ಸುದ್ದಿ ಸಂಕ್ಷೇಪ
ಇಂದು ಪಂಚಮಸಾಲಿ ಸಭೆ
ಲಕ್ಷ್ಮೇಶ್ವರ: ಆ. 26ರಂದು ಮಧ್ಯಾಹ್ನ 2 ಗಂಟೆಗೆ ಪಟ್ಟಣದ ಟಿಎಪಿಸಿಎಂಎಸ್ ಸಭಾಭವನದಲ್ಲಿ ಶಿರಹಟ್ಟಿ ತಾಲೂಕು ವೀರಶೈವ ಪಂಚಮಸಾಲಿ ಸಂಘದ ಸಭೆಯನ್ನು ಕರೆಯಲಾಗಿದೆ. ಸಭೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಬಸವರಾಜ ದಿಂಡೂರ ಸೇರಿದಂತೆ ರಾಜ್ಯ ಮತ್ತು ಜಿಲ್ಲಾ ಸಂಘದ ಪಧಾಧಿಕಾರಿಗಳು ಮತ್ತು ಸಮಾಜದ ಮುಖಂಡರು ಉಪಸ್ಥಿತರಿರಲಿದ್ದು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡುವ ಮೂಲಕ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ತಾಲೂಕು ಅಧ್ಯಕ್ಷ ಡಾ. ಎಸ್.ಬಿ.ಜವಾಯಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
ಇಂದು ರಥೋತ್ಸವ
ಲಕ್ಷ್ಮೇಶ್ವರ: ಸಮೀಪದ ಅಕ್ಕಿಗುಂದದ ಗುಡ್ಡದ ಮೇಲಿರುವ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಭ್ರಮಾರಾಂಭ ದೇವಿಯ ಜಾತ್ರಾ ಮಹೋತ್ಸವವು 26ರ ಶ್ರಾವಣ ಸೋಮವಾರದಂದು ಜರುಗಲಿದೆ. ಸೋಮವಾರ ಬೆಳಗ್ಗೆ 10 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಕುಂಭಗಳೊಂದಿಗೆ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಭ್ರಮರಾಂಭ ದೇವಿಯ ಮೆರವಣಿಗೆಯು ನಡೆಯುತ್ತದೆ. ನಂತರ ಗುಡ್ಡದ ಮೇಲೆ ಇರುವ ಮಲ್ಲಿಕಾರ್ಜುನ ಸ್ವಾಮಿಯ ದೇವಸ್ಥಾನಕ್ಕೆ ಮೆರವಣಿಗೆಯ ಮೂಲಕ ತೆರಳಿ ಸಂಜೆ 5 ಗಂಟೆಗೆ ಸ್ವಾಮಿಯ ಪಲ್ಲಕ್ಕಿಯ ಉತ್ಸವವ ನಡೆಯುತ್ತದೆ. ಸಂಜೆ 5.30ಕ್ಕೆ ರಥೋತ್ಸವವು ಜರುಗಲಿದೆ.
ಕೃಷಿ ವಿಮೆ: ಅರ್ಜಿ ಆಹ್ವಾನ
ರೋಣ: 2013-14ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತಾಲೂಕಿನ ಹೊಳೆಆಲೂರ, ನರೇಗಲ್ ಮತ್ತು ರೋಣಗಳಲ್ಲಿ ರಾಷ್ಟ್ರೀಯ ಕೃಷಿ ವಿಮಾ ಯೋಜನೆಯಲ್ಲಿ ರೈತರಿಗೆ ಭಾಗವಹಿಸಲು ಆಗಸ್ಟ್ 31 ಕೊನೆಯ ದಿನಾಂಕವೆಂದು ನಿಗದಿಪಡಿಸಿದ್ದು, ಅರ್ಹರು ಸದರಿ ಯೋಜನೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು. ಬೆಳೆಸಾಲ ಪಡೆಯದ ರೈತರು ಬೆಳೆ ಬಿತ್ತಿದ ಅಥವಾ ನಾಟಿ ಮಾಡಿದ 30 ದಿವಸಗಳೊಳಗಿನ ಬೆಳೆಗಳಿಗೆ ಮಾತ್ರ ವಿಮಾ ಕಂತು ಕಟ್ಟಿ ಅರ್ಜಿ ಸಲ್ಲಿಸತಕ್ಕದ್ದು ಹಾಗೂ ನೋಂದಾಯಿಸುವ ಸಮಯದಲ್ಲಿ ಬೆಳೆಯು ಆರೋಗ್ಯಕರವಾಗಿರತಕ್ಕದ್ದು. 2013 ಮುಂಗಾರು ಹಂಗಾಮಿನಲ್ಲಿ ಆಯ್ದ ಬೆಳೆಗಳಿಗೆ ರಾಷ್ಟ್ರೀಯ ಕೃಷಿ ವಿಮಾ ಹಾಗೂ ಪ್ರಾಯೋಗಿಕ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತದೆ. ಬೆಳೆ ಸಾಲ ಪಡೆಯದ ರೈತರು ಯಾವುದಾದರೊಂದು ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ ಎಂದು ರೋಣ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಎಸ್.ಎ. ಸೂಡಿಶೆಟ್ಟರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಸ್ಪೀಟ್: ಐವರ ಬಂಧನ
ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ತೋಟದ ಮನೆಯಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಇಲ್ಲಿನ ನಿವಾಸಿಗಳಾದ ಶೌಕತ್ಅಲಿ ಮುಳಗುಂದ, ಇಬ್ರಾಹಿಂಸಾಬ ಹೊಸಮನಿ, ಚನ್ನಪ್ಪ ಕೊಟಗಿ, ಅಬ್ದುಲ್ಖಾದರ ಜಮಖಂಡಿ, ಸಮೀರಅಬ್ದುಲ್ ಲೋದಿ ಬಂಧಿತ ವ್ಯಕ್ತಿಗಳು. ಬಂಧಿತರಿಂದ ಎರಡು ಮೊಬೈಲ್ ಸೆಟ್ ಹಾಗೂ ರು. 6840 ನಗದು ವಶಪಡಿಸಿಕೊಳ್ಳಲಾಗಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

