ಗದಗ

ನಿರಂತರ ಪರಿಶ್ರಮದಿಂದ ಯಶಸ್ಸು

Published On :

ಗದಗ: ವಿದ್ಯಾರ್ಥಿಗಳು ನಿರಂತರ ಪರಿಶ್ರಮದಿಂದ ಯಶಸ್ಸು ಕಾಣಲು ಸಾಧ್ಯ ಎಂದು ನಗರಸಭೆ ಮಾಜಿ ಸದಸ್ಯ, ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿ ಬಲರಾಮ ಬಸವ ಹೇಳಿದರು.
ಅವರು ಭಾನುವಾರ ಆದರ್ಶ ಶಿಕ್ಷಣ ಸಮಿತಿಯ ವಾಣಿಜ್ಯ ಮಹಾವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ವಿಶ್ವವಿದ್ಯಾಲಯ ವ್ಯಾಪ್ತಿಯ ಅಂತರ್ ಮಹಾವಿದ್ಯಾಲಯಗಳ ಪುರುಷರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು. ಇಂದು ವಿದ್ಯಾರ್ಥಿಗಳಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿರುವುದು ನೋವಿನ ಸಂಗತಿ. ಈ ಕುರಿತು ವಿದ್ಯಾರ್ಥಿಗಳು ಅರಿತುಕೊಳ್ಳುವ ಮೂಲಕ ಪ್ರತಿಯೊಬ್ಬರೂ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಅವಶ್ಯವಾಗಿದೆ ಎಂದರು. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗೆ ಆದ್ಯತೆ ನೀಡುವುದು ಅತ್ಯವಶ್ಯಕ. ಯಾವುದೇ ವಿದ್ಯಾರ್ಥಿಗಳಾಗಲಿ ಕ್ರೀಡೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಸೋಲು, ಗೆಲುವು ಮುಖ್ಯವಲ್ಲ, ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ. ಇಂದಿನ ಯುವಕರೇ ನಾಡಿನ ಉತ್ತಮ ಪ್ರಜೆಯಾಗಿದ್ದು, ಪಠ್ಯದ ಜತೆಗೆ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅತ್ಯಗತ್ಯ ಎಂದರು. ಅಂತಾರಾಷ್ಟ್ರೀಯ ಕುಸ್ತಿಪಟು ಪ್ರೇಮಾ ಹುಚ್ಚಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಐ.ವಿ. ಬೆಳ್ಳಿಕಟ್ಟಿ, ಸಿ.ಎಂ. ಪಾಟೀಲ್, ಕ್ರೀಡಾ ಕಾರ್ಯದರ್ಶಿ ಶರಣಕುಮಾರ ತಂತ್ರಿ, ಕುಸ್ತಿ ತರಬೇತಿದಾರ ಶರಣಗೌಡ ಬೇಲೇರಿ ಉಪಸ್ಥಿತರಿದ್ದರು. ಅಂತಾರಾಷ್ಟ್ರೀಯ ಕುಸ್ತಿ ಕ್ರೀಡಾಪಟು ಪ್ರೇಮಾ ಹುಚ್ಚಣ್ಣವರ ಹಾಗೂ ತರಬೇತುದಾರ ಶರಣಗೌಡ ಬೇಲೇರಿ ಅವರನ್ನು ಮಹಾವಿದ್ಯಾಲಯದ ವತಿಯಿಂದ ಸನ್ಮಾನಿಸಲಾಯಿತು. ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಂ.ಎಲ್. ಗುಳೇದಗುಡ್ಡ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿ.ಪಿ. ಜೈನರ್ ಕಾರ್ಯಕ್ರಮ ನಿರೂಪಿಸಿದರು. ಪ್ರೊ. ಎಸ್.ಎಚ್. ಕೆಳಗಡಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.