ಗದಗ

ಕಾಂಗ್ರೆಸ್‌ನ ಅಧಿಕಾರ ವಿಕೇಂದ್ರೀಕರಣದ ಬದ್ಧತೆ ತಿಳಿಸಿ: ಸಚಿವ ಸಂತೋಷ ಲಾಡ್

Published On :

ರೋಣ: ಕಾಂಗ್ರೆಸ್ ಪಕ್ಷವು ಅಧಿಕಾರದ ವಿಕೇಂದ್ರೀಕರಣ ಬದ್ಧತೆಯನ್ನು ಮತದಾರರಿಗೆ ತಿಳಿಸಿ ಪಕ್ಷದ ಅಭ್ಯರ್ಥಿ ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ವಾರ್ತಾ ಸಚಿವ ಸಂತೋಷ ಲಾಡ್ ಹೇಳಿದರು. ಅವರು ಮಂಗಳವಾರ ಪಟ್ಟಣದ ಮಲ್ಲಿಕಾರ್ಜುನ ಚಿತ್ರಮಂದಿರಲ್ಲಿ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು. 1 ಕೆಜಿ ಅಕ್ಕಿ, ಶಾಲಾ ಮಕ್ಕಳಿಗೆ ಹಾಲು ವಿತರಣೆ, ರಾಜೀವ ಗಾಂಧಿ ವಸತಿ ಯೋಜನೆಯಡಿ ಪ್ರತಿ ಫಲಾನುಭವಿಗೆ ರು.  1.20 ಲಕ್ಷ ಅನುದಾನ ಹೆಚ್ಚಿಸಲಾಗಿದೆ. ಇದನ್ನು ಮತದಾರರಿಗೆ ತಿಳಿಸಿರಿ ಎಂದರು. ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ ಮಾತನಾಡಿ, ಸ್ಥಳೀಯ ಸಂಸ್ಥೆಗಳಿಗೆ ಕಾಂಗ್ರೆಸ್ ಹೆಚ್ಚಿನ ಅಧಿಕಾರ ನೀಡಿರುವುದು ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಸ್ಥಳೀಯ ಸಂಸ್ಥೆಗಳ ಸದಸ್ಯರಿಗೆ ತಿಳಿಸಿ ಹೇಳಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವಂತೆ ಅವರ ಮನವೊಲಿಸಬೇಕು ಎಂದರು. ಮಾಜಿ ಶಾಸಕ ಡಿ.ಆರ್. ಪಾಟೀಲ, ಸಾಮಾಜಿಕ ನ್ಯಾಯಕ್ಕೆ ಬದ್ಧತೆ ಹೊಂದಿರುವ ಕಾಂಗ್ರೆಸ್‌ಗೆ ಮತದಾರರು ಬೆಂಬಲಿಸುವಲ್ಲಿ ಯಾವುದೇ ಸಂಶಯವಿಲ್ಲ ಎಂದರು. ಅಭ್ಯರ್ಥಿ ನಾಗರಾಜ ಛಬ್ಬಿ, ಮಾಜಿ ಸಂಸದ ಐ.ಜಿ. ಸನದಿ, ಶ್ರೀನಿವಾಸ ಮಾನೆ, ಜಿ.ಎಸ್. ಪಾಟೀಲ, ಟಿ.ಈಶ್ವರ, ನಿಂಗಪ್ಪ ಬೇವಿನಮರದ, ವೀರಣ್ಣ ಶೆಟ್ಟರ್, ನಾಜಬೇಗಂ ಯಲಿಗಾರ ಮಾತನಾಡಿದರು. ಅನೀಲಕುಮಾರ ಪಾಟೀಲ, ನಿಂಗಪ್ಪ ಕೆಂಗಾರ, ದಶರಥ ಗಾಣಿಗೇರ, ಡಾ. ಶಶಿಧರ ಹಟ್ಟಿ, ಮಿಥುನ ಪಾಟೀಲ ಇದ್ದರು. ಗದಗ ಜಿಲ್ಲಾ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಜಿ.ಎಸ್. ಗಡ್ಡದೇವರಮಠ ಅಧ್ಯಕ್ಷತೆ ವಹಿಸಿದ್ದರು. ಐ.ಎಸ್. ಪಾಟೀಲ ಸ್ವಾಗತಿಸಿದರು. ವಿ.ಬಿ. ಸೋಮನಕಟ್ಟಿಮಠ ನಿರೂಪಿಸಿದರು. ಪ್ರಭು ಮೇಟಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.