ಗದಗ

ವಿಕಲಚೇತನರು ಅಭಿವೃದ್ಧಿ ಹೊಂದಲಿ

Published On :

ಗದಗ: ವಿಕಲಚೇತನರು ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡೆದು ಆರ್ಥಿಕವಾಗಿ ಅಭಿವೃದ್ಧಿ ಹೊಂದುವಂತೆ ಗದಗನ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕುಲಕರ್ಣಿ ಅಂಬಾದಾಸ ಹೇಳಿದರು.
ಅವರು ಶುಕ್ರವಾರ ಬೆಟಗೇರಿಯ ಸಿಎಸ್‌ಐ ಆಸ್ಪತ್ರೆಯ ಪುನರ್ ವಸತಿ ಕೇಂದ್ರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ವಿಕಲಚೇತನ ಮಕ್ಕಳ ಪುನರ್ ವಸತಿ ಕೇಂದ್ರ, ಸಿಎಸ್‌ಐ ಬಾಶೆಲ್ ಮಿಶನ್ ಆಸ್ಪತ್ರೆ, ಬೆಟಗೇರಿ-ಗದಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ವಿಕಲಚೇತನ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬ ಮನುಷ್ಯನಿಗೂ ತಾನು ಎಲ್ಲ ರೀತಿಯಿಂದಲೂ ಆರೋಗ್ಯವಂತನಾಗಿರಬೇಕು ಎಂಬ ಆಸೆ ಇರುತ್ತದೆ. ಆದರೆ ಕೆಲವೊಂದು ಕಾರಣಗಳಿಂದ ಕೆಲವು ಮಕ್ಕಳು ವಿಕಲಚೇತನರಾಗಿ ಜನಿಸಿದರೆ, ಕೆಲವು ಸಂದರ್ಭದಲ್ಲಿ ಅಪಘಾತಗಳಿಂದ ಅಂಗ ಊನವಾಗಿ ವಿಕಲಚೇತನರಾಗುತ್ತಿದ್ದಾರೆ. ಸರ್ಕಾರದ ಯೋಜನೆಗಳಿಂದ ಹಾಗೂ ಜಾಗೃತಿ ಕಾರ್ಯಕ್ರಮಗಳಿಂದ ಈಗ ವಿಕಲಚೇತನ ಮಕ್ಕಳ ಜನನದ ಪ್ರಮಾಣ ಕಡಿಮೆಯಾಗಿದೆ ಹಾಗೂ ವಿಕಲಚೇತನರು ತಮ್ಮ ಕಾಲಮೇಲೆ ತಾವು ನಿಲ್ಲುವ ಮೂಲಕ ಶಿಕ್ಷಣ ಬದುಕಿನಲ್ಲಿ ವಿಕಲಚೇತನ ಅಡ್ಡಿಯಲ್ಲ ಎಂಬುವುದನ್ನು ಜಗತ್ತಿಗೆ ತೋರಿಸಿಕೊಡಬೇಕು. ನಮ್ಮ ದೇಶದಲ್ಲಿ ವಿಕಲಚೇತನರು ಅತ್ಯುತ್ತಮ ಶಿಕ್ಷಣ ಕಲಿತು ಒಳ್ಳೆಯ ಹುದ್ದೆಯಲ್ಲಿದ್ದಾರೆ ಅವರ ಸಾಧನೆ ನಿಮಗೆ ದಾರಿದೀಪವಾಗಲಿ ಎಂದರು. ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಹೊಸಮನಿ ಪುಂಡಲೀಕ, ಉಪನ್ಯಾಸಕರಾಗಿ ಆಗಮಿಸಿದ್ದ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿಕಲಚೇತನ ಅಧಿಕಾರಿ ಡಿ.ಎನ್. ಮೂಲಿಮನಿ ಹಾಗೂ ಅಧ್ಯಕ್ಷತೆಯನ್ನು ವಹಿಸಿದ್ದ ಸಿಎಸ್‌ಐ ಆಸ್ಪತ್ರೆಯ ಹಾಗೂ ಪುನರ್ ವಸತಿ ಕೇಂದ್ರದ ಮುಖ್ಯಸ್ಥರು ಹಾಗೂ ಅಧೀಕ್ಷಕ ಡಾ. ಸಿ. ಸೋಲೋಮನ್ ಮಾತನಾಡಿದರು. ಜಿಲ್ಲಾ ವಕೀಲರ ಸಂಘದ ಖಜಾಂಚಿ ಎಂ.ಎ. ಸಂಗನಾಳ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ಸಾವಿತ್ರಿ ಕಬಾಡಿ ಉಪಸ್ಥಿತರಿದ್ದರು. ಎಸ್ತೇರಾ ರಜಿನಾ ಸ್ವಾಗತಿಸಿದರು. ಬಿ.ಎಂ. ಕುಕನೂರ ನಿರೂಪಿಸಿ, ವಂದಿಸಿದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.