ಗದಗ

ಅಕ್ಕಿ ಅಕ್ರಮ ಮಾರಾಟ ತಡೆಗೆ ಆಗ್ರಹ: ಮನವಿ

Published On :

ಕನ್ನಡಪ್ರಭ ವಾರ್ತೆ, ಗದಗ, ಆ. 26
ಸರ್ಕಾರಿ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುವುದನ್ನು ತಡೆಯುವಂತೆ ಒತ್ತಾಯಿಸಿ ಈಚೆಗೆ ಜೈ ಭೀಮಾ ಸೇನಾ ರಾಜ್ಯ ಸಂಘರ್ಷ ಸಮಿತಿ ಗದಗ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈಚೆಗೆ ನಗರದಲ್ಲಿ ಅನ್ನಭಾಗ್ಯ ಯೋಜನೆಯ 190 ಚೀಲ ಅಕ್ಕಿ ವಶಪಡಿಸಿಕೊಂಡು ಕ್ರಮ ಜರುಗಿಸುತ್ತಿದ್ದು, ಸರ್ಕಾರದ ಯೋಜನೆಗಳ ಮೂಲಕ ಬಡಜನರಿಗೆ ಅತಿ ಕಡಿಮೆ ಬೆಲೆಯಲ್ಲಿ ಅಕ್ಕಿ ನೀಡುವ ಕಾರ್ಯವನ್ನು ಕೈಗೆತ್ತಿಕೊಂಡ ಸರ್ಕಾರದ ಕ್ರಮ ಸ್ವಾಗತಾರ್ಹ. ಆದರೆ, ಸರ್ಕಾರದ ಯಂತ್ರದಂತೆ ಕೆಲಸ ಮಾಡುತ್ತಿರುವ ಪಡಿತರ ಅಂಗಡಿಯ ಮತ್ತು ಸರ್ಕಾರಿ ಸಿಬ್ಬಂದಿ ಇಂತಹ ಅಕ್ಕಿ ಮತ್ತು ಸೀಮೆ ಎಣ್ಣೆಯನ್ನು ಅಕ್ರಮವಾಗಿ ಮಾರಾಟ ಮಾಡುವುದು ಖಂಡನೀಯ.
ಎಲ್ಲ ಗೋದಾಮುಗಳಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಅಧಿಕಾರಿಗಳು ಪ್ರತಿ ತಿಂಗಳು ತನಿಖೆ ಮಾಡಬೇಕು. ಈ ರೀತಿಯ ತಪ್ಪು ಮಾಡುವವರ ವಿರುದ್ಧ ನಿರ್ಧ್ಯಾಕ್ಷಿಣ್ಯ ಕ್ರಮ ಜರುಗಿಸಬೇಕು. ಅವರ ಪಡಿತರ ವಿತರಣಾ ಲೈಸೆನ್ಸ್ ರದ್ದುಪಡಿಸಬೇಕು. ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಂಡು ಪಡಿತರವನ್ನು ಅಕ್ರಮವಾಗಿ ಮಾರಾಟ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಜೈ ಭೀಮ ಸೇನಾ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಹುಬ್ಬಳ್ಳಿ, ರಾಜ್ಯ ಸಮಿತಿಯ ಕಾರ್ಯದರ್ಶಿ ಅಶೋಕ ಹಾದಿಮನಿ, ಗದಗ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಪರಾಪುರ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸ್ಮಾಯಿಲ್ ಕಲಾದಗಿ, ಉಪಾಧ್ಯಕ್ಷ ರಾಷ್ಟ್ರೀನ್ ಜೋಸೆಫ್, ವಿಜಯ ಕಲ್ಮನಿ, ಮಂಜುನಾಥ ತೌಜಲ, ಪರಶುರಾಮ ಸಂಗಾಪುರ, ಓಬಳೇಶ ಯಶವಂತಪುರ, ವಿಜಯ ತಳಗೇರಿ, ಮಂಜುನಾಥ ಪರಾಪುರ, ಕೃಷ್ಣಾ ಸಂಗಾಪುರ, ಚಂದ್ರು ಗುತ್ತಿ, ಹನುಮಂತ ರಾಮಗಿರಿ, ಹನುಮಂತ ಬಳ್ಳಾರಿ, ಹೇಮಂತ ಹುಬ್ಬಳ್ಳಿ, ಮುತ್ತು ಭರಮಗೌಡ್ರ, ಪರಶುರಾಮ ಸೀತಿಮನಿ, ಮಂಜುನಾಥ ಕಲ್ಲೂರ, ಹರೀಶ ಪೆನಗೊಂಡ, ಬಸವರಾಜ ಬದಾಮಿ, ನಾಗರಾಜ ಬಳ್ಳಾರಿ, ಶಂಕರ ಹುಬ್ಬಳ್ಳಿ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.