ಗದಗ

ಪ್ರತಿಭಾವಂತರನ್ನು ಗೌರವಿಸಿ: ಸಿ.ಎಂ. ಉದಾಸಿ

Published On :

ಕನ್ನಡಪ್ರಭ ವಾರ್ತೆ, ಗದಗ, ಆ. 20
ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಅವರನ್ನು ಪ್ರೋತ್ಸಾಹಿಸಿ ಗೌರವಿಸಬೇಕಾದುದು ಹಿರಿಯರ, ಸಮಾಜದ, ಸಂಘ ಸಂಸ್ಥೆಗಳ ಕರ್ತವ್ಯ ಹಾಗೂ ಜವಾಬ್ದಾರಿ. ಇದು ಆ ವಿದ್ಯಾರ್ಥಿಗಳಿಗೆ ಮತ್ತಷ್ಟು ಸ್ಫೂರ್ತಿ ತುಂಬುತ್ತದೆ. ಅಂತಹ ಕಾರ್ಯವನ್ನು ಪೂಜ್ಯ ಶ್ರೀ ಅಭಿನವ ಅನ್ನದಾನ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಶತಮಾಸಿಕ ಶಿವಾನುಭವ ಸಂಪದ ಸಮಿತಿಯವರು ಹಮ್ಮಿಕೊಂಡಿರುವುದು ಸಂತೋಷದ ಮತ್ತು ಅಭಿನಂದನೀಯ ಕಾರ್ಯ ಎಂದು ಮಾಜಿ ಸಚಿವ ಸಿ.ಎಂ. ಉದಾಸಿ ಅಭಿಪ್ರಾಯಪಟ್ಟರು.
ಅವರು ಈಚೆಗೆ ನಗರದಲ್ಲಿರುವ ಹಾಲಕೇರಿ ಮಠದ ಆನಂದಾಶ್ರಮ ಆವರಣದಲ್ಲಿ ಶತಮಾಸಿಕ ಶಿವಾನುಭವ ಸಂಪದ ವಿಶೇಷ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಗದಗ ಜಿಲ್ಲೆಯ ಪ್ರತಿಭಾವಂತ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಲಿಂಗೈಕ್ಯ ಶ್ರೀ ಹಾನಗಲ್ಲ ಕುಮಾರಸ್ವಾಮಿಗಳ ಭಾವಚಿತ್ರ ಅನಾವರಣ ಮಾಡಿ, ಹಾಲಕೇರಿ ಅನ್ನದಾನೇಶ್ವರ ಮಠದ ಧಾರ್ಮಿಕ ಕಾರ್ಯಗಳನ್ನು ಶ್ಲಾಘಿಸಿದರು.
ನರಗುಂದ ಶಾಸಕ ಬಿ.ಆರ್. ಯಾವಗಲ್ಲ ಅವರು ಹಾಲಕೇರಿ ಮಠದೊಂದಿಗೆ ಇರುವ ಆತ್ಮೀಯ ಒಡನಾಟವನ್ನು ನೆನಪಿಸಿಕೊಂಡರು. ಕನಕದಾಸ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಡಾ. ಬಿ.ಎಫ್. ದಂಡಿನ ಅವರು ರಾಜಕೀಯ ವ್ಯವಸ್ಥೆಯಲ್ಲಿ ಸುಧಾರಣೆ ಪರ್ವ ಆರಂಭವಾಗಬೇಕಾಗಿದೆ ಎಂದು ತಿಳಿಸಿದರು. ಡಾ. ಶೀಲಾಕಾಂತ ಪತ್ತಾರ ಅವರು ಇಂದಿನ ರಾಜಕೀಯ ಹಾಗೂ ಪ್ರಜಾತಂತ್ರ ವ್ಯವಸ್ಥೆ ಕುರಿತು ಉಪನ್ಯಾಸ ನೀಡಿದರು. ಅಧ್ಯಕ್ಷತೆಯನ್ನು ಧಾರವಾಡ ಮುರಾಘಮಠದ ಮಲ್ಲಿಕಾರ್ಜುನ ಮಹಾಸ್ವಾಮಿಗಳು ವಹಿಸಿದ್ದರು. ಸಾನ್ನಿಧ್ಯವಹಿಸಿದ್ದ ಅಭಿನವ ಅನ್ನದಾನಮಹಾಸ್ವಾಮಿಗಳು ಆಶೀರ್ವಚನ ನೀಡಿದರು.
ವನಮಾಲಾ ಮಾನಶೆಟ್ಟಿಯವರಿಂದ ಪ್ರಾರ್ಥನೆ, ಪ್ರೊ. ಎಸ್.ಬಿ. ಸಂಕನೂರ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ರಾಜೇಶ್ವರಿ ಕಲಾ ಕುಟೀರದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಎಸ್.ಪಿ. ಸಂಶಿಮಠ, ಸದಾನಂದ ಪಿಳ್ಳೆ  ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.