ಪರೋಪಕಾರದಲ್ಲಿ ತೊಡಗಿಸಿಕೊಳ್ಳಿ
ಲಕ್ಷ್ಮೇಶ್ವರ: ಪರೋಪಕಾರವು ಮನುಷ್ಯನನ್ನು ದೊಡ್ಡವನ್ನಾಗಿ ಮಾಡುತ್ತದೆ. ಅದಕ್ಕಾಗಿ ನಮ್ಮಲ್ಲಿರುವ ಸಂಪತ್ತಿನ ಕೆಲ ಭಾಗವನ್ನಾದರೂ ಧಾರ್ಮಿಕ ಕಾರ್ಯಗಳಿಗೆ ವಿನಿಯೋಗಿಸುವ ಅಥವಾ ಸತ್ಪಾತ್ರರರಿಗೆ ನೀಡುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮಿಗಳು ನುಡಿದರು. ಪಟ್ಟಣದ ಗುರು ಗಡ್ಡದೇವರಮಠದಲ್ಲಿ ಸೋಮವಾರ ಸಂಜೆ ಏರ್ಪಡಿಸಿದ್ದ ಕಾರ್ತಿಕ ದೀಪೋತ್ಸವದ ಸಾನ್ನಿಧ್ಯವಹಿಸಿ ಮಾತನಾಡಿದರು. ಶಾಸಕ ರಾಮಕೃಷ್ಣ ದೊಡ್ಡಮನಿ, ರೈತ ಮಹಿಳೆ ರಾಜೇಶ್ವರಿ ಪಾಟೀಲ, ಶಂಕರ ಕುಂಬಿ, ಪುರಸಭೆಯ ಅಧ್ಯಕ್ಷೆ ಗಂಗಮ್ಮ ಫಕ್ಕಿರಸ್ವಾಮಿಮಠ ಹಾಗೂ ಉಪನ್ಯಾಸಕ ಸೋಮಶೇಖರ ಕೆರಿಮನಿ ಶ್ರೀಮಠದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೆ ಸಂದರ್ಭದಲ್ಲಿ ಗಣನೀಯ ಸಾಧನೆ ಮಾಡಿದ ಮಹನೀಯರನ್ನು ಸತ್ಕರಿಸಲಾಯಿತು. ವಿಪ ಸದಸ್ಯ ನಾಗರಾಜ ಛಬ್ಬಿ, ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ಎಲ್.ಸಿ. ಲಿಂಬಯ್ಯಸ್ವಾಮಿಮಠ, ಸುಭಾಷ ಓದುನವರ, ಕೆಸಿಸಿ ಬ್ಯಾಂಕ್ ಉಪಾಧ್ಯಕ್ಷ ಶೇಖರಗೌಡ ಪಾಟೀಲ, ಪುರಸಭೆಯ ಉಪಾಧ್ಯಕ್ಷ ಎಂ.ಆರ್. ಪಾಟೀಲ, ಸುನೀಲ ಮಹಾಂತಶೆಟ್ಟರ್, ಶಿವಣ್ಣ ನೆಲವಿಗಿ, ಯು.ಎನ್. ಹೊಳಲಾಪುರ, ವೀರಯ್ಯ ಮಠಪತಿ ಮೊದಲಾದವರು ಹಾಜರಿದ್ದರು. ಧಾರವಾಡದ ಡಾ. ರಾಮು ಮೂಲಗಿ ಅವರ ಜನಪದ ಕಲಾ ತಂಡದವರು ಜಾನಪದ ಗೀತೆಗಳನ್ನು ಹಾಡಿ ಜನರನ್ನು ರಂಜಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

