ಇಂದು ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ
ಶಿರಹಟ್ಟಿ: ಪಟ್ಟಣದ ಎಫ್.ಎಂ. ಡಬಾಲಿ ಹೈಸ್ಕೂಲ್ನಲ್ಲಿ ತಾಲೂಕು ಹಂತದ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮ ಡಿ. 3ರಂದು ಜರುಗಲಿದ್ದು, ಇದರ ಪ್ರಯುಕ್ತ 9 ರಿಂದ 14 ವಯೋವಾನದ ವಿಕಲ ಚೇತನ ಮಕ್ಕಳಿಗೆ ಕೇಂದ್ರ ಶಾಲೆಯ ಸಾಮಾನ್ಯ ಮಕ್ಕಳೊಂದಿಗೆ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿಕಲಚೇತನ ಮಕ್ಕಳ ಪೋಷಕರಿಗೂ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಡಿಕೆ ಒಡೆಯುವುದು, ಮ್ಯೂಜಿಕಲ್ ಚೇರ್, ಚಮಚದಲ್ಲಿ ಲಿಂಬೆಹಣ್ಣು ಇಟ್ಟುಕೊಂಡು ಹಲ್ಲಿನಲ್ಲಿ ಕಚ್ಚಿಕೊಂಡು ಓಡುವುದು, ಕೆರೆ ದಡ ವೃತ್ತಾಕಾರದ ಆಟ, 100 ಮೀ ಓಟ, ಕಪ್ಪೆ ಓಟ, ಜನಪದ ಗೀತೆ, ಆಶು ಭಾಷಣ, ರಸಪ್ರಶ್ನೆ, ಚಿತ್ರಕಲೆ, ಏಕ ಪಾತ್ರಾಭಿನಯ, ಛದ್ಮ ವೇಷ ಸ್ಪರ್ಧೆಗಳನ್ನು ಏರ್ಪಡಿಸಿದ್ದು, ಪ್ರಥಮ, ದ್ವಿತೀಯ, ತೃತೀಯ ಮತ್ತು ನಾಲ್ಕನೇ ಬಹುಮಾನಗಳನ್ನು ಮಕ್ಕಳಿಗೆ ನೀಡಲಾಗುವುದು. ಕಾರ್ಯಕ್ರಮದ ನಂತರ ಸಮನ್ವಯ ಶಿಕ್ಷಣದ ಕುರಿತು ವಿಕಲಚೇತನರಿಗಾಗಿ ಇರುವ ಕಾರ್ಯಕ್ರಮಗಳು, ಸೌಲಭ್ಯಗಳು, ಆರೈಕೆ ಕುರಿತು ಎಂ.ಎಚ್. ಕಂಬಳಿ ಉಪನ್ಯಾಸ ನೀಡಲಿದ್ದಾರೆ. ಮಕ್ಕಳು ಹಾಗೂ ಪೋಷಕರು ಈ ಸ್ಪರ್ಧೆಗಳ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಬಿಆರ್ಸಿ ಸಮನ್ವಯಾಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಎಚ್.ಆರ್. ಬೆನಹಾಳ, ಜಿ.ಬಿ. ಚಿಂಚಲಿ ಇವರನ್ನು ಸಂಪರ್ಕಿಸಲು ಕೋರಲಾಗಿದೆ.
ಇಂದು ರಾಜ್ಯಮಟ್ಟದ ಹ್ಯಾಂಡ್ಬಾಲ್ ಪಂದ್ಯಾವಳಿ
ಗದಗ: ಪಪೂ ಶಿಕ್ಷಣ ಇಲಾಖೆ ಬೆಂಗಳೂರು ಹಾಗೂ ಪಪೂ ಶಿಕ್ಷಣ ಇಲಾಖೆ ಗದಗ ವತಿಯಿಂದ ಪಪೂ ಕಾಲೇಜುಗಳ ರಾಜ್ಯಮಟ್ಟದ ಹ್ಯಾಂಡ್ಬಾಲ್ ಪಂದ್ಯಾವಳಿಯನ್ನು ಡಿ. 3ರಂದು ಬೆಳಗ್ಗೆ 9.30ಕ್ಕೆ ಬೆಟಗೇರಿಯ ಗಾಂಧಿ ನಗರ ಕ್ರೀಡಾಂಗಣ (ಸೆಟ್ಲಮೆಂಟ್)ನಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ ಅಧ್ಯಕ್ಷತೆ ವಹಿಸುವರು. ಜಿಪಂ ಉಪಾಧ್ಯಕ್ಷ ರಮೇಶ ಮುಂದಿನಮನಿ ಉದ್ಘಾಟಿಸುವರು. ಅತಿಥಿಗಳಾಗಿ ಲೋಕಸಭಾ ಸದಸ್ಯ ಶಿವಕುಮಾರ ಉದಾಸಿ, ಪಿ.ಸಿ. ಗದ್ದಿಗೌಡ್ರ, ಶಾಸಕ ಜಿ.ಎಸ್. ಪಾಟೀಲ, ಬಿ.ಆರ್. ಯಾವಗಲ್, ರಾಮಕೃಷ್ಣ ದೊಡ್ಡಮನಿ, ವಿಪ ಸದಸ್ಯ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ನಾಗರಾಜ ಛಬ್ಬಿ, ತಾಪಂ ಅಧ್ಯಕ್ಷ ಹನುಮಪ್ಪ ಇಂಗಳಹಳ್ಳಿ, ಉಪಾಧ್ಯಕ್ಷೆ ಪ್ರತಿಭಾ ಸಿದ್ರಾಮಣ್ಣವರ, ಎಸ್ಪಿ ಡಾ. ಶರಣಪ್ಪ ಎಸ್.ಡಿ, ಸಿಇಓ ವೀರಣ್ಣ ತುರಮರಿ ಪಾಲ್ಗೊಳ್ಳುವರು ಎಂದು ಪಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಎಸ್.ಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ತಿಕೋತ್ಸವ ಆಚರಣೆ
