ಗದಗ

ಧೈರ್ಯ-ಸಾಹಸ ಪ್ರದರ್ಶಿಸಿದ ಬಾಲಕ-ಬಾಲಕಿಯರಿಂದ ಅರ್ಜಿ ಆಹ್ವಾನ

Published On :

ಗದಗ:  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗದಗದಿಂದ 2013-14 ನೇ ಸಾಲಿಗೆ 6 ರಿಂದ 15 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ-ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಪ್ರಶಸ್ತಿ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು 15 ವರ್ಷ ವಯಸ್ಸಿಗಿಂತ ಕಡಿಮೆ ವಯೋವುತಿ ಹೊಂದಿರಬೇಕು. ಅಸಾಧಾರಣ ಧೈರ್ಯ, ಶೌರ್ಯವನ್ನು ಸಾಧಿಸಿರಬೇಕು. ಈ ಸಾಧನೆಯು ಜಿಲ್ಲಾಮಟ್ಟದಲ್ಲಿ ಗುರುತಿಸಿರಬೇಕು. ಧೈರ್ಯ ಶೌರ್ಯಗಳನ್ನು ಪ್ರದರ್ಶಿಸಿದ ಬಗ್ಗೆ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿರಬೇಕು. ಗ್ರಾಪಂ, ತಾಪಂ ಶಾಲಾ ಶಿಕ್ಷಕರು ಸಾಧನೆಯನ್ನು ಗುರುತಿಸಿ ಜಿಲ್ಲಾ ಮಟ್ಟಕ್ಕೆ ತಿಳಿಸಬಹುದು. ಅರ್ಜಿ ನಮೂನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ-6 ಜಿಲ್ಲಾ ಆಡಳಿತ ಭವನ, ಹುಬ್ಬಳ್ಳಿ ರಸ್ತೆ, ಗದಗ ಇವರಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಈ ಕಚೇರಿಯಲ್ಲಿ ಸಲ್ಲಿಸಬೇಕು. ಅರ್ಜಿ ಸ್ವೀಕರಿಸಲು ಸೆ. 10ರ ಸಂಜೆ 5.30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.