ಆರ್ಥಿಕ, ಸಾಮಾಜಿಕ ಬೆಳವಣಿಗೆಗೆ ಶಿಕ್ಷಣ ಸಹಕಾರಿ
ಕನ್ನಡಪ್ರಭ ವಾರ್ತೆ, ಗಜೇಂದ್ರಗಡ, ಆ. 13
ಆರ್ಥಿಕ, ಸಾಮಾಜಿಕ, ಶೈಕ್ಷಣಕವಾಗಿ ಹಿಂದುಳಿದ ಪದ್ಮಶಾಲಿ ಸಮಾಜ ಬಾಂಧವರು ಸಂಘಟಿತರಾಗಿ ಸರ್ಕಾರದ ಯೋಜನೆಗಳ ಲಾಭ ಪಡೆದು ಅಭಿವೃದ್ಧಿ ಹೊಂದಬೇಕು ಎಂದು ಮಾಜಿ ಸಂಸದ ಆರ್.ಎಸ್. ಪಾಟೀಲ ಹೇಳಿದರು.
ಸ್ಥಳೀಯ ಕೆಳಗಲ ಪೇಟೆ ಮಾರ್ಕಂಡೇಶ್ವರ ದೇಗುಲದಲ್ಲಿ ಮಾರ್ಕಂಡೇಶ್ವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಜ್ಯೋತಿ ಬೆಳಗಿಸಿ ಮಾತನಾಡಿದರು.
ನೇಕಾರಿಕೆಯನ್ನೇ ನಂಬಿ ಬದುಕು ಸಾಗಿಸುತ್ತಿರುವ ಪದ್ಮಶಾಲಿ ಸಮುದಾಯ ತೀವ್ರ ಆರ್ಥಿಕ ಸಂಕಷ್ಟದಲ್ಲಿದೆ. ಇಂತಹ ಹಿಂದುಳಿದ ಸಮುದಾಯಗಳ ಕಲ್ಯಾಣಕ್ಕಾಗಿ ಸರ್ಕಾರ ವಿವಿಧ ಯೋಜನೆಗಳ ಮೂಲಕ ಅನುದಾನ ಒದಗಿಸುತ್ತಿದೆ. ಯೋಜನೆಯ ಲಾಭ ಪಡೆದು ಅಭಿವೃದ್ಧಿ ಹೊಂದಿ ಜತೆಗೆ ಜನಾಂಗದ ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾದಾಗ ಮಾತ್ರ ಪದ್ಮಶಾಲಿ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.
ಮೈಸೂರು ಸಂಸ್ಥಾನ ಮಠದ ವಿಜಯ ಮಹಾಂತ ಸ್ವಾಮಿಜಿ, ಗುತ್ತುರು ಸಿದ್ದಾಶ್ರಮದ ಪ್ರಭುಲಿಂಗ ಸ್ವಾಮೀಜಿ, ಸಿದ್ದನಕೊಳ್ಳದ ಉಮೇಶ ಸ್ವಾಮೀಜಿ, ಶಿವಕುಮಾರ ಸ್ವಾಮೀಜಿ, ತೆಕ್ಕೇದ ಮಸೀದಿಯ ಹಜರತ್ ಮೆಹಬೂಬ ಅಲಿಶಾ ಪೀರಾಂ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.ಅಧ್ಯಕ್ಷತೆ ವಹಿಸಿದ್ದ ಸಮಾಜ ಅಧ್ಯಕ್ಷ ಕೋಟ್ರೇಶ ಚಿಲಕಾ ಮಾತನಾಡಿದರು. ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಅಶೋಕ ಬಾಗಮಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೀರಣ್ಣ ಸೊನ್ನದ, ಡಾ. ಆರ್.ಎಸ್. ಜೀರೆ, ರಾಮಣ್ಣ ಸಾಕ್ರೇ, ಜೆ.ಎಂ. ಅಂಜನಪ್ಪ, ಬಿ.ಟಿ. ಚುಂಚಾ, ಅಶೋಕ ವನ್ನಾಲ, ಬಸಣ್ಣ ಸೂಡಿ, ಮುತ್ತಣ್ಣ ಅಳವಂಡಿ, ಮಹಾದೇವ ಪಪ್ತಿ, ಸುರೇಶ ಗಾಯಕವಾಡ, ಕೇಶವ ಅರವಾ, ಗಣೇಶ ಬುಡ್ಡೋಡ್ಡಿ, ನಾರಾಯಣಪ್ಪ ಶಿಲವೇರಿ, ವಿಮಲಾ ಶಿಲವೇರಿ, ಹೇಮಾ ಚಿಲಕಾ, ಗಿರೀಜಾ ಶಿಂಧಗಿ, ವೇದಾವತಿ ನೀಲಿ ಪಾಲ್ಗೊಂಡಿದ್ದರು.
ವಿವಿಧ ಕ್ಷೇತ್ರದ ಗಣ್ಯರನ್ನು ಸನ್ಮಾನಿಸಲಾಯಿತು. ಬಳಿಕ ಸಿದ್ದ ಶ್ರೀ ಕಲಾ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಹನಮಂತ ಚುಂಚಾ ಸ್ವಾಗತಿಸಿದರು. ಅಶೋಕ ಚಿಲಕಾ, ನಿರೂಪಿಸಿದರು. ಮಂಜುಳಾ ಚುಂಚಾ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

