ಪ್ರತಿಯೊಬ್ಬರಿಗೂ ಕಾನೂನು ಅರಿವು ಅವಶ್ಯ
ಮುಂಡರಗಿ: ನಮ್ಮ ಕಾನೂನುಗಳ ಬಗ್ಗೆ ತಿಳಿದುಕೊಂಡರೆ ನಾಗರಿಕ ಸಮಾಜದಲ್ಲಿ ನೆಮ್ಮದಿ ಜೀವನ ಸಾಗಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅವಶ್ಯವಾಗಿದೆ ಎಂದು ತಾಲೂಕು ದಿವಾಣಿ ನ್ಯಾಯಾಧೀಶ ವಿಜಯಕುಮಾರ ಕನ್ನೂರ ಹೇಳಿದರು.
ಗುರುವಾರ ಮುಂಡರಗಿಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ, ಕ್ಷೇತ್ರ ಶಿಕ್ಷಣಾಧಿಕಾರಗಳ ಕಾರ್ಯಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ತಾಪಂ, ಕೆ.ಆರ್. ಬೆಲ್ಲದ ಕಾಲೇಜಿನ ಅರ್ಥಶಾಸ್ತ್ರ ಸ್ನಾತಕೋತ್ತರ ಪದವಿ ವಿಭಾಗ ಮುಂಡರಗಿ ಆಶ್ರಯದಲ್ಲಿ ಜರುಗಿದ ಕಾನೂನು ಸಾಕ್ಷರತಾ ಕಾರ್ಯಕ್ರಮ ಹಾಗೂ ಜನತಾ ನ್ಯಾಯಾಲಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
1987ರಲ್ಲಿ ಕಾನೂನು ಸೇವಾ ಪ್ರಾಧಿಕಾರ ರಚನೆಯಾಗಿ 1995ರಲ್ಲಿ ಜಾರಿಯಾಯಿತು. ರಾಷ್ಟ್ರ ಮಟ್ಟದಲ್ಲಿ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ, ರಾಜ್ಯ ಮಟ್ಟದಲ್ಲಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಮಟ್ಟದಲ್ಲಿ ತಾಲೂಕು ಕಾನೂನು ಸೇವಾ ಪ್ರಾಧಿಕಾರ ರಚಿಸುವ ಮೂಲಕ ಜನತೆಗೆ ಕಾನೂನಿನ ಬಗ್ಗೆ ತಿಳಿವಳಿಕೆ ನೀಡುವ ಅನೇಕ ಕಾರ್ಯಕ್ರಮಗಳನ್ನು ಪ್ರತಿವರ್ಷ ಮಾಡಲಾಗುತ್ತಿದೆ.
ಜನರಲ್ಲಿರುವ ಕಾನೂನು ತಿಳಿವಳಿಕೆ ಕೊರತೆ ಹೋಗಲಾಡಿಸಲು ಮಹಿಳೆಯರು, ದುರ್ಬಲ ವರ್ಗದವರಿಗೆ ಆರ್ಥಿಕವಾಗಿ ಒಂದು ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದವರು ಸೇರಿದಂತೆ ಅನೇಕರಿಗೆ ಉಚಿತವಾಗಿ ಸೇವೆ ನೀಡಲು ಕಾನೂನಿನಲ್ಲಿ ಅವಕಾಶಗಳಿವೆ. ಕಾನೂನು ಎಲ್ಲರಿಗೂ ಒಂದೇ ಎಲ್ಲರಿಗೂ ಕಾನೂನಿನ ಬಗ್ಗೆ ತಿಳಿವಳಿಕೆ ನೀಡುವುದು ಹಾಗೂ ಜನರಲ್ಲಿ ಕಾನೂನಿನ ಕುರಿತು ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಉದ್ದೇಶ ಎಂದರು.
ಪ್ರೊ ಎ.ವೈ. ನವಲಗುಂದ ಮಾತನಾಡಿದರು. ಡಾ ಎಂ.ಬಿ. ಬೆಳವಟಗಿಮಠ ಅಧ್ಯಕ್ಷತೆ ವಹಿಸಿದ್ದರು. ಜಿ.ಎಂ. ಕುಲಕರ್ಣಿ, ಎಂ.ಎಂ. ನಾಡಗೌಡ್ರ ಉಪನ್ಯಾಸ ನೀಡಿದರು. ತಾಪಂ ಇಒ ಡಿ. ಮೋಹನ್, ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎ.ಕೆ. ಜೈನ್, ನಾಗಭೂಷಣ್ ಹಿರೇಮಠ, ಸಿಡಿಪಿಓ ಎಸ್.ಎಸ್. ವಾರದ ಇದ್ದರು.
ಡಾ ವಿ.ಕೆ. ಕೋಳೂರಮಠ ಸ್ವಾಗತಿಸಿದರು. ಎಂ.ವಿ. ಅರಳಿ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

