ಗದಗ

ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ಮೂರ್ತಿ ನಿಷೇಧಕ್ಕೆ ಆಗ್ರಹ

Published On :

ಗದಗ: ಜಿಲ್ಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ ತಯಾರಿಸಲಾದ ಗಣೇಶ ಮೂರ್ತಿಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಮಂಗಳವಾರ ಶ್ರೀರಾಮ ಸೇನಾ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಲಾದ ಗಣೇಶ ಮೂರ್ತಿಗಳ ಬಳಕೆ ಮಾಡುವುದರಿಂದ ಪರಿಸರಕ್ಕೆ ಹಾನಿಯಾಗುತ್ತದೆ. ಈ ಹಾನಿ ತಪ್ಪಿಸಲು ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ ತಯಾರಿಸಲಾದ ಗಣೇಶ ಮೂರ್ತಿ ತಯಾರಿಕೆ, ಮಾರಾಟ ಮಾಡುವುದನ್ನು ನಿಷೇಧಿಸುವಂತೆ ಈಗಾಗಲೇ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮತೆಗೆದುಕೊಂಡಿಲ್ಲ ಎಂದು ಮನವಿಯಲ್ಲಿ ದೂರಿದ್ದಾರೆ.
ಈಗಾಗಲೇ ನೆರೆಯ ರಾಜ್ಯ ಗೋವಾ ಮತ್ತು ರಾಜ್ಯದ ನೆರೆಯ ಜಿಲ್ಲೆಗಳಾದ ಬಿಜಾಪುರ, ಬಳ್ಳಾರಿ ಜಿಲ್ಲೆಗಳಲ್ಲಿ ನಿಷೇಧಿಸಲಾಗಿದೆ. ಅಲ್ಲದೇ ಮಾರಾಟ ಮಾಡುವುದನ್ನು ನಿಷೇಧಿಸಿದೆ. ಕೂಡಲೇ ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ ತಯಾರಿಸಲಾದ ಗಣಪತಿಗಳನ್ನು ಗದಗ ಜಿಲ್ಲೆಯಲ್ಲಿ ನಿಷೇಧಿಸದಿದ್ದಲ್ಲಿ ನಮ್ಮ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಧರಣಿ ಸತ್ಯಾಗ್ರಹ ಹಾಗೂ ಸರದಿ ಉಪವಾಸ ಪ್ರಾರಂಭಿಸಲಾಗುವುದು.
ಎರಡು ದಿನದೊಳಗಾಗಿ ಕ್ರಮತೆಗೆದುಕೊಳ್ಳದಿದ್ದಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸುವ ಸ್ಥಳಕ್ಕೆ ನೇರವಾಗಿ ನುಗ್ಗಿ ಧ್ವಂಸಗೊಳಿಸಲಾಗುವುದು ಎಂದು ಸಂಘಟನೆ ತಿಳಿಸಿದೆ.
ಮನವಿ ನೀಡುವ ಸಂದರ್ಭದಲ್ಲಿ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ, ಜಿಲ್ಲಾ ಸಂಚಾಲಕ ರಾಜು ಖಾನಪ್ಪನವರ, ಮುತ್ತಣ್ಣ ಭರಡಿ, ಮಹೇಶ ರೋಖಡೆ, ಪ್ರವೀಣಕುಮಾರ ನಂದಿಕೋಲಮಠ, ಪ್ರೇಮಾ ಜೋಷಿ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.