ಗದಗ

ಯುವಕರಲ್ಲಿ ದೇಶಾಭಿಮಾನ ಬೆಳೆಯಲಿ

Published On :

ನವಲಗುಂದ: ಹಲವು ವರ್ಷಗಳಿಂದ ಭಾರತ ಗುಲಾಮಗಿರಿಯಲ್ಲಿ ಮುಳಗಿತ್ತು. ಅದರಿಂದ ಮುಕ್ತರಾಗಲು ಬಲಿಷ್ಠ ಯುವ ಶಕ್ತಿ ಕಾರಣವಾಯಿತು. ಆಗ ಸಾವಿರಾರು ಬಡವರ ಶ್ರಮವೇ ರಾಷ್ಟ್ರ ಕಟ್ಟಲು ಸಾಧ್ಯವಾಯಿತು. ಆದರೆ ಈಗಿನ ಯುವಕರಲ್ಲಿ ದೇಶಾಭಿಮಾನ ಕಡೆಮೆಯಾಗುತ್ತಿರುವುದು ವಿಷಾದಕರ ಸಂಗತಿ ಎಂದು ಬೆಂಗಳೂರು ರಾಮಕೃಷ್ಣ ಆಶ್ರಮದ ಸ್ವಾಮಿ ತ್ಯಾಗೀಶ್ವರಾನಂದ ಮಹಾರಾಜ ಖೇದ ವ್ಯಕ್ತಪಡಿಸಿದರು.
ಅವರು ಸೋಮವಾರ ಸ್ವಾಮಿ ವಿವೇಕಾನಂದರ 150ನೇ ವರ್ಷಾಚರಣೆ ನಿಮಿತ್ತ ಹುರಕಡ್ಲಿ ಅಜ್ಜನವರ ಪುಣ್ಯಾಶ್ರಮದಲ್ಲಿ ಏರ್ಪಡಿಸಿದ್ದ ಯುವ ಸಮಾವೇಶದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ನಿಮ್ಮ ಭವಿಷ್ಯ ನೀವೇ ರೂಪಿಸಿಕೊಳ್ಳಬೇಕು. ಜೀವನದಲ್ಲಿ ಮೌಲ್ಯಗಳನ್ನು ಅಳವಡಿಸಿಕೊಂಡು ವಿವೇಕಾನಂದರ ಸಂದೇಶಗಳನ್ನು ಅಳವಡಿಸಿಕೊಂಡು ಭಾವ್ಯಕ್ಯದಿಂದ ದೇಶಕಟ್ಟಲು ಮುಂದಾಗಬೇಕೆಂದು ಕರೆ ನೀಡಿದರು.
ಶಾಸಕ ಎನ್.ಎಚ್. ಕೋನರಡ್ಡಿ ಯುವ ಸಮಾವೇಶ ಉದ್ಘಾಟಿಸಿದರು. ಹುಬ್ಬಳ್ಳಿ ರಾಮಕೃಷ್ಣ ಆಶ್ರಮದ ಸ್ವಾಮಿ ರಘುವೀರಾನಂದ ಮಹಾರಾಜ್, ಸ್ವಾಮಿ ಜ್ಞಾನಾನಂದಜೀ ಮಹಾರಾಜ್, ಧಾರವಾಡ ರಾಮಕೃಷ್ಣ ಆಶ್ರಮದ ವಿಜಯಾನಂದ ಸರಸ್ವತಿ, ಬಾಗಲಕೋಟೆಯ ಕೃಪಾನಂದಜೀ ಮಹಾರಾಜ್, ಲಲಿತಾಶ್ವರನಂದ ಸ್ವಾಮೀಜಿ, ಗವಿಮಠದ ಬಸವಲಿಂಗ ಸ್ವಾಮೀಜಿ, ನಾಗಲಿಂಗ ಮಠದ ವೀರಯ್ಯ ಸ್ವಾಮೀಜಿ ಇದ್ದರು.
ಪಟ್ಟಣದ ನೀಲಮ್ಮನ ಕೆರೆಯಿಂದ ವಿವೇಕಾನಂದರ ರಥಯಾತ್ರೆಯನ್ನು ಸಕಲ ವಾದ್ಯ ವೈಭವಗಳೊಂದಿಗೆ ಮೆರವಣಿಗೆ ನಡೆಸಲಾಯಿತು.
ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಸಂಘ ಸಂಸ್ಥೆಯವರು, ವಿವಿಧ ಇಲಾಖೆ ಅಧಿಕಾರಿಗಳು ರಥಯಾತ್ರೆಯಲ್ಲಿ ಪಾಲ್ಗೊಂಡು ವಿವೇಕಾನಂದರ ಸಂದೇಶಗಳನ್ನು ಸಾರಿದರು.
ಜೆಡಿಎಸ್ ಅಧ್ಯಕ್ಷ ಲೋಕನಾಥ ಹೆಬಸೂರ, ಪುರಸಭೆ ಸದಸ್ಯರಾದ ಪ್ರಕಾಶ ಶಿಗ್ಲಿ, ಜೀವನ ಪವಾರ, ಎಪಿಎಂಸಿ ಅಧ್ಯಕ್ಷ ಎ.ಎಸ್. ಬಾಗಿ, ಟಿ.ವಿ. ಮಹಾಂತೇಶ, ಎಸ್.ಎಂ. ಪಟ್ಟಣಶೆಟ್ಟಿ, ಪಿಎಸ್‌ಐ ಎನ್.ಸಿ. ಕಾಡದೇವರ ಇತರರು ಇದ್ದರು. ಬಿಇಒ ಬಿ.ಎಸ್. ಮಾಯಾಚಾರಿ ಸ್ವಾಗತಿಸಿದರು. ಎ.ಬಿ. ಕೊಪ್ಪದ ನಿರೂಪಿಸಿದರು. ಬಿ.ಎಚ್. ಮಳಲಿ ವಂದಿಸಿದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.