ಗದಗ

ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಿ

Published On :

ನರಗುಂದ:  ಮುಂಬೈನಲ್ಲಿ ಈಚೆಗೆ ಪತ್ರಿಕಾ ಛಾಯಾಗ್ರಾಹಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಅತ್ಯಂತ ಹೇಯ ಕೃತ್ಯವಾಗಿದ್ದು, ಈ ಘಟನೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ನರಗುಂದ ತಾಲೂಕು ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಹಾಗೂ ವಿವಿಧೋದ್ದೇಶಗಳ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದರು.  
ಸಮಾಜದಲ್ಲಿ ಮಹಿಳೆಗೆ ರಕ್ಷಣೆ ಇಲ್ಲ.  ಕೇಂದ್ರ ಮತ್ತು ರಾಜ್ಯ ರಾಜ್ಯ ಸರ್ಕಾರಗಳು ರಕ್ಷಣೆ ಜವಾಬ್ದಾರಿ ವಹಿಸಿಕೊಂಡು ಇಂತಹ ಘಟನೆಗಳು ಸಮಾಜದಲ್ಲಿ ಮುಂದೆ ನಡೆಯದಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ. ತಾಲೂಕು ಅಧ್ಯಕ್ಷ ಶಂಭುಲಿಂಗ ಹಳಕಟ್ಟಿ, ಕಾರ್ಯದರ್ಶಿ ರಾಘವೇಂದ್ರ ಶಿಂಪಿ, ಮಹೇಶ ಬಡಿಗೇರ, ಅಂದಾನಯ್ಯ ಹಿರೇಮಠ, ಶರಣಪ್ಪ ಹೂಗಾರ, ಪ್ರಕಾಶ ನಂದಿ, ಶ್ರೀಧರ ಮುಧೋಳ, ಅರುಣ ಕುಟಕನಕೇರಿ, ಮಾರುತಿ ದೊಡಮನಿ, ಚಿದಾನಂದ ಕುಂಬಾರ, ಆನಂದ ನಂದಿಕೊಳಮಠ, ಪ್ರಕಾಶ ಯಾವಗಲ್, ಶಿವ ದಿಬ್ಬದಮನಿ, ಶರಣಪ್ಪ ಪೊಲೀಸ್‌ಪಾಟೀಲ, ವೀರೂಪಾಕ್ಷಿ ಸಾತನ್ನವರ ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.