ಗದಗ

ಅಪರಾಧ ಪ್ರಕರಣ ಹೆಚ್ಚುತ್ತಿವೆ: ಅಂಬಿಗೇರ

Published On :

ನರೇಗಲ್ಲ: ಸಮಾಜದಲ್ಲಿ ಇಂದು ಅಪರಾಧಿ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ ಎಂದು ಪಿಎಸ್‌ಐ ಎಸ್.ಎನ್. ಅಂಬಿಗೇರ ಹೇಳಿದರು.
ಅವರು ಈಚೆಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಶಾಲಾ ವಿದ್ಯಾರ್ಥಿಗಳಾಗಿ ಹಮ್ಮಿಕೊಳ್ಳಲಾಗಿದ್ದ ಠಾಣೆಯ ಮಾಹಿತಿ ನೀಡಿ ಮಾತನಾಡಿದರು. ಇಲಾಖಾ ಅಧಿಕಾರಿಗಳ ಆದೇಶದಂತೆ ಪಟ್ಟಣದ ವ್ಯಾಪ್ತಿಯಲ್ಲಿ ಬರುವ ಶಾಲೆಯ ವಿದ್ಯಾರ್ಥಿಗಳಿಗೆ ತೆರೆದ ಮನೆ ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಿದ್ದು ಪ್ರತಿವಾರದ ಗುರುವಾರದಂದು ಠಾಣಾ ವ್ಯಾಪ್ತಿಯ ಶಾಲೆಗಳ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನಗರ ಸೇರಿದಂತೆ ಪಟ್ಟಣಗಳಲ್ಲಿ ಮಕ್ಕಳ ಅಪಹರಣದಂತಹ ಕೃತ್ಯಗಳು ನಡೆಯುತ್ತಿದ್ದು, ಪಾಲಕರು ಮಕ್ಕಳನ್ನು ಶಾಲೆಗೆ ಕಳಿಸಲು ವಿಚಾರಿಸುವಂತಾಗಿದೆ ಎಂದರು. ಶಾಲಾ ವಿದ್ಯಾರ್ಥಿಗಳಿಗೆ ಪೊಲೀಸ್ ಠಾಣೆಯ ಎಎಸ್‌ಐ ಬಿ.ಬಿ. ಕರಮುಡಿ, ಸಿ.ಎಂ. ಶಿಸ್ತಗಾರ ಅವರು ವಿದ್ಯಾರ್ಥಿಗಳಿಗೆ ಅಪಹರಣದಂತಹ ಸಂದರ್ಭ ವಿದ್ಯಾರ್ಥಿಗಳು ವಹಿಸಬೇಕಾದ ಜಾಣ್ಮೆಯ ಕುರಿತು ಮಾಹಿತಿ ನೀಡಿದರು. ಮಾಹಿತಿ ನೀಡುವ ಸಂದರ್ಭ ಇಲಾಖಾ ಸಿಬ್ಬಂದಿಗಳಾದ ಆರ್.ಎನ್. ರುದ್ರಪ್ಪನವರ, ಜಿ.ಡಿ. ಹುಲಿ, ಎನ್.ಎಲ್. ಲಮಾಣಿ, ಎಂ.ಎಸ್. ಭೋಸಗತ್ತಿ, ಎಚ್.ಬಿ. ತಳವಾರ, ಶಿಕ್ಷಕಿ ಅಕ್ಕಮಹಾದೇವಿ ಬೆಟಗೇರಿ, ಲಕ್ಷ್ಮೀ ಕಲ್ಯಾಣಶೆಟ್ಟರ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.