ಇಂದು ದಂಡಿನ ದುರ್ಗಾದೇವಿ ಮೂರ್ತಿ ಪ್ರತಿಷ್ಠಾಪನೆ, ಮೆರವಣಿಗೆ
ಲಕ್ಷ್ಮೇಶ್ವರ: ಸಮೀಪದ ಶಿಗ್ಲಿ ಗ್ರಾಮದ ಗಾಂಧಿ ನಗರದಲ್ಲಿ (ಕುಂಚಿಕೊರವರ ಓಣಿ) ನೂತನವಾಗಿ ನಿರ್ಮಿಸಿರುವ ದಂಡಿನ ದುರ್ಗಾದೇವಿ ದೇವಸ್ಥಾನದ ಪ್ರಾರಂಭೋತ್ಸವ ಹಾಗೂ ಮೂರ್ತಿ ಪ್ರತಿಷ್ಠಾಪನೆಯ ಕಾರ್ಯಕ್ರಮವು ಆ. 18, 19 ರಂದು ಜರುಗಲಿದೆ ಎಂದು ದೇವಸ್ಥಾನ ಸದ್ಭಕ್ತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಭಾನುವಾರದಂದು ಬೆಳಗ್ಗೆ ವಿವಿಧ ವಾದ್ಯಗಳೊಂದಿಗೆ ಹಾಗೂ ಸುಮಂಗಲೆಯರು ಹೊತ್ತ ಕುಂಭಗಳೊಂದಿಗೆ ದಂಡಿನ ದುರ್ಗಾದೇವಿಯ ಮೂರ್ತಿಯನ್ನು ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಗುವುದು. ದೇವಸ್ಥಾನದ ಉದ್ಘಾಟನೆಯು ಸೋಮವಾರ ಬೆಳಗ್ಗೆ 9 ಗಂಟೆಗೆ ಜರುಗಲಿದ್ದು, 10.20ಕ್ಕೆ ದಂಡಿನ ದುರ್ಗಾದೇವಿಯ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯದ ನಂತರ ಧರ್ಮಸಭೆ ಜರುಗಲಿದೆ. ಸಮಾರಂಭದ ಸಾನ್ನಿಧ್ಯವನ್ನು ಹೂವಿನ ಶಿಗ್ಲಿಯ ವಿರಕ್ತಮಠದ ಚೆನ್ನವೀರ ಸ್ವಾಮಿಗಳು ವಹಿಸಿಕೊಳ್ಳಲಿದ್ದಾರೆ. ಶಿಗ್ಲಿ ಗ್ರಾಮದ ಹಾಗೂ ಸುತ್ತ ಮುತ್ತಲಿನ ದಂಡಿನ ದುರ್ಗಾದೇವಿಯ ಸದ್ಭಕ್ತರು ಆಗಮಿಸಬೇಕು ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

