ಗದಗ

ಅಂಗನವಾಡಿ ಕೇಂದ್ರಗಳಿಗೆ ಆರ್ಥಿಕ ಸೌಲಭ್ಯ

Published On :

ಕನ್ನಡಪ್ರಭ ವಾರ್ತೆ, ಗದಗ, ಆ. 25
ಸರ್ಕಾರದ ಅನುದಾನದಲ್ಲಿ ಮತ್ತು ನಗರಸಭೆ ಅನುದಾನದಲ್ಲಿ ಅಂಗನವಾಡಿ ಕೇಂದ್ರಗಳಿಗೆ ಆರ್ಥಿಕ ಸೌಲಭ್ಯ ಮತ್ತು ಅಂಗನವಾಡಿ ಕಟ್ಟಡದ ಮೂಲಭೂತ ಸೌಕರ್ಯವನ್ನು ಹಂತಹಂತವಾಗಿ ಒದಗಿಸಲಾಗುತ್ತಿದ್ದು, ಇದರ ಸದುಪಯೋಗವನ್ನು ಶಿಕ್ಷಕರು ಪಡೆದುಕೊಳ್ಳಬೇಕು ಎಂದು ಗದಗ-ಬೆಟಗೇರಿ ನಗರಸಭೆ ಸದಸ್ಯೆ ಕಮಲಾ ಹಾದಿಮನಿ ಹೇಳಿದರು.
ಅವರು ಈಚೆಗೆ ಸ್ಥಳೀಯ 21ನೇ ವಾರ್ಡನ ಗಂಗಾಪುರ ಪೇಟೆಯ ಬಾಲಮಾರುತಿ ಅಂಗನವಾಡಿ ಕೇಂದ್ರಗಳಾದ 178, 200, 201 ಈ ಕೇಂದ್ರಗಳ ಬಾಲವಿಕಾಸ, ಬಾಲವಿಕಾಸ ಸಮನ್ವಯ ಸಮಿತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಭಾಗವು ಸ್ಲಂಗಳಿಂದ ಕೂಡಿದ್ದು, ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕಡೆಗೆ ಹೆಚ್ಚಿನ ಲಕ್ಷ್ಯವಹಿಸಿ ಸರಿಯಾದ ಆಹಾರ ಮತ್ತು ಸ್ವಚ್ಛತೆ ಕಡೆಗೆ ಗಮನ ನೀಡಬೇಕು ಎಂದು ಅಂಗನವಾಡಿ ಕಾರ್ಯಕರ್ತೆಯರಿಗೆ ಕರೆ ನೀಡಿದರು. ಅತಿಥಿಗಳಾಗಿ ಪಾಲ್ಗೊಂಡಿದ್ದ ಪುಷ್ಪಾ ಗೊಂದಿ ಹಾಗೂ ಶ್ರೀಕಾಂತ ಹಬೀಬ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಳವಪ್ಪ ಕುಂಬಾರ, ರೇಣುಕಾ ಕಬಾಡಿ, ರೇಖಾ ಹಬೀಬ, ಬಾಬು ಬಾಕಳೆ, ಸಹಶಿಕ್ಷಕಿ ಸಣ್ಣಬಸಮ್ಮ ಚಲವಾದಿ, ಅಕ್ಕಮ್ಮ ಅಮರಗಟ್ಟಿ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಮಂಜುಳಾ ಬೆಟಗೇರಿ ಸ್ವಾಗತಿಸಿ, ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.