ಗದಗ

ಸುದ್ದಿ ಸಂಕ್ಷೇಪ

Published On :

4ರಿಂದ ಗದಗ ಉತ್ಸವ, ಪ್ರಶಸ್ತಿ ಪ್ರದಾನ ಸಮಾರಂಭ
ಗದಗ: ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಜಿಪಂ, ಗ್ರಾಮೀಣ ಮತ್ತು ಸಣ್ಣ ಉದ್ದಿಮೆ ವಿಭಾಗ (ಖಾಗ್ರಾ) ನಬಾರ್ಡ್, ಹಾಗೂ ಗದಗ ಮಹೇಶ್ವರಿ ವಿವಿಧೋದ್ದೇಶಗಳ ಮಹಿಳಾ ಮಂಡಳ ಇವರ ಸಂಯುಕ್ತ ಆಶ್ರಯದಲ್ಲಿ ಗದಗ ಉತ್ಸವ-2013 ಕೈಗಾರಿಕಾ ವಸ್ತು ಪ್ರದರ್ಶನ ಹಾಗೂ ಮಾರಾಟ ಉದ್ಘಾಟನೆ ಮತ್ತು ಶ್ರೇಷ್ಠ ವರ್ತಕ-ಶ್ರೇಷ್ಠ ಉದ್ಯಮಿ ಹಾಗೂ ಶ್ರೇಷ್ಠ ಮಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಜ. ತೋಂಟದ ಸಿದ್ಧಲಿಂಗೇಶ್ವರ ಕಲ್ಯಾಣ ಕೇಂದ್ರದಲ್ಲಿ ಸೆ. 4ರಿಂದ 8ರ ವರೆಗೆ ಏರ್ಪಡಿಸಲಾಗಿದೆ.  ಸೆ. 4ರಂದು ಸಂಜೆ 5ಕ್ಕೆ ಜರಗುವ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ನೆರವೇರಿಸುವರು. ಅತಿಥಿಗಳಾಗಿ ಸಂಸದರು, ಶಾಸಕರು, ಜಿಪಂ ಅಧ್ಯಕ್ಷರು, ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆಯ ಅಧ್ಯಕ್ಷರು, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷರು, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಆಗಮಿಸುವರು. ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ರಾಜಶೇಖರ ಶಿರೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.  ಸೆ. 8ರಂದು ಸಂಜೆ 5.30ಕ್ಕೆ ಶ್ರೇಷ್ಠ ವರ್ತಕ, ಶ್ರೇಷ್ಠ ಉದ್ಯಮಿ ಹಾಗೂ ಶ್ರೇಷ್ಠ ಮಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಅತಿಥಿಗಳಾಗಿ ಮಾಜಿ ಸಚಿವ ಹಾಗೂ ನಿರಾಣಿ ಗ್ರೂಫ್ ಆಫ್ ಇಂಡಸ್ಟ್ರೀಜ್‌ದ ವ್ಯವಸ್ಥಾಪಕ ಮುರುಗೇಶ ನಿರಾಣಿ ಆಗಮಿಸುವರು. ಅತಿಥಿಗಳಾಗಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ನಬಾರ್ಡ್‌ದ ಸಹಾಯಕ ಜಿಲ್ಲಾ ಅಭಿವೃದ್ಧಿ ಅಧಿಕಾರಿ, ಜಿಪಂ ಸಿಇಓ ಆಗಮಿಸುವರು. ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ರಾಜಶೇಖರ ಅಂದಾನಪ್ಪ ಶಿರೂರ ಅಧ್ಯಕ್ಷತೆ ವಹಿಸುವರು. ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.