ಗದಗ

ಯುವಜನೋತ್ಸವದಿಂದ ಮಕ್ಕಳ ಪ್ರತಿಭೆ ಅನಾವರಣ

Published On :

ಕನ್ನಡಪ್ರಭ ವಾರ್ತೆ, ನರೇಗಲ್ಲ, ಡಿ. 1
ನಮ್ಮ ಗತಕಾಲದ ಇತಿಹಾಸವನ್ನು, ಚರಿತ್ರೆಯನ್ನು ರೀತಿ ನೀತಿಗಳನ್ನು ತಮ್ಮ ಕಲೆಯ ಮೂಲಕ ತಿಳಿಸಿಕೊಡಲು ಮಕ್ಕಳಿಗೆ ಯುವಜನೋತ್ಸವ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಉತ್ತಮ ವೇದಿಕೆಯಾಗಿವೆ ಎಂದು ರೋಣ ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಅವರು ಭಾನುವಾರ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜರುಗಿದ ಗದಗ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಒಂದಿಲ್ಲೊಂದು ವಿಶಿಷ್ಟ ಕಲೆ ಇದ್ದೇ ಇರುತ್ತೆ. ಅಂತಹ ಕಲೆ ಬೆಳಕಿಗೆ ಬರಲು ಇಂತಹ ವೇದಿಕೆಗಳನ್ನು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ಮಿಸಿದೆ. ಯುವಜನೋತ್ಸವ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪ್ರತಿಯೊಬ್ಬ ಸ್ಪರ್ಧಾಳು ಸ್ಪರ್ಧಾತ್ಮಕ ಮನೋಭಾವನೆಯಿಂದ, ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ಸಾಂಸ್ಕೃತಿಕ ಚಟುವಟಿಕೆ, ಕ್ರೀಡೆ, ಸಾಹಿತ್ಯಿಕ ಚಟುವಟಿಕೆ ಹೀಗೆ ಪ್ರತಿಯೊಂದರಲ್ಲೂ ಭಾಗವಹಿಸುವುದು ಅತ್ಯವಶ್ಯವಾಗಿದೆ. ವಿದ್ಯಾರ್ಥಿಗಳು ಇಂತಹ ವೇದಿಕೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಸಾನ್ನಿಧ್ಯವಹಿಸಿದ್ದ ಅನ್ನದಾನ ಶ್ರೀಗಳು ಮಾತನಾಡಿ, ನಮ್ಮ ಸಾಂಸ್ಕೃತಿಕ ಪರಂಪರೆ, ಸಂಸ್ಕೃತಿ, ಆಚಾರ ವಿಚಾರ, ಸಂಪ್ರದಾಯಗಳು ಮರೆಯಾಗುತ್ತಿರುವ ಇಂದಿನ ದಿನಮಾನಗಳಲ್ಲಿ ಶೈಕ್ಷಣಿಕ ರಂಗ ಇದನ್ನು ಉಳಿಸಿ ಬೆಳೆಸಲು ಮುಂದಾಗುತ್ತಿದ್ದು, ಅಂತಹ ಗತಕಾಲದ ವಿಚಾರಗಳನ್ನು ಮಕ್ಕಳಲ್ಲಿ ತುಂಬುವ ಅವಶ್ಯಕತೆ ಇದೆ ಎಂದರು. ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಚೇರ್‌ಮನ್ ರವೀಂದ್ರನಾಥ ದೊಡ್ಡಮೇಟಿ ವಹಿಸಿದ್ದರು. ಪ.ಪೂ. ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬಿ.ಎಸ್. ಗೌಡರ ಮುಂತಾದವರು ಮಾತನಾಡಿದರು. ಸಿ.ಕೆ. ಹಿರೇಮಠ, ಡಾ. ಜಿ.ಕೆ. ಕಾಳೆ, ಡಾ. ಅರವಿಂದ ಸಜ್ಜನ, ಪ್ರಾಚಾರ್ಯ ವೈ.ಸಿ.ಪಾಟೀಲ, ಬಿ.ಎಚ್. ಗರಡಿಮನಿ, ಎಫ್.ಎನ್. ಹುಡೇದ ಪ್ರಾಸ್ತಾವಿಕವಾಗಿ ಮಾತನಾಡಿದರು. ಶೀಲಾ ಗುರಿಕಾರ ಸ್ವಾಗತ ಗೀತೆ ಹಾಡಿದರು. ವೈ.ಸಿ. ಪಾಟೀಲ ಸ್ವಾಗತಿಸಿದರು. ಎನ್.ಎಸ್. ಹೊನ್ನೂರ ನಿರೂಪಿಸಿದರು. ಪಿ.ವೈ. ಕರಮುಡಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.