ಸರ್ವರ ಹಿತ ಕಾಪಾಡುವುದೇ ಸರ್ಕಾರದ ಉದ್ದೇಶ
ಗದಗ: ಅಧಿಕಾರ ವಿಕೇಂದ್ರೀಕರಣ ಪಂಚಾಯತ್ ರಾಜ್ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಸರ್ವರ ಹಿತಾಸಕ್ತಿ ಕಾಪಾಡುವುದೇ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಶಾಸಕ ಬಿ.ಆರ್. ಯಾವಗಲ್ಲ ಹೇಳಿದರು.
ಈಚೆಗೆ ತಾಲೂಕಿನ ಚಿಕ್ಕಹಂದಿಗೋಳ ಗ್ರಾಮದ ಕೆ.ಎಚ್. ಪಾಟೀಲ ವಸತಿ ಬಡಾವಣೆಯ 157 ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಿ ಅವರು ಮಾತನಾಡಿದರು. ಗ್ರಾಮದಲ್ಲಿ ವಿವಿಧ ಯೋಜನೆಗಳು ಜಾರಿಗೊಳ್ಳಬೇಕಾದರೆ ಗ್ರಾಮಸ್ಥರು ಸದಸ್ಯರು ತಮ್ಮ ಪಾಲಿನ ಕರ್ತವ್ಯ ಸರಿಯಾಗಿ ನಿರ್ವಹಿಸಬೇಕು ಹಾಗೂ ಮನೆಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಂಡು ಸ್ವಚ್ಛ ಪರಿಸರ ಕಾಪಾಡಬೇಕು. ಇಂದು ಕಾಲ ಬದಲಾಗುತ್ತಿದ್ದು, ಮನೆ ಮರ್ಯಾದೆ ಬೀದಿ ಪಾಲು ಆಗುವುದನ್ನು ತಪ್ಪಿಸಲು ಶೌಚಾಲಯ, ಸ್ನಾನ ಗೃಹಗಳನ್ನು ನಿರ್ಮಿಸಿಕೊಳ್ಳಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಹಲವಾರು ವಿಧದಲ್ಲಿ ಇದಕ್ಕೆ ಅನುಕೂಲ ಕಲ್ಪಿಸಲಾಗಿದೆ ಎಂದರು. ಶೌಚಾಲಯಗಳ ನಿರ್ಮಾಣ ಹಾಗೂ ಅವುಗಳನ್ನು ಸ್ವಚ್ಛವಾಗಿಟ್ಟುಕೊಂಡಲ್ಲಿ ಮನೆ, ಗ್ರಾಮ ಸ್ವಚ್ಛವಾಗಿರಲು ಸಾಧ್ಯ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಚಿಕ್ಕಹಂದಿಗೋಳ ಗ್ರಾಪಂಗೆ ರು. 2.70 ಕೋಟಿಯ ಕ್ರಿಯಾಯೋಜನೆ ರೂಪಿಸಲಾಗಿದೆ. ಇದರಡಿ ಸಣ್ಣ ಹಿಡುವಳಿದಾರರು ತಮ್ಮ ಹೊಲಗಳ ಸುಧಾರಣೆ, ರಸ್ತೆ, ಶಾಲಾ ಕಾಂಪೌಂಡ್, ಆಟದ ಮೈದಾನ ಇತ್ಯಾದಿಗಳನ್ನು ನಿರ್ಮಿಸಿಕೊಳ್ಳಲು ಸಾಧ್ಯವಿದೆ.
ಅದನ್ನು ಪ್ರಾಮಾಣಿಕ ರೀತಿಯಲ್ಲಿ ಗ್ರಾಮಸ್ಥರು ಹಾಗೂ ಗ್ರಾಪಂ ಅಧಿಕಾರಿ ಹಾಗೂ ಚುನಾಯಿತ ಪ್ರತಿನಿಧಿಗಳು ನಮ್ಮದೇ ಊರು ನಮ್ಮದೇ ಕೆಲಸ ಎಂಬ ಭಾವನೆಯಿಂದ ಕಾರ್ಯನಿರ್ವಹಿಸಲು ಕರೆ ನೀಡಿದರು. ಜಿಪಂ ಯೋಜನಾಧಿಕಾರಿ ಟಿ. ದಿನೇಶ ಪ್ರಾಸ್ತಾವಿಕ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಮುಮ್ತಾಜ್ ನದಾಫ್ ಅಧ್ಯಕ್ಷತೆ ವಹಿಸಿದ್ದರು. ಗದಗ ತಾಪಂ ಅಧ್ಯಕ್ಷ ಹನುಮಂತಪ್ಪ ಇಂಗಳಹಳ್ಳಿ, ಉಪಾಧ್ಯಕ್ಷೆ ಹರಿಕಾರ, ಗ್ರಾಪಂ ಸದಸ್ಯ ಶಿವಪ್ಪ ಚರ್ಚುಹಾಳ, ಸುರೇಶ ಶ್ಯಾಗೋಟಿ, ಶಾಂತವ್ವ ಮ್ಯಾದಾರ, ಶ್ರೀನಿವಾಸ ದ್ಯಾವನೂರು, ಗ್ರಾಪಂ ಯೋಜನಾಭಿವೃದ್ಧಿ ಅಧಿಕಾರಿ ಕಲ್ಮನಿ ಮುಂತಾದವರು ಉಪಸ್ಥಿತರಿದ್ದರು. ಗದಗ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಿ. ರೇವಣ್ಣ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

