ಸಂಭಾಜಿ ಪಾಟೀಲ ವಿರುದ್ಧ ಕ್ರಮ ಜರುಗಿಸಿ
ಕನ್ನಡಪ್ರಭ ವಾರ್ತೆ, ಮುಂಡರಗಿ, ಡಿ. 4
ಕನ್ನಡ ನಾಡಿನ ಬಗ್ಗೆ, ಕನ್ನಡಿಗರ ಬಗ್ಗೆ, ಪುಂಡಾಟಿಕೆಯ ಮಾತುಗಳನ್ನಾಡುತ್ತಿರುವ ಎಂಇಎಸ್ ಶಾಸಕ ಸಂಭಾಜಿ ಪಾಟೀಲ ಅವರ ಶಾಸಕತ್ವವನ್ನು ಈ ಕೂಡಲೇ ರದ್ದುಗೊಳಿಸಿ, ಅವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಗದಗ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಕೆ.ಎಸ್. ಕೊಡತಗೇರಿ ಹೇಳಿದರು.
ಅವರು ಈಚೆಗೆ ಪಟ್ಟಣದಲ್ಲಿ ಕರವೇ ಹಮ್ಮಿಕೊಡಿದ್ದ ಎಂಇಎಸ್ ಶಾಸಕರ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಎಂಇಎಸ್‌ನವರು ಕರ್ನಾಟಕದ ಬಗ್ಗೆ ಪದೇ ಪದೇ ಈ ರೀತಿ ಅವಹೇಳನಕಾರಿಯಾದ ಹೇಳಿಕೆ ನೀಡುತ್ತಿದ್ದು, ಇದು ಕನ್ನಡಿಗರನ್ನು ರೊಚ್ಚಿಗೆಬ್ಬಿಸಿದೆ. ಕನ್ನಡಿಗರ ಸಹನೆ, ತಾಳ್ಮೆಯನ್ನು ಪರೀಕ್ಷಿಸುವುದನ್ನು ನಿಲ್ಲಿಸಬೇಕೆಂದು ಎಚ್ಚರಿಸಿದರು. ಪುರಸಭೆ ಸದಸ್ಯ ಶಂಕರಗೌಡ ಪಾಟೀಲ ಮಾತನಾಡಿ, ಇಂತಹ ಉಢಾಪೆ ಮಾತುಗಳನ್ನಾಡುವ ಮೂಲಕ ರಾಜ್ಯದ ಜನತೆಯ ಸ್ವಾಸ್ಥ್ಯ ಹಾಳು ಮಾಡುತ್ತಿರುವ ಇಂತಹ ಶಾಸಕರ ವಿರುದ್ಧ ಸರ್ಕಾರ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದರು.
ಕೋಟೆ ಭಾಗದ ಹನುಮಂತ ದೇವರ ದೇವಸ್ಥಾನದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಭಜಾರದ ಮಾರ್ಗವಾಗಿ ಹೊಸ ಬಸ್ ನಿಲ್ದಾಣಕ್ಕೆ ತೆರಳಿ ಅಲ್ಲಿ ಎಂಇಎಸ್ ಶಾಸಕ ಸಂಭಾಜಿ ಪಾಟೀಲ ಪ್ರತಿಕೃತಿ ದಹನ ಮಾಡಲಾಯಿತು. ನಂತರ ಅಲ್ಲಿಂದ ಬೃಂದಾವನ ವೃತ್ತದ ಮೂಲಕ ಕೊಪ್ಪಳ ವೃತ್ತಕ್ಕೆ ಆಗಮಿಸಿ ತಹಸೀಲ್ದಾರ್ ಕಚೇರಿಗೆ ತೆರಳಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ತಾಲೂಕು ಕರವೇ ಅಧ್ಯಕ್ಷ ಶಿವಾನಂದ ಬಾರಕೇರ, ಮಂಜುನಾಥ ಕಾಗನೂರ, ಪರಶು ರಾಮೇನಹಳ್ಳಿ, ಮಹಾದೇವ್ ಡೊಣ್ಣಿ, ಅಲ್ಲಾಭಕ್ಷಿ ಅಳವಂಡಿ, ಸಂತೋಷ ಹಿರೇಮನಿ, ಪರಶುರಾಮ ಚಿಕ್ಕನ್ನವರ, ಮಹೇಶ ವಡ್ಡರ, ಬಸವರಾಜ ತಳವಾರ, ಕಿಟ್ಟಪ್ಪ ದೊಡ್ಡಮನಿ, ಸ್ವಾಮಿ ಸತ್ಯಮ್ಮನವರ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

