ಅರಸು ಕೊಡುಗೆ ಅಪಾರ: ಅಂಜನಕುಮಾರ
ಕನ್ನಡಪ್ರಭ ವಾರ್ತೆ, ಗದಗ, ಆ. 21
ಕನ್ನಡ ನಾಡು ನುಡಿಗೆ, ಹಿಂದುಳಿದ ವರ್ಗದ ಜನತೆಗೆ ದೇವರಾಜ ಅರಸು ನೀಡಿದ ಕೊಡುಗೆ ಅಪಾರ ಎಂದು ಜಿಲ್ಲಾಧಿಕಾರಿ ಎಸ್.ಟಿ. ಅಂಜನಕುಮಾರ ಹೇಳಿದರು.
ಅವರು ಮಂಗಳವಾರ ಜಿಪಂ, ಜಿಲ್ಲಾಡಳಿತ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ನಗರದ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಜರುಗಿದ ಡಿ. ದೇವರಾಜ ಅರಸು ಅವರ 98ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ನ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ತುರಮರಿ ಮಾತನಾಡಿ, ಈ ಸಮಾಜಕ್ಕೆ ಒಂದು ಉತ್ತಮ ವಿಚಾರ, ತತ್ವಗಳು, ಉಪಯುಕ್ತವಾದ ಕೊಡುಗೆಗಳನ್ನು ನೀಡುವ ಮನೋವೃತ್ತಿಯನ್ನು ಬೆಳೆಸಿಕೊಂಡರೆ ಈ ಜೀವನ ಸಾರ್ಥಕತೆ ಪಡೆದುಕೊಳ್ಳುವುದು ಎಂದರು. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ವೀರಮಲ್ಲಪ್ಪ ಪೂಜಾರ ಮುಂತಾದವರು ಉಪಸ್ಥಿತರಿದ್ದರು. ಮಂಜುಳಾ ಹಿರೇಮಠ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಪಾರ್ವತಿ ನೀಲಗುಂದ ಹಾಗೂ ಸಂಗಡಿಗರು ಸ್ವಾಗತ ಗೀತೆ ಹಾಡಿದರು. ರವಿ ಗುಂಜೀಕರ ಸ್ವಾಗತಿಸಿದರು. ಬಸವರಾಜ ಬಳ್ಳಾರಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

