ಬಿಜೆಪಿ ಗೆಲವು ಖಚಿತ: ರಾಮಣ್ಣ ಲಮಾಣಿ
ಲಕ್ಷ್ಮೇಶ್ವರ: ವಿಧಾನ ಪರಿಷತ್ ಚುನಾವಣೆಯಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ದುಡಿದು ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರ್ ಅವರನ್ನು ಗೆಲ್ಲಿಸುತ್ತೇವೆ ಎಂದು ಮಾಜಿ ಶಾಸಕ ರಾಮಣ್ಣ ಲಮಾಣಿ ಹೇಳಿದರು.
ಪಟ್ಟಣದಲ್ಲಿ ಮಂಗಳವಾರ ನಡೆದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ತಮ್ಮ ಮತ ಚಲಾಯಿಸಿ ಪ್ರದೀಪ ಶೆಟ್ಟರ್ ಅವರನ್ನು ಗೆಲ್ಲಿಸುವಂತೆ ಕೋರಲಾಗಿದೆ. ಶಿರಹಟ್ಟಿ ತಾಲೂಕಿನ ಎಲ್ಲ ಗ್ರಾಪಂ, ತಾಪಂ, ಜಿಪಂ, ಪಪಂ, ಪುರಸಭೆ ಸದಸ್ಯರಿಗೆ ಬಿಜೆಪಿ ಅಭ್ಯರ್ಥಿ ಬೆಂಬಲಿಸುವಂತೆ ಮನವಿ ಮಾಡಲಾಗಿದೆ. ಎಲ್ಲ ನಾಯಕರೂ ಒಗ್ಗೂಡಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ ಎಂದು ಹೇಳಿದರು.
ಡಾ. ವೈ.ಎಫ್. ಹಂಜಿ ಮಾತನಾಡಿ, ಪಟ್ಟಣದ ಬಿಸಿಎನ್ ಪಾಲಿಟೆಕ್ನಿಕ್ ಕಾಲೇಜ ಆವರಣದಲ್ಲಿನ ಬಿಸಿಎನ್ ಸಭಾ ಭವನದಲ್ಲಿ ಆ.14ರಂದು ಮಧ್ಯಾಹ್ನ 2ಕ್ಕೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಭಾಷಣ ಮಾಡಲಿದ್ದಾರೆ. ಮಾಜಿ ಶಾಸಕ ಗಂಗಣ್ಣವರು ತಮ್ಮ ಕಾರ್ಯಕರ್ತರೊಂದಿಗೆ ಚರ್ಚಿಸಿ ಮುಂದಿನ ನಿರ್ಣಯ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ತಾಲೂಕಿನ ಎಲ್ಲ ಕಾರ್ಯಕರ್ತರು ಸ್ಥಳೀಯ ಸಂಸ್ಥೆಗಳ ಸದಸ್ಯರು ಆಗಮಿಸುತ್ತಿದ್ದಾರೆ ಎಂದರು.
ಚಂಬಣ್ಣ ಬಾಳಿಕಾಯಿ, ಸೋಮಣ್ಣ ಮುಳಗುಂದ, ನಾಗರಾಜ ಕುಲಕರ್ಣಿ, ಸಿದ್ದನಗೌಡ, ಶಿವಯೋಗಿ ಅಂಕಲಕೋಟಿ, ನಾಗರಾಜ ಚಿಂಚಲಿ, ಆರ್.ಡಿ. ಕೆಂಚಕ್ಕನವರ, ಮಹೇಶ ಲಮಾಣಿ, ಶೇಖಣ್ಣ ಗಡಗಿ, ಅಶೋಕ ಕುಂಬಿ, ತಮ್ಮಯ್ಯ ಶಿಗ್ಲಿಮಠ ಮುಂತಾದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

