ಬಸವಣ್ಣನವರ ತತ್ವದಂತೆ ಬದುಕಿ
ಕನ್ನಡಪ್ರಭ ವಾರ್ತೆ, ನರಗುಂದ, ಆ. 18
12ನೇ ಶತಮಾನದಲ್ಲಿ ವಿಶ್ವ ಗುರು ಬಸವಣ್ಣವರು ಪ್ರತಿಪಾದಿಸಿದ ಸಮಾಜದಲ್ಲಿ ಎಲ್ಲರೂ ಸಮಾನರು ಎಂಬ ಸಮಾನತೆಯ ತತ್ವದ ಅಡಿಯಲ್ಲಿ ನಾವೆಲ್ಲರೂ ಬಾಳುವಂತಾಗಬೇಕು ಎಂದು ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಶ್ರೀ ಹೇಳಿದರು.
ಅವರು ಈಚೆಗೆ ತಾಲೂಕಿನ ಭೈರಹನಟ್ಟಿ ಗ್ರಾಮದ ಬೀರಲಿಂಗಶ್ವರ ದೇವಸ್ಥಾನದಲ್ಲಿ ಬಸವ ಕೇಂದ್ರ ಹಾಗೂ ಗುರು ಬ್ರಹ್ಮಾನಂದ ಶಿವಾನುಭವ ಧರ್ಮ ಸಂಸ್ಥೆಯ ಆಶ್ರಯದಲ್ಲಿ ಜರುಗಿದ ಶಿಕ್ಷಣ ವಚನಾಮೃತ ಶ್ರಾವಣ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು. ಜಾತಿ, ಧರ್ಮ,
ಭೇದ, ಮೇಲು-ಕೀಳು ಎಂದು ಭಾವಿಸದೇ ಎಲ್ಲರೂ ಸಮಾನರು, ಮಹಿಳೆಗೂ ಪುರುಷನಷ್ಟೇ ಬದುಕುವ ಹಕ್ಕಿದೆ ಎಂಬುವುದನ್ನು ಅರಿತುಕೊಳ್ಳಬೇಕಾಗಿದೆ. ಮಹಿಳೆಯರು ಧಾರ್ಮಿಕವಾಗಿ, ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ, ಜನಪದ ಸಾಹಿತ್ಯ ಮುಂದೆ ಬರಲು ಶ್ರಮಿಸಿದ್ದಾರೆ. ಸಾಹಿತ್ಯ ರಚನೆಯಲ್ಲಿ ಮಹಿಳೆ ಪಾತ್ರ ದೊಡ್ಡದು, ಇಂದಿನ ಮಹಿಳೆಯರೂ ಜನಪದ ಸಾಹಿತ್ಯದ ಬಗ್ಗೆ ಹೆಚ್ಚು ಒಲವು ತೋರಬೇಕು ಎಂದರು.
ಚನ್ನಬಸಪ್ಪ ಕಂಠಿ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ವಿ.ಕೆ. ಮುತಾಲಿಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಿ.ಆರ್. ಉಳ್ಳಾಗಡ್ಡಿ ಹಾಗೂ ಬಸನಗೌಡ ಕಲ್ಲನಗೌಡ್ರ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ತಾಪಂ ಸದಸ್ಯ ವಿ.ಎನ್. ಕೊಳ್ಳಿಯವರ, ಎಫ್.ಆರ್. ಪಾಟೀಲ, ರಾಚಪ್ಪ ಅಸೂಟಿ, ರವಿ ಬ್ಯಾಹಟ್ಟಿ, ಹೊನ್ನಪ್ಪ ಗಡೇಕಾರ, ಚಕ್ರಸಾಲಿ ಮುಂತಾದವರು ಉಪಸ್ಥಿತರಿದ್ದರು.
ಎಸ್.ಬಿ. ದಂಡಿನ ಸ್ವಾಗತಿಸಿದರು. ಶಾಂತಕುಮಾರ ಭಜಂತ್ರಿ ನಿರೂಪಿಸಿದರು. ಪ್ರೊ. ಆರ್.ಎಚ್. ತಿಗಡಿ ವಂದಿಸಿದರು.
--
ಕಾನೂನು ಸಾಕ್ಷರತಾ ರಥಕ್ಕೆ ಚಾಲನೆ
ಗದಗ: ನಗರದ ಕೋರ್ಟ್ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಗದಗ, ಜಿಲ್ಲಾ ನ್ಯಾಯವಾದಿಗಳ ಸಂಘ, ಪಪೂ ಶಿಕ್ಷಣ ಮತ್ತು ವೃತ್ತಿ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಶಾಲಾ, ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಪ್ರಾರಂಭವಾದ ಕಾನೂನು ಸಾಕ್ಷರತಾ ರಥಕ್ಕೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಟಿ.ಎಚ್. ಆವಿನ್ ಚಾಲನೆ ನೀಡಿದರು. ಕುಲಕರ್ಣಿ ಅಂಬಾದಾಸ, ಎಂ. ಶೋಭಾ, ಪುಂಡಲೀಕ ಹೊಸಮನಿ, ಸುಜಾತಾ ಸುವರ್ಣ, ವೈ.ಆರ್. ಗುಡೂರ ಮುಂತಾದವರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

