ಗದಗ

ಅರಸು ತತ್ವ, ಸಿದ್ಧಾಂತ ಅನನ್ಯ

Published On :

ರೋಣ: ಅಭಿವೃದ್ಧಿ ಹರಿಕಾರ ಡಿ. ದೇವರಾಜ ಅರಸು ಅವರ ತತ್ವ, ಸಿದ್ಧಾಂತ ಅನನ್ಯ ಎಂದು ತಹಸೀಲ್ದಾರ್ ಎಂ.ಬಿ. ಪಾಟೀಲ ಹೇಳಿದರು. ಅವರು ಮಂಗಳವಾರ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ತಾಪಂ, ತಾಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ರೋಣ ಸಂಯುಕ್ತಾಶ್ರಯದಲ್ಲಿ ಜರುಗಿದ ಡಿ. ದೇವರಾಜ ಅರಸು ಅವರ 98ನೇ ಜನ್ಮ ದಿನಾಚರಣೆ  ಹಾಗೂ ರಾಷ್ಟ್ರೀಯ ಸದ್ಭಾವನಾ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಿಸಿಎಂ ತಾಲೂಕು ವಿಸ್ತರಣಾಧಿಕಾರಿ ಎಸ್.ಎಸ್. ಈಟೆಕಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಪ್ರಶಾಂತ ವರಗಪ್ಪನವರ ಮುಂತಾದವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಕಳೆದ ಸಾಲಿನಲ್ಲಿ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಬಿಸಿಎಂ ವಸತಿ ನಿಲಯಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ತಾಪಂ  ಪ್ರಭಾರ ಇಓ ಎಂ.ನಾರಾಯಣ, ಸಿಡಿಪಿಓ ಕೆ.ಎಚ್. ಕೆಂಪಹನುಮಯ್ಯ, ಖಜಾನೆ ಅಧಿಕಾರಿ ಎನ್.ಆರ್. ಜೋಗೇರ, ಉಪ ತಹಸೀಲ್ದಾರ್ ಎನ್.ಎಸ್. ಕೂಡಲ್, ಪುರಸಭೆ ವ್ಯವಸ್ಥಾಪಕ ಬಸಯ್ಯ ಅಂಗಡಿ, ಶೋಭಾ ನಾಯಕ, ಎಂ.ಎ. ನಧಾಪ್, ಡಿ.ಎನ್. ಪೂಜಾರ, ವೆಂಕಟೇಶ ದ್ವಾಸಲಕೇರಿ ಮುಂತಾದವರು ಉಪಸ್ಥಿತರಿದ್ದರು. ಸಿ.ಎನ್. ಕಲಕೇರಿ ಸ್ವಾಗತಿಸಿದರು. ಎಂ.ಬಿ. ಜಾಯವಾಡಗಿ, ಸ್ವಾಗತಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.