ಗದಗ

ಗ್ರಾಮಾಭಿವೃದ್ಧಿ ಯೋಜನೆ ಸಂಜೀವಿನಿ

Published On :

ಕನ್ನಡಪ್ರಭ ವಾರ್ತೆ, ಗಜೇಂದ್ರಗಡ, ಆ. 18
ನಾಡಿನ ಬಡ ಮತ್ತು ದುರ್ಬಲ ಸಮುದಾಯಗಳು ಆರ್ಥಿಕ ಮತ್ತು ಸಾಮಾಜಿಕವಾಗಿ ಸ್ವಾವಲಂಬನೆ ಬದುಕು ಸಾಗಿಸಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳು ಸಂಜೀವಿನಿಯಾಗಿವೆ. ಈ ನಿಟ್ಟಿನಲ್ಲಿ ಮಹಿಳೆಯರು ಯೋಜನೆಯ ಲಾಭ ಪಡೆದು ಆರ್ಥಿಕವಾಗಿ ಸಬಲರಾಗಿ ಎಂದು ಸ್ನೇಹಾ ಮಹಿಳಾ ಮಂಡಳ ಅಧ್ಯಕ್ಷೆ ಸಂಯುಕ್ತಾ ಬಂಡಿ ಹೇಳಿದರು.
ಅವರು ಭಾನುವಾರ ಸ್ಥಳೀಯ ಕಟ್ಟಿ ಬಸವೇಶ್ವರ ರಂಗ ಮಂದಿರದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗಜೇಂದ್ರಗಡ ವಲಯ ಮಟ್ಟದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆಯವರು ಧಾರ್ಮಿಕ ಸೇವೆ ಜತೆಗೆ ನಾಡಿನಾದ್ಯಂತ ಕಳೆದ 3 ದಶಕಕ್ಕೂ ಹೆಚ್ಚು ಕಾಲ ಗ್ರಾಮೀಣ ಪರಿವರ್ತನಾ ಕಾರ್ಯಕ್ರಮದ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವುದರ ಜತೆಗೆ ಆರ್ಥಿಕವಾಗಿ ಹಿಂದುಳಿದ ಜನರ ಸರ್ವತೋಮುಖ ಅಭಿವೃದ್ಧಿಗಾಗಿ ಸಂಸ್ಥೆಯ ಮೂಲಕ ಹಲವಾರು ಯೋಜನೆಗಳನ್ನು ರೂಪಿಸಿ ಸ್ವಾವಲಂಬನೆ ಜೀವನ ಸಾಗಿಸಬೇಕೆಂಬ ಸಂಕಲ್ಪಕ್ಕೆ ಸಮುದಾಯ ಸಹಕರಿಸುವ ಅಗತ್ಯವಿದೆ ಎಂದರು.
ಅಧ್ಯಕ್ಷತೆವಹಿಸಿದ್ದ ಸ್ಪಂದನಾ ಮಹಿಳಾ ಮಂಡಳದ ಅಧ್ಯಕ್ಷೆ ಶಶಿಕಲಾ ಪಾಟೀಲ ಮಾತನಾಡಿ, ಪಟ್ಟಣ ಸೇರಿದಂತೆ ಗ್ರಾಮಾಂತರ ಪ್ರದೇಶದ ಜನರ ಸಂಕಷ್ಟಗಳಿಗೆ ಸಂಸ್ಥೆಯ ಯೋಜನೆಯ ಫಲ ತಲುಪಿಸಿ, ಆರ್ಥಿಕ ಸಬಲರನ್ನಾಗಿಸುವ ಡಾ. ವೀರೇಂದ್ರ ಹೆಗ್ಗಡೆಯವರ ಸಾಮಾಜಿಕ ಚಿಂತನೆ ದೇಶದ ಗಮನ ಸೆಳೆದಿದೆ. ಕೃಷಿ ಕಾಯಕ ಜತೆಗೆ ಗುಡಿ ಕೈಗಾರಿಕೆಯಂತಹ ಉದ್ಯೋಗ ಕೈಗೊಂಡು ಮಹಿಳೆಯರು ಸಮಾಜದ ಮುಖ್ಯ ವಾಹಿನಿಗೆ ಬರಲು ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.
ವಲಯ ಮಟ್ಟಕ್ಕೆ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೀಡಲಾಯಿತು. ರೈತ ಮುಖಂಡ ಲಾಲಪ್ಪ ರಾಠೋಡ, ತಾಲೂಕು ಯೋಜನಾಧಿಕಾರಿ ಕೃಷ್ಣಾ ಟಿ, ಡಾ. ರೇಷ್ಮಾ ಕೋಲಕಾರ, ಪುರಸಭೆ ಸದಸ್ಯೆ ಕವಿತಾ ಜಾಲಿಹಾಳ, ಸುಜಾತಾ ಚುಂಚಾ, ಶಾರದಾ ರಾಠೋಡ, ಅಕ್ಕಮ್ಮ ಜಾನಾಯಿ, ಬಸಮ್ಮ ಸಾಲಿಮಠ, ಸವಿತಾ ಭಾಂಡಗೆ, ಸುಮಂಗಲಾ ಇಟಗಿ, ಗಾಯತ್ರಿ ಕುಲಕರ್ಣಿ, ದೀಪಾ ಗೋಯಲ್, ಮಹಾದೇವಿ ಗಂಜಿಗೌಡ್ರ, ರಂಜಾನಬಿ ಡಾಲಾಯತ್, ವಿಜಯಲಕ್ಷ್ಮಿ ಕಲ್ಮಂಗಿಮಠ, ಲಕ್ಷ್ಮಿಬಾಯಿ, ದಾನಿ, ತಾಜಬೆಗಂ ಯಲಿಗಾರ, ಉಪಸ್ಥಿತರಿದ್ದರು. ಡಿ. ಗಂಗಪ್ಪ ಸ್ವಾಗತಿಸಿದರು. ಗಜಾನನ ಎಂ. ನಿರೂಪಿಸಿದರು. ಶಿಲ್ಪಾ ಜಾನಾಯಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.