30ರಂದು ಸಮ್ಮೋಹನ ಕಾರ್ಯಾಗಾರ
ನರೇಗಲ್ಲ: ಇತ್ತೀಚಿನ ದಿನಗಳಲ್ಲಿ ಸಮ್ಮೋಹನ ಕುರಿತು ಮಾಧ್ಯಮಗಳ ಮೂಲಕ ಜನರನ್ನು ತಪ್ಪು ಹಾದಿಗೆಳೆಯುತ್ತಿರುವ ಸ್ವಯಂ ಘೋಷಿತ ಗುರೂಜಿ ಹಾಗೂ ಮರಿ ಗುರೂಜಿಗಳ ವಿರುದ್ಧ ಜನರನ್ನು ಜಾಗೃತಿಗೊಳಿಸಲು ಆ. 30ರಂದು ಸ್ಥಳೀಯ ಅನ್ನದಾನ ವಿಜಯ ವಿದ್ಯಾಪ್ರಸಾರಕ ಸಂಸ್ಥೆಯು ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಪ್ರಾಯೋಜಕತ್ವದಲ್ಲಿ ಸಮ್ಮೋಹನ ಮತ್ತು ಆತ್ಮ ಸಮ್ಮೋಹನ ವಿಷಯ ಕುರಿತು ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರವನ್ನು ಸ್ಥಳೀಯ ಅನ್ನದಾನೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಚಾರ್ಯ ಡಾ. ಅರವಿಂದ ಸಜ್ಜನ ಹೇಳಿದರು. ಅವರು ಸೋಮವಾರ ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಆ. 30ರ ಬೆಳಗ್ಗೆ 10 ಗಂಟೆಗೆ ಜರುಗುವ ಕಾರ್ಯಾಗಾರದ ಉದ್ಘಾಟನೆಯನ್ನು ಹಾಲಕೇರಿಯ ಅನ್ನದಾನೇಶ್ವರ ಸಂಸ್ಥಾನಮಠದ ಅನ್ನದಾನ ಶ್ರೀಗಳು ನೆರವೇರಿಸುವರು. ಅತಿಥಿಗಳಾಗಿ ಹುಬ್ಬಳ್ಳಿಯ ಡಾ. ಮಹೇಶ ನಾಲವಾಡ ಭಾಗವಹಿಸುವರು. ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಕೆ.ಬಿ. ಧನ್ನೂರ ವಹಿಸುವರು. ಸಮ್ಮೋಹನ ಕಾರ್ಯಾಗಾರವನ್ನು ಉದ್ದೇಶಿಸಿ ಪ್ರೊ. ರವೀಂದ್ರ ಕೊಪ್ಪರ, ಹುಬ್ಬಳ್ಳಿಯ ಸಮ್ಮೋಹನ ತರಬೇತುದಾರ ಪ್ರೊ. ಜಿ. ಸರಳಾಬಾಯಿ, ಯೋಗಾ ಕಾಲೇಜಿನ ಮುಖ್ಯ ವೈದ್ಯಾಧಿಕಾರಿ ಡಾ. ಸತೀಶ ಹೊಂಬಾಳಿ ಅವರು ಮಾಹಿತಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದ್ದು, ಅತಿಥಿಗಳಾಗಿ ಪತ್ರಕರ್ತ ಮಂಜುನಾಥ ಬೊಮ್ಮನಕಟ್ಟಿ ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಸ್ಥಳೀಯ ಖ್ಯಾತ ವೈದ್ಯ ಡಾ. ಜಿ.ಕೆ. ಕಾಳೆ ವಹಿಸುವರು. ಶಿಬಿರಾರ್ಥಿಗಳಿಗೆ ಪ್ರಾಚಾರ್ಯ ಡಾ. ಅರವಿಂದ ಸಜ್ಜನ ತರಬೇತಿ ನೀಡುವರು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

