ಗದಗ

ಕ್ರೀಡೆಯಿಂದ ರಾಷ್ಟ್ರೀಯ ಐಕ್ಯತೆ: ಪ್ರಸನ್ನಕುಮಾರ

Published On :

ಕನ್ನಡಪ್ರಭ ವಾರ್ತೆ, ಗದಗ, ಡಿ. 3
ಕ್ರೀಡೆ ವಿವಿಧ ಭಾಗಗಳಿಂದ ಬಂದ ಕ್ರೀಡಾಪಟುಗಳ ನಡುವೆ ಸ್ಪರ್ಧೆಯೊಂದಿಗೆ ಪರಸ್ಪರ ಬಾಂಧವ್ಯ ಬೆಸೆಯುವ ಕೊಂಡಿಯಂತಿದ್ದು, ಕ್ರೀಡೆಯನ್ನು ಕ್ರೀಡಾಮನೋಭಾವದಿಂದ ಸ್ವೀಕರಿಸಿದಾಗ, ಕ್ರೀಡಾ ಸಂಸ್ಕೃತಿ ವಿನಿಮಯವಾದಾಗ ರಾಷ್ಟ್ರೀಯ ಐಕ್ಯತೆ ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಹೇಳಿದರು.
ಅವರು ಮಂಗಳವಾರ ಬೆಟಗೇರಿಯ ಗಾಂಧಿನಗರ(ಸೆಟ್ಲಮೆಂಟ್ ಕ್ರೀಡಾಂಗಣ)ದಲ್ಲಿ ಪಪೂ ಶಿಕ್ಷಣ ಇಲಾಖೆ ಬೆಂಗಳೂರು ಹಾಗೂ ಗದಗ ಜಿಲ್ಲಾ ಪಪೂ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಹ್ಯಾಂಡಬಾಲ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.
ಕ್ರೀಡಾಮನೋಭಾವವು ಸಮಾನತೆ ಹಾಗೂ ಸೌಹಾರ್ದತೆ ಬೆಸೆಯುತ್ತದೆ. ಕ್ರೀಡಾ ಮನೋಭಾವನೆ ಅಳವಡಿಸಿಕೊಳ್ಳುವುದರ ಮೂಲಕ ವ್ಯಕ್ತಿತ್ವ ವಿಕಸನಗೊಳಿಸಿಕೊಳ್ಳಬೇಕು ಎಂದರು.  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಸ್.ಡಿ. ಶರಣಪ್ಪ ಮಾತನಾಡಿ, ಹ್ಯಾಂಡಬಾಲ್ ಒಂದು ಅತ್ಯುತ್ತಮ ಕ್ರೀಡೆಯಾಗಿದ್ದು, ಈ ಆಟವು ಚಾಣಾಕ್ಷತೆ ಬೆಳೆಸುವ ಆಟವಾಗಿದೆ. ಈ ಆಟದ ಮೂಲಕ ಉತ್ತಮ ಪ್ರದರ್ಶನ ನೀಡುವುದರೊಂದಿಗೆ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕೆಂದು ಕ್ರೀಡಾಪಟುಗಳಿಗೆ ಸಲಹೆ ನೀಡಿದರು.
ಅಧ್ಯಕ್ಷತೆವಹಿಸಿದ್ದ ಪಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಎಸ್. ಗೌಡರ ಮಾತನಾಡಿ, ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಕ್ರೀಡಾಪಟುಗಳು ಉತ್ಸಾಹದಿಂದ ಆಟವಾಡಿ ತಮ್ಮ ಪ್ರತಿಭೆ ಪ್ರದರ್ಶನ ಮಾಡಿ, ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಹೆಸರು ತರಬೇಕೆಂದು ಕರೆ ನೀಡಿದರು. ಹನುಮಾನ್ ಬ್ಲೇಸಿಂಗ್ ಸ್ಪೋರ್ಟ್ ಕ್ಲಬ್ ಅಧ್ಯಕ್ಷ ಜಿ.ವಿ. ಬಾಗಾಡೆ, ದೈಹಿಕ ಶಿಕ್ಷಣ ಉಪನ್ಯಾಸಕ ಸಿ.ಆರ್. ಕರಿರಾಯನಗೌಡರ, ವಿ.ಎನ್. ಮರೆಗುದ್ದಿ, ರಾಜ್ಯಮಟ್ಟದ ಹ್ಯಾಂಡಬಾಲ್ ನಿರ್ಣಾಯಕ ಸತರೆಡ್ಡಿ, ಅಶ್ವಿನಕುಮಾರ, ಯುವಜನ ಸೇವಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶಂಕರ, ಗಣೇಶಸಿಂಗ್ ಬ್ಯಾಳಿ, ಪ್ರಾ. ಹೊಳಿಯಪ್ಪ ಯಲಬುರ್ಗಿ, ಚಂದ್ರಶೇಖರ ವಸ್ತ್ರದ ಮುಂತಾದವರು ಉಪಸ್ಥಿತರಿದ್ದರು.
ಗದಗ ಜಿಲ್ಲಾ ಪಪೂ ಕಾಲೇಜುಗಳ ಪ್ರಾಚಾರ್ಯ ಸಂಘದ ಅಧ್ಯಕ್ಷ ಬಿ.ಎಚ್. ಗರಡಿಮನಿ ಸ್ವಾಗತಿಸಿದರು. ಬಾಹುಬಲಿ ಜೈನರ ನಿರೂಪಿಸಿದರು. ರಮೇಶ ಗಿರಣಿವಡ್ಡರ ವಂದಿಸಿದರು.
ಬಿಜಾಪುರ, ಶಿವಮೊಗ್ಗ, ಬೆಂಗಳೂರು, ಕೋಲಾರ, ಬಳ್ಳಾರಿ, ಬಾಗಲಕೋಟೆ, ತುಮಕೂರು, ಕೊಡಗು, ಹಾವೇರಿ, ಕೊಪ್ಪಳ, ಮಂಗಳೂರು, ರಾಮನಗರ, ಮೈಸೂರು, ಹಾಸನ ಸೇರಿದಂತೆ ಒಟ್ಟು 24 ಬಾಲಕರ ತಂಡಗಳು ಹಾಗೂ ಬಿಜಾಪುರ, ಬೆಂಗಳೂರು ಉತ್ತರ, ಕೋಲಾರ, ಬಳ್ಳಾರಿ, ಕೊಡಗು, ಧಾರವಾಡ, ಮಂಡ್ಯ, ದಾವಣಗೇರಿ, ಚಿತ್ರದುರ್ಗ ಸೇರಿದಂತೆ 19 ಬಾಲಕಿಯರ ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.