ಅಖಂಡ ಭಾರತಕ್ಕೆ ಸಂಕಲ್ಪ ಮಾಡಿ
ಗದಗ: ಯುವಜನತೆಯು ಅಖಂಡ ಭಾರತ ನಿರ್ಮಾಣಕ್ಕೆ ಸಂಕಲ್ಪ ತೊಡುವಂತೆ ವಿದ್ಯಾಧಾನ ಸಮಿತಿ ವಿಡಿಎಸ್ಟಿಸಿ ಪಪೂ ಮಹಾವಿದ್ಯಾಲಯದ ಪ್ರಾಚಾರ್ಯ ಮಾರುತಿ ಕಟ್ಟಿಮನಿ ಹೇಳಿದರು.
ಅವರು ತಾಲೂಕಿನ ಕೋಟುಮಚಗಿ ಗ್ರಾಮದ ಮಾರುತಿ ದೇವಸ್ಥಾನದ ಆವರಣದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ಆ. 14 ರ ಮಧ್ಯರಾತ್ರಿ ಹಮ್ಮಿಕೊಳ್ಳಲಾಗಿದ್ದ 67ನೇ ವರ್ಷದ ಸ್ವಾತಂತ್ರ್ಯೋತ್ಸವ ಹಾಗೂ ಅಖಂಡ ಭಾರತ ಸಂಕಲ್ಪ ದಿನದ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿ ಮಾತನಾಡಿದರು. 1947ರ ಆಗಸ್ಟ್ 14ರ ಮಧ್ಯರಾತ್ರಿ ಸ್ವಾತಂತ್ರ್ಯ ದೊರೆತ ಸಂತೋಷವು ಒಂದೆಡೆಯಾದರೆ ಸ್ವಾತಂತ್ರ್ಯ ದೊರೆಯುತ್ತಿದ್ದಂತೆಯೇ ಅಖಂಡವಾಗಿದ್ದ ಭಾರತ ದೇಶವು ವಿಭಜನೆಯಾಯಿತು ಎಂದು ಬೇಸರ ವ್ಯಕ್ತಪಡಿಸಿದರು.
ಸಾನ್ನಿಧ್ಯ ವಹಿಸಿದ್ದ ರೋಣದ ಗುಲಗಂಜಿ ಮಠದ ಗುರುಪಾದ ಶ್ರೀಗಳು ಆಶೀರ್ವಚನ ನೀಡಿ, ದೇಶಕ್ಕೆ ಹಾನಿಯಾಗುವ, ದೇಶ ವಿರೋಧಿ ಚಟುವಟಿಕೆ ನಡೆಸುತ್ತಿರುವವರ ವಿರುದ್ಧ ಯುವಕರು ಹೋರಾಡುವ ಮೂಲಕ ಭಾರತ ದೇಶವನ್ನು ಸಂರಕ್ಷಿಸುವಲ್ಲಿ ಶ್ರಮಿಸುವಂತೆ ಕೋರಿದರು.
ಸನ್ಮಾನ ಸ್ವೀಕರಿಸಿದ ನಿವೃತ್ತ ಮುಖ್ಯೋಪಾಧ್ಯಾಯ ಕೆ.ಎ. ಹಮ್ಮಿಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೋಮೇಶ್ವರ ಶಿಕ್ಷಣ ಸಮಿತಿಯ ಗೌರವ ಕಾರ್ಯದರ್ಶಿ ಎಂ.ಬಿ. ರಮಾಣಿ, ವಿಶ್ವ ಹಿಂದೂ ಪರಿಷತ್ನ ಗ್ರಾಮ ಘಟಕದ ಗೌರವಾಧ್ಯಕ್ಷ ದೇವಪ್ಪ ಕಾಡರ, ಎಪಿಎಂಸಿ ಸದಸ್ಯ ರಾಮಣ್ಣ ಶಿಂಗ್ಟಾಲಕೇರಿ, ಗ್ರಾಪಂ ಸದಸ್ಯ ದೇವಪ್ಪ ಬಡಿಗೇರ, ಅಶೋಕ ಬ್ಯಾಹಟ್ಟಿ, ಶಿವಾನಂದ ಗೌಡನವರ, ಶರಣಪ್ಪ ಕಾಡರ, ಮಲ್ಲಪ್ಪ ಅಲ್ಲಾಪುರ, ಸುಗಂದಪ್ಪ ಬಡಿಗೇರ, ಆರ್.ವಿ. ಕುಲಕರ್ಣಿ ಮುಂತಾದವರು ಇದ್ದರು. ಮುತ್ತು ಹುಯಿಲಗೋಳ ಸ್ವಾಗತಿಸಿದರು. ಶ್ರೀಧರ ಕುಲಕರ್ಣಿ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

