ಗದಗ

ಭಾರತ ಅಭಿವೃದ್ಧಿಶೀಲ ರಾಷ್ಟ್ರ

Published On :

ಕನ್ನಡಪ್ರಭ ವಾರ್ತೆ, ನರಗುಂದ, ಆ. 15
ಭಾರತ ಇಂದು ಅಭಿವೃದ್ಧಿಶೀಲ ರಾಷ್ಟ್ರವಾಗಿದೆ ಎಂದು ತಹಸೀಲ್ದಾರ್ ವೆಂಕನಗೌಡ ಪಾಟೀಲ ಹೇಳಿದರು.
ಅವರು ಗುರುವಾರ ಪಟ್ಟಣದ ಸಿದ್ದೇಶ್ವರ ಕಾಲೇಜು ಬಳಿಯ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ 67ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ನಾವೆಲ್ಲ ಭಾರತ ಮಾತೆಯ ಮಕ್ಕಳೆಂದು ಸಹೋದರತ್ವದಿಂದ ಬಾಳಿ ಈ ದೇಶವನ್ನು ಇಡೀ ಜಗತ್ತಿಗೆ ಶ್ರೀಮಂತ ರಾಷ್ಟ್ರವನ್ನಾಗಿಸಲು ಪಣ ತೊಡೋಣ ಎಂದರು.
ಶಾಸಕ ಬಿ.ಆರ್. ಯಾವಗಲ್ಲ ಮಾತನಾಡಿದರು. ರಾಜು ಕಲಾಲ, ವಿಠ್ಠಲ ಸಿಂಧೆ, ಜಿ.ಎಂ. ದೋರಮ್, ಮಲಪ್ರಭಾ ಅಚ್ಚುಕಟ್ಟು ಬಳಕೆದಾರರ ಸಂಘದ ಅಧ್ಯಕ್ಷ ಎಂ.ಎಂ. ಮುಳ್ಳೂರು, ಪುರಸಭೆ ಸದಸ್ಯ ಚಂದ್ರು ಪವಾರ, ಮಹೇಶ ಬಡಿಗೇರ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಾ ಪಾಟೀಲ, ಸಿಪಿಐ ಪ್ರಶಾಂತಗೌಡ ಸಿದ್ದನಗೌಡ್ರ, ಪುರಸಭೆ ಅಧಿಕಾರಿ ಎಸ್. ರಾಜಶೇಖರ, ತಾಪಂ ಅಧಿಕಾರಿ ಬಿ.ವಿ. ಪಾಚೀಲ, ಕೃಷಿ ಅಧಿಕಾರಿ ಎಸ್.ಎನ್. ಮಂಜುನಾಥ, ಟಿ.ಜಿ. ಶಂಕರಮೂರ್ತಿ, ಸಮಾಜ ಕಲ್ಯಾಣ ಅಧಿಕಾರಿ ಟಿ.ಪ್ರಕಾಶ, ಪಶುವೈದ್ಯಾಧಿಕಾರಿ ಎಂ.ಎಂ. ಹುಚ್ಚಣ್ಣವರ ಮುಂತಾದವರು ಇದ್ದರು. ಶಹಜಾನ ಮುದಕವಿ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.