ಗದಗ

ಯೋಜನೆಗಳು ಫಲಾನುಭವಿಗಳಿಗೆ ತಲುಪಲಿ: ನಿಂಗನಗೌಡರ

Published On :

ಲಕ್ಷ್ಮೇಶ್ವರ: ವೃದ್ಧಾಪ್ಯ, ಸಂಧ್ಯಾ ಸುರಕ್ಷೆ, ಅಂಗವಿಕಲ, ವಿಧವಾ ಮುಂತಾದ ಸರ್ಕಾರದ ಯೋಜನೆಗಳ ಲಾಭ ಪಡೆಯುವಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯಾದ ತೊಂದರೆಯಾಗಬಾರದು ಹಾಗೂ ಮಧ್ಯವರ್ತಿಗಳ ಹಾವಳಿ ತಪ್ಪಿಸುವ ಉದ್ದೇಶದಿಂದ ಪಿಂಚಣಿ ಅದಾಲತ್ ಎನ್ನುವ ಕಾರ್ಯಕ್ರಮದ ಮೂಲಕ ಅರ್ಹ ಪಿಂಚಣಿದಾರರಿಗೆ ಸೌಲಭ್ಯಗಳು ದೊರೆಯಬೇಕು ಎಂದು ತಾಲೂಕು ದಂಡಾಧಿಕಾರಿ ಆರ್.ಬಿ. ನಿಂಗನಗೌಡರ ಹೇಳಿದರು. ಪಟ್ಟಣದ ವಿಶೇಷ ತಹಸೀಲ್ದಾರ್ ಕಚೇರಿಯಲ್ಲಿ ಈಚೆಗೆ ನಡೆದ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸರ್ಕಾರ ವೃದ್ಧಾಪ್ಯದಲ್ಲಿರುವ ಹಾಗೂ ದುಡಿಯಲು ಸಮರ್ಥರಿಲ್ಲದ, ವಿಧವೆಯರಿಗೆ, ಅಂಗವಿಕಲರು ಮುಂತಾದವರು ಸಮಾಜದಲ್ಲಿ ಗೌರವಯುತವಾಗಿ ಬದುಕಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಅಂತಹ ಫಲಾನುಭವಿಗಳಿಗೆ ಪಿಂಚಣಿ ನೀಡುವ ಯೋಜನೆಯನ್ನು ಹಾಕಿಕೊಂಡಿದೆ. ಅದಕ್ಕಾಗಿ ಅರ್ಹ ಫಲಾನುಭವಿಗಳನ್ನು ಹುಡುಕಿ ಅವರಿಗೆ ಸರ್ಕಾರದ ಯೋಜನೆಗಳು ತಲುಪುವಂತಾಗಲು ಗ್ರಾಮಸ್ಥರು ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಪ್ರಯತ್ನಿಸಬೇಕು ಎಂದರು. ಭೂದಾಖಲೆಗಳ ಉಪ ನಿರ್ದೇಶಕ ಎಚ್.ಎನ್. ನಾಗರಾಳ ಮಾತನಾಡಿ, ಪಿಂಚಣಿ ಪಡೆಯಲು ಅರ್ಹರಿರುವ ಫಲಾನುಭವಿಗಳು ಯಾವುದೇ ಮಧ್ಯವರ್ತಿಗಳ ಮಾತಿಗೆ ಬೆಲೆ ಕೊಡಬಾರದು. ಅವಶ್ಯ ದಾಖಲೆಗಳನ್ನು ತೆಗೆದುಕೊಂಡು ನೇರವಾಗಿ ನಮ್ಮ ಬಳಿಗೆ ಬಂದಲ್ಲಿ ಸ್ಥಳದಲ್ಲೇ ಪಿಂಚಣಿಯನ್ನು ಮಂಜೂರು ಮಾಡುವ ಅಧಿಕಾರವನ್ನು ಸರ್ಕಾರ ನೀಡಿದ್ದು, ಅದಕ್ಕಾಗಿ ಅರ್ಹ ಫಲಾನುಭವಿಗಳು ಸರ್ಕಾರದ ಯೋಜನೆಗಳ ಲಾಭ ಪಡೆಯಬೇಕು ಎಂದರು.  ಲಕ್ಷ್ಮೇಶ್ವರ ಹೋಬಳಿಯ ನೂರಕ್ಕೂ ಹೆಚ್ಚು ಫಲಾನುಭವಿಗಳು ಪಿಂಚಣಿ ಅದಾಲತ್ ಲಾಭ ಪಡೆದುಕೊಂಡರು ಎಂದು ಕಂದಾಯ ನಿರೀಕ್ಷಕ ಎಫ್.ಎನ್. ಹುಬ್ಬಳ್ಳಿ ತಿಳಿಸಿದರು.
ಉಪ ತಹಸೀಲ್ದಾರ್ ಕೆ.ಎಫ್. ರಿತ್ತಿ, ಕಂದಾಯ ನಿರೀಕ್ಷಕ ಎಫ್.ಎನ್. ಹುಬ್ಬಳ್ಳಿ, ದಂತ ವೈದ್ಯಾಧಿಕಾರಿ ಸೌಭಾಗ್ಯಲಕ್ಷ್ಮೀ ಟಿ.ಜಿ. ಭಾರತಿ ಮೂರುಶಿಳ್ಳಿನ ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.