ಬಿಜೆಪಿ ಮಹಿಳಾ ಮೋರ್ಚಾ ಬಲಪಡಿಸಲು ಕರೆ
ಕನ್ನಡಪ್ರಭ ವಾರ್ತೆ, ಗದಗ, ಡಿ. 5
ಜಿಲ್ಲೆಯಲ್ಲಿ ಮಹಿಳಾ ಮೋರ್ಚಾ ಸಂಘಟನೆ ಇನ್ನಷ್ಟು ಬಲಪಡಿಸಿ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಮಾಡುವಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಶ್ರಮಿಸಬೇಕೆಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಸಂಘಟನಾ ಕಾರ್ಯದರ್ಶಿ ಗೀತಾ ಧನಂಜಯ ಕಾರ್ಯಕರ್ತೆಯರಿಗೆ ಕರೆ ನೀಡಿದರು.
ಅವರು ಈಚೆಗೆ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಜರುಗಿದ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದರು.
ಮಾಜಿ ಶಾಸಕಿ ಸೀಮಾ ಮಸೂತಿ ಮಾತನಾಡಿ, ಕೇಂದ್ರದ ಯುಪಿಎ ಸರ್ಕಾರದ ಹಾಗೂ ರಾಜ್ಯ ಸರ್ಕಾರದ ಹಲವಾರು ವೈಫಲ್ಯಗಳನ್ನು ಮತದಾರರಿಗೆ ಮುಟ್ಟಿಸಲು ಕಾರ್ಯಕರ್ತರು ಕಾರ್ಯಕ್ರಮ ಹಮ್ಮಿಕೊಳ್ಳಲು ಸಲಹೆ ನೀಡಿದರು. ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಕಳಕಪ್ಪ ಬಂಡಿ ಮಾತನಾಡಿ, ಯುವಮತದಾರರ ಹೆಸರನ್ನು ಮತದಾರರ ಯಾದಿಯಲ್ಲಿ ಸೇರಿಸಲು ಕಾರ್ಯಕರ್ತರು ಶ್ರಮಿಸುವ ಮೂಲಕ ಕೇಂದ್ರದಲ್ಲಿ ನರೇಂದ್ರ ಮೋದಿಯವರನ್ನು ಪ್ರಧಾನಮಂತ್ರಿಯನ್ನಾಗಿ ನೋಡಬಹುದು ಎಂದರು. ಮಹಿಳಾ ಮೋರ್ಚಾದ ಅಧ್ಯಕ್ಷೆ ಜಯಶ್ರೀ ಉಗಲಾಟದ ಮಾತನಾಡಿ, ಸಮಾಜದಲ್ಲಿ ಎಲ್ಲ ಬಡವರಿಗೆ ಶಾದಿಭಾಗ್ಯ ಯೋಜನೆಯನ್ನು ವಿಸ್ತರಿಸಬೇಕು. ಮಹಿಳೆಯರಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುಖನ್ಯಾ ಸಾಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಂದನಾ ವರ್ಣೇಕರ, ಗಂಗಾ ಪಾಟೀಲ, ಸುಶೀಲಾ ಶೀರಿ, ಪಾರ್ವತಿ ಮರಿಗೌಡ್ರ, ಚಂಬವ್ವ ಪಾಟೀಲ, ನಿರ್ಮಲಾ ಜಿಗಳೂರ, ಶಾರದಾ ಸಜ್ಜನರ, ಅಶ್ವಿನಿ ಜಗತಾಪ, ಎಂ.ಎಸ್.ಕರಿಗೌಡ್ರ, ಎಂ.ಎಂ.ಹಿರೇಮಠ, ತೋಟೋಸಾ ಭಾಂಡಗೆ, ಈಶಣ್ಣ ಮುನವಳ್ಳಿ, ರಾಜು ಹೂಗಾರ, ಬಸವರಾಜ ಶೀರಿ, ಕವಿತಾ ಜಾಲಿಹಾಳ, ಕಮಲಾ ಪೂಜಾರ, ಶೈಲಾ ನರಗುಂದ ಪಾಲ್ಗೊಂಡಿದ್ದರು. ಕಮಲಾಕ್ಷಿ ಗೊಂದಿ ಸ್ವಾಗತಿಸಿದರು. ಸುಕನ್ಯಾ ಸಾಲಿ ನಿರೂಪಿಸಿದರು. ದೂಪಾ ಗೊಯಲ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

