ಗದಗ

ಶಿರಹಟ್ಟಿ ತಾಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಿ: ಮನವಿ

Published On :

ಲಕ್ಷ್ಮೇಶ್ವರ: ಬರದಿಂದ ತತ್ತರಿಸಿರುವ ಶಿರಹಟ್ಟಿ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ, ಈ ಭಾಗದಲ್ಲಿ ಬರಗಾಲ ಕಾಮಗಾರಿಗಳನ್ನು ಆರಂಭಿಸಬೇಕೆಂದು ಆಗ್ರಹಿಸಿ ಭಾರತೀಯ ಕೃಷಿಕ ಸಮಾಜದ ಶಿರಹಟ್ಟಿ ತಾಲೂಕು ಅಧ್ಯಕ್ಷ ಸೋಮಶೇಖರಗೌಡ ಪಾಟೀಲ ಮತ್ತು ಪಕ್ಷಾತೀತ ರೈತ ಪರ ಹೋರಾಟ ವೇದಿಕೆ ತಾಲೂಕು ಅಧ್ಯಕ್ಷ ಮಹೇಶ ಹೊಗೆಸೊಪ್ಪಿನ ಅವರ ನೇತೃತ್ವದಲ್ಲಿ ಅನೇಕ ರೈತರು ಲಕ್ಷ್ಮೇಶ್ವರ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಅರ್ಪಿಸಿದರು.
ಶಿರಹಟ್ಟಿ ತಾಲೂಕಿನಾದ್ಯಂತ ಸರಿಯಾದ ಪ್ರಮಾಣದಲ್ಲಿ ಮಳೆಯಾಗದೇ ಸಾಕಷ್ಟು ರೈತರು ತೊಂದರೆಗೀಡಾಗಿದ್ದಾರೆ. ಮುಂಗಾರು ಮಳೆಯು ಸಮರ್ಪಕವಾಗಿ ಆಗದೇ ಇರುವುದರಿಂದ ಬರಗಾಲದ ಛಾಯೆ ಆವರಿಸಿದ್ದು, ಅದರಲ್ಲೂ ಮುಖ್ಯವಾಗಿ ಲಕ್ಷ್ಮೇಶ್ವರ ಹೋಬಳಿ ವ್ಯಾಪ್ತಿಯಲ್ಲಿ ಅತಿ ಕಡಿಮೆ ಮಳೆಯಾಗಿದೆ ಎಂದು ತಿಳಿಸಿದ್ದಾರೆ. ಮನವಿ ಸ್ವೀಕರಿಸಿದ ವಿಶೇಷ ತಹಸೀಲ್ದಾರ್ ಮೋಹನ ಕಟ್ಟಿಮನಿ, ಈ ಕೂಡಲೇ ಸರ್ಕಾರಕ್ಕೆ ಮನವಿ ಪತ್ರ ಕಳುಹಿಸಿ ಮುಂದಿನ ಕ್ರಮಕ್ಕಾಗಿ ವಿನಂತಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಕೃಷಿಕ ಸಮಾಜದ ಶಿರಹಟ್ಟಿ ತಾಲೂಕು ಅಧ್ಯಕ್ಷ ಸೋಮಶೇಖರಗೌಡ ಪಾಟೀಲ ಮತ್ತು ಪಕ್ಷಾತೀತ ರೈತ ಪರ ಹೋರಾಟ ವೇದಿಕೆ ತಾಲೂಕು ಅಧ್ಯಕ್ಷ ಮಹೇಶ ಹೊಗೆಸೊಪ್ಪಿನ, ಹಿರಿಯ ಮುಖಂಡ ಯಲ್ಲಪ್ಪ ಹಾದಿಮನಿ, ಫಕ್ಕೀರೇಶ ಬೂದಿಹಾಳ, ಡಿ.ಎಸ್. ಗಾಣಿಗೇರ, ಎಫ್.ಪಿ. ಸವಣೂರ, ಪಿ.ಡಿ. ಬಂಡಿವಡ್ಡರ, ಪಿ.ಎಸ್. ಧರಣಿ, ಬಸವರಾಜ ದಾನಿ, ಗಂಗಾಧರ ಕರ್ಜೇಕಣ್ಣವರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.