾರ ಬೆಳಗ್ಗೆ 10ಕ್ಕೆ ರೋಣ ಪಟ್ಟಣದ ಮಲ್ಲಿಕಾರ್ಜುನ ಚಿತ್ರ ಮಂದಿರಕ್ಕೆ ಆಗಮಿಸುವರು. ಸಭೆಯಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಿ.ಎಸ್. ಗಡ್ಡದೇವರಮಠ, ಧಾರವಾಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಎಸ್. ಶಿವಳ್ಳಿ, ಉಪಾಧ್ಯಕ್ಷ ಎಚ್.ವಿ. ಮಾಡಳ್ಳಿ, ಮಾಜಿ ಶಾಸಕ ಡಿ.ಆರ್. ಪಾಟೀಲ, ವಿಪ ಸದಸ್ಯ ಶ್ರೀನಿವಾಸ ಮಾನೆ, ಅಭ್ಯರ್ಥಿ ನಾಗರಾಜ ಛಬ್ಬಿ, ಮಿಥುನ ಪಾಟೀಲ, ವಿ.ಬಿ. ಸೋಮನಕಟ್ಟಿಮಠ ಸೇರಿದಂತೆ ಹಲವರು ಆಗಮಿಸುವರು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ವಾರ್ತಾಧಿಕಾರಿಯಾಗಿ ಎಂ. ಜುಂಜಣ್ಣ ಅಧಿಕಾರ ಸ್ವೀಕಾರ
ಗದಗ: ಜಿಲ್ಲಾ ವಾರ್ತಾಧಿಕಾರಿಯಾಗಿ ಎಂ. ಜುಂಜಣ್ಣ ಸೋಮವಾರ ಅಧಿಕಾರ ವಹಿಸಿಕೊಂಡರು. ಜುಂಜಣ್ಣ ಈ ಮೊದಲು ಉಡುಪಿ ಜಿಲ್ಲಾ ವಾರ್ತಾಧಿಕಾರಿಯಾಗಿದ್ದು, ಇತ್ತೀಚೆಗಷ್ಟೇ ಹಾವೇರಿಗೆ ವರ್ಗಾವಣೆಯಾಗಿ ಬಂದಿದ್ದು, ಗದಗ ಜಿಲ್ಲಾ ವಾರ್ತಾಧಿಕಾರಿ ಹುದ್ದೆಯನ್ನು ಹೆಚ್ಚುವರಿ ಪ್ರಭಾರ ಹೊಂದಿದ್ದಾರೆ. ಈ ಸಂದರ್ಭದಲ್ಲಿ ಹುಬ್ಬಳ್ಳಿ ರಾಜ್ಯ ವಾರ್ತಾ ಕಚೇರಿಯ ಅಧಿಕಾರಿ ಸಿ.ಪಿ. ಮಾಯಾಚಾರಿ ಸೇರಿದಂತೆ ಸ್ಥಳೀಯ ಪ್ರತಕರ್ತರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

