ಗದಗ

ಮೀಸಲಾತಿ ಪಟ್ಟಿ ಪ್ರಕಟ

Published On :

ಗದಗ: ಗ್ರಹಚಾರ ಹಿಡಿದಿದ್ದ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಮೀಸಲಾತಿಯನ್ನು ರಾಜ್ಯ ಸರ್ಕಾರ ಶುಕ್ರವಾರ ಗೆಜೆಟ್‌ನಲ್ಲಿ ಪ್ರಕಟಿಸಿದ್ದು, ಚುನಾಯಿತ ಜನಪ್ರತಿನಿಧಿಗಳು ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ. ಗದಗ-ಬೆಟಗೇರಿ ನಗರಸಭೆಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್‌ಸಿ ವರ್ಗ, ಗಜೇಂದ್ರಗಡ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿದೆ. ಲಕ್ಷ್ಮೇಶ್ವರ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗ. ಮುಂಡರಗಿ ಪುರಸಭೆ ಅಧ್ಯಕ್ಷ ಸ್ಥಾನ ಎಸ್‌ಟಿ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗ. ರೋಣ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನ ಮಹಿಳೆಗೆ ಮೀಸಲಾಗಿದೆ. ನರಗುಂದ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ. ಮುಳಗುಂದ ಪಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. ನರೇಗಲ್ಲ ಪಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗದ ಮಹಿಳೆ. ಶಿರಹಟ್ಟಿ ಪಪಂ ಅಧ್ಯಕ್ಷ ಸ್ಥಾನ ಎಸ್‌ಸಿ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.
ಪರೀಕ್ಷಾ ತರಬೇತಿ ಉದ್ಘಾಟನೆ
ಹಾವೇರಿ: ಹಾವೇರಿ ತಾಲೂಕು ಲೋಕ ಶಿಕ್ಷಣ ಸಮಿತಿಯಿಂದ ಒಂದು ದಿನದ ರಾಷ್ಟ್ರೀಯ ಸಾಕ್ಷರತಾ ಮಿಷನ್, ರಾಷ್ಟ್ರೀಯ ಮುಕ್ತ ಶಾಲಾ ಸಂಸ್ಥೆ (ಎನ್‌ಐಒಎಸ್) ನಡೆಸುವ ಪರೀಕ್ಷಾ ತರಬೇತಿಯನ್ನು ಇತ್ತೀಚೆಗೆ 6. ನಂ ಶಾಲೆಯಲ್ಲಿ ಜಿಲ್ಲಾ ಸಂಯೋಜಕ ನಾರಾಯಣ ಕರೆವ್ವನವರ ಉದ್ಘಾಟಿಸಿದರು. ಅವರು ಮಾತನಾಡಿ, ಪರೀಕ್ಷೆಗಳು ಪ್ರಾಮಾಣಿಕವಾಗಿರಲಿ ಹಾಗೂ ಎಸ್.ಸಿ-ಎಸ್.ಟಿ., ಅಲ್ಪಸಂಖ್ಯಾತ ಮಹಿಳೆಯರು ಸಾಕ್ಷರ ಭಾರತ್ ಯೋಜನೆಯಲ್ಲಿ ಕಲಿತವರಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಿ ಅವರಿಗೆ ಆ ದಿನ 3 ಗಂಟೆಗಳ ಯಾವುದೇ ಅವಧಿಯಲ್ಲಿ ಬಂದರೂ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಆಗಸ್ಟ್ 25ರಂದು ಬೆಳಿಗ್ಗೆ 10ರಿಂದ 5ರ ವರೆಗೆ ಪರೀಕ್ಷೆ ನಡೆಯಲಿದ್ದು, ಮುಖ್ಯೋಪಾಧ್ಯಾಯರು, ಸಹಶಿಕ್ಷಕರು, ಪ್ರೇರಕರು ಕಡ್ಡಾಯವಾಗಿ ಹಾಜರಿದ್ದು ಪರೀಕ್ಷೆಯ ಪರಿಸ್ಥಿತಿಯನ್ನು ಮೇಲಧಿಕಾರಿಗಳಿಗೆ ತಿಳಿಸುತ್ತಿರಬೇಕು ಎಂದರು. ಮುಖ್ಯೋಪಾಧ್ಯಾಯ ಎಸ್.ಎನ್. ಆಶಾದ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಕೃಷ್ಣಪ್ಪಗೌಡ ಭಗವಂತಗೌಡ್ರ, ಪಾಟೀಲ, ವೈ.ಟಿ. ಹೆಬ್ಬಳ್ಳಿ, ತಾಲೂಕು ಸಂಯೋಜಕ ಬಿ.ಎಂ. ಅಂಗಡಿಇತರರಿದ್ದರು.
ಕಲ್ಲಪ್ಪ ಕಲ್ಲಾಪುರ ನಿಧನ
ಹೊಳೆಆಲೂರ: ಸ್ಥಳೀಯ ಕಲ್ಮೇಶ್ವರ ವಿದ್ಯಾ ಪ್ರಸಾರಕ ಸಮಿತಿಯ ಆಡಳಿತ ಮಂಡಳಿಯ ಮಾಜಿ ಸದಸ್ಯ ಹಾಗೂ ಯಚ್ಚರೇಶ್ವರ ಬಾಲವಿಕಾಸ ವಿದ್ಯಾಮಂದಿರ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಕಲ್ಲಪ್ಪ ಕಲ್ಲಾಪುರ (ಕೋಟಿ) (89) ಬುಧವಾರ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.