ಜನಪದ ಕಲೆ ರಕ್ಷಿಸಿ: ಸಂಕಣ್ಣವರ
ರೋಣ: ಪಾಶ್ಚಿಮಾತ್ಯ ವ್ಯಾಮೋಹಕ್ಕೆ ಒಳಗಾಗಿ ನಾವಿಂದು ಮೂಲ ಜನಪದ ಕಲೆ ಮರೆಯುತ್ತಿದ್ದೇವೆ. ಯುವ ಜನಾಂಗ ಮೂಲ ಜನಪದ ರಕ್ಷಣೆಗೆ ಮುಂದಾಗಬೇಕು ಎಂದು ರಾಜ್ಯ ಪ್ರಶಸ್ತಿ ವಿಜೇತ ಜನಪದ ಕಲಾವಿದ ಶಂಕ್ರಣ್ಣ ಸಂಕಣ್ಣವರ ಹೇಳಿದರು.
ಅವರು ಈಚೆಗೆ ಪಟ್ಟಣದ ರಾಜೀವಗಾಂಧಿ ಶಿಕ್ಷಣ ಸಂಸ್ಥೆಯ ವೀರರಾಣಿ ಕಿತ್ತೂರ ಚನ್ನಮ್ಮ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಗದಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗ, ತಾಲೂಕು ಜನಪದ ಸಾಹಿತ್ಯ ಪರಿಷತ್ ಮತ್ತು ವೀರಣ್ಣ ಪಾಗಾದ ಕಲಾ ತಂಡದ ಸಂಯುಕ್ತ ಆಶ್ರಯದಲ್ಲಿ ಕಾಲೇಜು ವಿದ್ಯಾರ್ಥಿಳಿಗಾಗಿ ಏರ್ಪಡಿಸಿದ್ದ ಜನಪದ ರಸಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಉಪನ್ಯಾಸಕ ಎಂ.ವೈ. ಕಿತ್ತಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಎ.ಎಸ್. ಖತೀಬ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಶಿದ್ದಪ್ಪ ಪಿ. ಜನಪದ ನಡೆದು ಬಂದ ದಾರಿ ಕುರಿತು ಉಪನ್ಯಾಸ ನೀಡಿದರು.
ಎಸ್.ಕೆ. ವೀರಕ್ತಮಠ, ವೀರಪ್ಪ ಪಾಗಾದ, ಮಾರುತಿ ಚಂದ್ರಗಿರಿ, ರಾಚಯ್ಯ ಮುಧೋಳಮಠ, ಬಸವರಾಜ ನಾಲವಾಡದ ಸೇರಿದಂತೆ ಮುಂತಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

