ಗದಗ ಜಿಲ್ಲೆಯಲ್ಲಿ ಸೈಕ್ಲಿಂಗ್ ಜನಪ್ರಿಯವಾಗಿದೆ: ಶಂಕರ
ಗದಗ: ಜಿಲ್ಲೆಯಲ್ಲಿ ರೇಸಲಿಂಗ್ ಹಾಗೂ ಸೈಕ್ಲಿಂಗ್ ಕ್ರೀಡಾಪಟುಗಳು ಹೆಚ್ಚಿದ್ದು, ಇದರಿಂದ ಗದಗ ಜಿಲ್ಲೆಯು ರೇಸಲಿಂಗ್ ಸೈಕ್ಲಿಂಗ್ನಲ್ಲಿ ಜನಪ್ರಿಯವಾಗಿದೆ ಎಂದು ಜಿಲ್ಲಾ ಕ್ರೀಡಾಧಿಕಾರಿ ಕೆ. ಶಂಕರ ಹೇಳಿದರು.
ಅವರು ಈಚೆಗೆ ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿವಿಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಸೈಕ್ಲಿಂಗ್ ಕೋಚ್ ದೇಸಾಯಿ ಹಾಗೂ ರೇಸಲಿಂಗ್ ಕೋಚ್ ಶರಣಗೌಡ ಬೇಲೇರಿ ಅವರನ್ನು ಸನ್ಮಾನಿಸಿ ಮಾತನಾಡಿದರು.
ಗದುಗಿನ ಮಣ್ಣಿನಲ್ಲಿ ಹುಟ್ಟಿದ ಮಕ್ಕಳಿಗೆ ಕ್ರೀಡೆ ವರವಾಗಿದೆ. ಕಳೆದ ವರ್ಷ ಬೇಲೇರಿ ಅವರ ಕೈಯಲ್ಲಿ ಪಳಗಿದ ಮಕ್ಕಳು 9 ಚಿನ್ನದ ಪದಕ ಪಡೆದಿದ್ದಾರೆ.
ಇವರ ಬಳಿಯೇ ತರಬೇತಿ ಪಡೆದ ಪ್ರೇಮಾ ಹುಚ್ಚಣ್ಣವರ ವರ್ಡ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿ ಕಂಚಿನ ಪದಕ ಪಡೆಯುವ ಮೂಲಕ ಗದುಗಿನ ಹೆಸರನ್ನು ವಿಶ್ವವಿಖ್ಯಾತಗೊಳಿಸಿದ್ದಾಳೆ ಎಂದರು.
ಸನ್ಮಾನ ಸ್ವೀಕರಿಸಿದ ಶರಣಗೌಡ ಬೇಲೇರಿ, ಗದಗ-ಧಾರವಾಡ ಈಶ್ವರಿಯ ವಿವಿಯ ಮುಖ್ಯ ಸಂಚಾಲಕಿ ಬ್ರಹ್ಮಕುಮಾರಿ ಜಯಂತಿ ಮಾತನಾಡಿದರು. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿವಿಯ ಪದಾಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