ನರಗುಂದ: ತಾಲೂಕಿನ ಭೈರನಹಟ್ಟಿ ಗ್ರಾಮದ ದೊರೆಸ್ವಾಮಿ ವಿರಕ್ತಮಠ ಹಾಗೂ ಮಾರುತಿ ದೇವಸ್ಥಾನದಲ್ಲಿ ಶನಿವಾರ ಕಾರ್ತಿಕೋತ್ಸವದ ಅಂಗವಾಗಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಶ್ರೀಗಳು ಕಾರ್ತಿಕೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಜಿ, ಹಿಂದು ಧರ್ಮದ ಪರಂಪರೆಯಲ್ಲಿ ಪ್ರತಿ ವರ್ಷಕ್ಕೊಮ್ಮೆ ಹಿಂದೂ ಭಕ್ತಾದಿಗಳು ದೇವಾಲಯಗಳಲ್ಲಿ ಕಾರ್ತಿಕೋತ್ಸವ ಆಚರಣೆ ಮಾಡುವ ಧರ್ಮದ ಪರಂಪರೆಯನ್ನು ಇಂದಿನ ಆಧುನಿಕ ದಿನಮಾನಗಳಲ್ಲಿ ಅಳವಡಿಸಿಕೊಂಡು ಬಂದಿರುವುದು ವಿಶೇಷವಾಗಿದೆ. ಜನತೆ ಇಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮಗಳ ಯಶಸ್ಸಿಗೆ ಕಾರಣರಾಗುವಂತೆ ಕೋರಿದರು. ಈ ಸಂದರ್ಭದಲ್ಲಿ ಶಿವಯ್ಯ ಹಿರೇಮಠ, ಸೋಮಣ್ಣ ತೆಗ್ಗಿನಮನಿ, ಬಸವರಾಜ ಮೊರಬದ, ರಾಮಣ್ಣ ಐನಾಪುರ, ಭಗವಂತ ಮೊರಬದ ಉಪಸ್ಥಿತರಿದ್ದರು.
ಇಂದು ಚೈತನ್ಯಭೂಮಿ ಚಲೋ
ಗದಗ: ಡಾ. ಬಾಬಾಸಾಹೇಬ ಅಂಬೇಡ್ಕರ್ ಜ್ಞಾನ ಪ್ರಸಾರ ಕೇಂದ್ರ ಸಮಿತಿ, ಸಮತಾ ಸೈನಿಕ ದಳ, ಕರ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ 57ನೇ ಮಹಾಪರಿನಿರ್ವಾಣದ ನಿಮಿತ್ತ 6ರಂದು ಮುಂಬೈನ ದಾದರನಲ್ಲಿ ಜರುಗುತ್ತಿರುವ ಕಾರ್ಯಕ್ರಮಕ್ಕೆ ತೆರಳಲು ವೆಂಕಟೇಶ ದಾಸರ ನೇತೃತ್ವದಲ್ಲಿ ಡಿ. 3ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಕಲಾತಂಡಗಳ ಮೆರವಣಿಗೆಯೊಂದಿಗೆ ನಗರಸಭೆ ಆವರಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವುದರೊಂದಿಗೆ ಜಾಥಾಕ್ಕೆ ಚಾಲನೆ ನೀಡಲಾಗುವುದು. ಜಾಥಾಕ್ಕೆ ಅನಿಲ ಮೆಣಸಿನಕಾಯಿ ಚಾಲನೆ ನೀಡುವರು. ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಬನಶಂಕರಿ ಅಂಗಡಿ, ಎಸ್.ಎಚ್. ಶಿವನಗೌಡ್ರ, ಡಿ.ಪ್ರಸಾದ, ಐ.ಎಫ್. ಬೆಟಗೇರಿ, ಪಿ. ಸುಬ್ರಮಣ್ಯರಡ್ಡಿ, ಶಂಭುಲಿಂಗಯ್ಯ ಕಲ್ಮಠ, ಎಸ್.ಕೆ. ಅಯ್ಯನಗೌಡ್ರ, ಬಸವಣ್ಣೆಯ್ಯ ಹಿರೇಮಠ, ಎಚ್.ಕೆ. ಮುಲ್ಲಾ, ಸತೀಶ ಮುದಗಲ್ಲ, ದಾವಲಸಾಬ ಮುಳಗುಂದ ಮುಂತಾದವರು ಆಗಮಿಸುವರು ಎಂದು ವೆಂಕಟೇಶ ಬೇಲೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

