ಗದಗ

ನಾಳೆಯಿಂದ ಶಿವಾನುಭವ ಸಂಪದ

Published On :

ಗದಗ: ನಗರದ ಹಾಲಕೇರಿಮಠ ಆನಂದಾಶ್ರಮದಲ್ಲಿ ಆ. 14,15 ರಂದು ಅಭಿನವ ಅನ್ನದಾನ ಸ್ವಾಮೀಜಿಯ ಸಾನ್ನಿಧ್ಯದಲ್ಲಿ ಶತಮಾಸಿಕ ಶಿವಾನುಭವ ಸಂಪದ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಎಸ್.ಪಿ. ಸಂಶಿಮಠ ಹೇಳಿದರು.
ಅವರು ಸೋಮವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದರು. 14 ರಂದು ಬೆಳಗ್ಗೆ 9 ಗಂಟೆಗೆ ಷಟಸ್ಥಲ ಧ್ವಜಾರೋಹಣವನ್ನು ನಿಡುಗುಂದಿಕೊಪ್ಪದ ಶಿವಬಸವ ಸ್ವಾಮೀಜಿ ನೆರವೇರಿಸುವರು. ನರೇಗಲ್ ಅಕ್ಕಮಹಾದೇವಿ ಮಹಿಳಾ ವಸತಿ ನಿಲಯದ ವಿದ್ಯಾರ್ಥಿನಿಯರಿಂದ ವಚನ ಪಾರಾಯಣ ನಡೆಯಲಿದೆ. ಶತಮಾಸಿಕ ಶಿವಾನುಭವ ಸಂಪದ ಕಾರ್ಯಕ್ರಮವನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ ಉದ್ಘಾಟಿಸುವರು. ಹೊಸಪೇಟೆ ವಿಜಯನಗರ ಕಾಲೇಜಿನ ಡಾ. ಮೃತ್ಯುಂಜಯ ರುಮಾಲೆ ಉಪನ್ಯಾಸ ನೀಡಲಿದ್ದಾರೆ.
ರೋಣ ಗುಲಗಂಜಿಮಠದ ಗುರುಪಾದ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಮಾಜಿ ಸಚಿವ ಎಸ್.ಎಸ್. ಪಾಟೀಲ, ಮಾಜಿ ಶಾಸಕ ಸಿ.ಎಸ್. ಮುತ್ತಿನಪೆಂಡಿಮಠ, ಮಾಜಿ ಶಾಸಕ ಡಿ.ಆರ್. ಪಾಟೀಲ, ಸದಾನಂದ ಪಿಳ್ಳೆ ಹಾಜರಿರುವರು. ವನಮಾಲಾ ಮಾನಶೆಟ್ಟಿ ಹಾಗೂ ಸಂಗಡಿಗರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಸಂಜೆ 7 ಗಂಟೆಗೆ ವಿಶೇಷ ಉಪನ್ಯಾಸ ಹಾಗೂ ಸನ್ಮಾನ ಸಮಾರಂಭ ನಡೆಯಲಿದೆ. ಜಮಖಂಡಿ ಓಲೆಮಠದ ಅಭಿನವಕುಮಾರ ಚನ್ನಬಸವ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಡಾ. ಸಂಗಮೇಶ ಸವದತ್ತಿಮಠ ಉಪನ್ಯಾಸ ನೀಡಲಿದ್ದಾರೆ. ರೋಣ ಶಾಸಕ ಜಿ.ಎಸ್.ಪಾಟೀಲ, ನಿವೃತ್ತ ನ್ಯಾಯಾಧೀಶ ಎಸ್.ಜಿ. ಪಲ್ಲೇದ, ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ, ಡಾ. ಜಿ.ಬಿ. ಪಾಟೀಲ ಹಾಜರಿರುವರು. ಹೇಮಾ ನಾಯಕರ ಸಂಗೀತ ಕಾರ್ಯಕ್ರಮ ನೀಡಲಿದ್ದಾರೆ. ಆ. 15 ರಂದು ಬೆಳಗ್ಗೆ 7.30 ಗಂಟೆಗೆ ಅನ್ನದಾನೇಶ್ವರ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. 10 ಗಂಟೆಗೆ 101 ಮುತ್ತೈದೆಯರಿಂದ ಉಡಿ ತುಂಬುವ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಸಂಜೆ 7 ಗಂಟೆಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಉಪನ್ಯಾಸ ಸಮಾರಂಭ ನಡೆಯಲಿದೆ ಎಂದು ಹೇಳಿದರು. ಪ್ರೊ. ಎಸ್.ವಿ. ಸಂಕನೂರ, ಪ್ರೊ. ಬಿ.ಎಫ್. ಚೆಗರಡ್ಡಿ ಹಾಗೂ ಅಂದಾನೆಪ್ಪ ವಿಭೂತಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.