ಗದಗ

ಮುಂಡರಗಿ ತಾಲೂಕು ಬರಪೀಡಿತ: ಘೋಷಿಸಿ

Published On :

ಮುಂಡರಗಿ: ಮುಂಡರಗಿ ತಾಲೂಕನ್ನು ಬರಗಾಲಪೀಡಿತ ಪ್ರದೇಶ ಎಂದು ಸಾರಬೇಕೆಂದು ಆಗ್ರಹಿಸಿ ಸೋಮವಾರ ತಾಲೂಕಿನ ರೈತರ ಮೆರವಣಿಗೆ ಮೂಲಕ ಬಂದು ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಪುರಸಭೆಯ ಉದ್ಯಾನದಿಂದ ಪ್ರತಿಭಟನೆಯಲ್ಲಿ ಬಂದ ಪ್ರತಿಭಟನಾಕಾರರು ತಹಸೀಲ್ದಾರ್ ಕಚೇರಿಗೆ ತೆರಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಂಡರಗಿ ತಾಲೂಕು ಅಭಿವೃದ್ಧಿ ಹೋರಾಟ ವೇದಿಕೆಯ ಅಧ್ಯಕ್ಷ ವೈ.ಎನ್. ಗೌಡರ, ಅನೇಕ ವರ್ಷಗಳಿಂದ ಸರಿಯಾಗಿ ಮಳೆಯಾಗದೆ ರೈತರು, ರೈತ ಕಾರ್ಮಿಕರು ಬರಗಾಲಕ್ಕೆ ಸಿಕ್ಕು ಕಂಗಾಲಾಗಿದ್ದಾರೆ. ಸರ್ಕಾರ ಬರಗಾಲ ಪೀಡಿತ ತಾಲೂಕುಗಳನ್ನು ಘೋಷಣೆ ಮಾಡಿದ ಪಟ್ಟಿಯಲ್ಲಿ ಮುಂಡರಗಿ ತಾಲೂಕನ್ನು ಕಡೆಗಣಿಸಿರುವುದು ಆಶ್ಚರ್ಯ ತಂದಿದೆ. ಮುಂಡರಗಿ ತಾಲೂಕನ್ನು ಕೂಡಲೇ ಬರಗಾಲ ಪ್ರದೇಶವೆಂದು ಘೋಷಣೆ ಮಾಡಬೇಕು. ಇಲ್ಲದೆ ಹೋದರೆ ಇನ್ನು 15 ದಿನಗಳಲ್ಲಿ ರೈತರ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಹಾರೋಗೇರಿ ಗ್ರಾಪಂ ಅಧ್ಯಕ್ಷ ಫಕ್ಕಣ್ಣ, ನಿಂಗಪ್ಪ ಹೆಗ್ಗಪ್ಪನವರ, ತಿಪ್ಪಣ್ಣ ಕುಂಬಾರ, ಮೌಲಾಸಾಬ ಕೊಂಬಳಿ, ತಿಪ್ಪಣ್ಣ ಭಜಮ್ಮನವರ, ಈರಣ್ಣ ಶೆಟ್ಟರ್, ತಾಮ್ರಗುಂಡಿ ಗ್ರಾಪಂ ಸದಸ್ಯ ಅಮರೇಶ ಹಿರೇಮಠ, ರಾಮಣ್ಣ ಕೋಳಿ, ಬಾಲಪ್ಪ, ದೇವಪ್ಪ ಇದ್ಲಿ, ಬೀರಪ್ಪ ಕಾವಲಿ ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.