ಗದಗ

6ರಿಂದ 14ರ ವರೆಗೆ ಹನುಮಮಾಲಾ ಕಾರ್ಯಕ್ರಮ

Published On :

ಗದಗ: ರಾಜ್ಯಾದ್ಯಂತ ಡಿ. 6ರಿಂದ 14ರ ವರೆಗೆ ವಿಶ್ವಹಿಂದೂ ಪರಿಷದ್, ಬಜರಂಗದಳದ ಆಶ್ರಯದಲ್ಲಿ ಹನುಮಮಾಲಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಜರಂಗದಳದ ರಾಜ್ಯ ಸಂಚಾಲಕ ಸೂರ್ಯನಾರಾಯಣ ಹೇಳಿದರು.
ಅವರು ಬುಧವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ವಿಶ್ವಹಿಂದೂ ಪರಿಷದ್ ಬಜರಂಗದಳದ ಆಶ್ರಯದಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ಕಾರ್ಯಕ್ರಮ ಡಿ. 14ರಂದು ನಡೆಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಡಿ. 6ರಂದು ರಾಜ್ಯದ ವಿವಿಧ ಜಿಲ್ಲೆಗಳಿಂದ ಭಜರಂಗದಳದ ಕಾರ್ಯಕರ್ತರು ಸ್ಥಾನಿಕ ಆಂಜನೇಯ ದೇವಸ್ಥಾನದಲ್ಲಿ ಮಾಲಾಧಾರಣೆ ಮಾಡಿ 9 ದಿನಗಳ ವ್ರತಾಚರಣೆ ಮಾಡಿ ಡಿ. 14ರಂದು ಅಂಜನಾದ್ರಿ ಬೆಟ್ಟಕ್ಕೆ ಬಂದು ಆಂಜನೇಯ ದರ್ಶನ ಪಡೆಯುವರು. ಡಿ.13ರಂದು ವಿವಿಧ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಸಂಕೀರ್ತನಾ ಮೆರವಣಿಗೆ ನಡೆಸಿ ಹೊರಡುವ ಹನುಮಮಾಲಾಧಾರಿಗಳು 14ರಂದು ಬೆಳಗ್ಗೆ ಆನೆಗೊಂದಿಯ ದುರ್ಗಾಬೆಟ್ಟಕ್ಕೆ ಆಗಮಿಸಲಿದ್ದಾರೆ.
ದುರ್ಗಾಬೆಟ್ಟದಲ್ಲಿ 14ರಂದು ಬೆಳಗ್ಗೆ 9ಕ್ಕೆ ಧಾರ್ಮಿಕ ಸಭೆ ಜರುಗಲಿದ್ದು, ಬಜರಂಗದಳದ ರಾಷ್ಟ್ರೀಯ ಸಂಯೋಜಕ ರಾಜೇಶ ಪಾಂಡೆ ಸಭೆಯನ್ನು ಉದ್ದೇಶಿಸಿ ಮಾತನಾಡುವರು.
ಬಳಿಕ ದುರ್ಗಾಬೆಟ್ಟದಿಂದ ಅಂಜನಾದ್ರಿ ಬೆಟ್ಟದ ವರೆಗೆ ಮಾಲಾಧಾರಿಗಳು ಹಾಗೂ ಸಾರ್ವಜನಿಕರಿಂದ ಸಂಕೀರ್ತನಾ ಯಾತ್ರೆ ಜರುಗಲಿದೆ. ಮಧ್ಯಾಹ್ನ 12ಕ್ಕೆ ಅಂಜನಾದ್ರಿ ಬೆಟ್ಟದಲ್ಲಿನ ಆಂಜನೇಯ ದರ್ಶನ ಮಾಡಿ ಧಾರ್ಮಿಕ ವಿಧಿವಿಧಾನಗಳನ್ನು ನಡೆಸುವರು. 2 ಸಾವಿರಕ್ಕೂ ಹೆಚ್ಚಿ ಹನುಮಮಾಲಾಧಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ವಿಶ್ವ ಹಿಂದೂ ಪರಿಷದ್‌ನ ಜಿಲ್ಲಾ ಕಾರ್ಯದರ್ಶಿ ಶ್ರೀಧರ ಕುಲಕರ್ಣಿ, ಜಿಲ್ಲಾ ಸಂಚಾಲಕ ಮಾರುತಿ ಪವಾರ, ಸಹ ಸಂಚಾಲಕ ಶಂಕರ ದಹಿಂಡೆ ಮುಂತಾದವರು ಸುದ್ದಿಗೋಷ್ಠಿಯಲ್ಲಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.